ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ: ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅಸಮಾಧಾನ

ksrtc-tumkur-bus-stand-slow-progress

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ: ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅಸಮಾಧಾನ



ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ:
ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅಸಮಾಧಾನ


ತುಮಕೂರು: ಸ್ಮಾರ್ಟ್ಸಿಟಿ ಅಡಿಯಲ್ಲಿ ಕೆಎಸ್‌ಆರ್‌ಟಿಸಿಯಿಂದ ನಿರ್ಮಿಸುತ್ತಿರುವ ಸುಸಜ್ಜಿತ ಬಸ್‌ನಿಲ್ದಾಣದ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರು ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುಂತೆ ಗುತ್ತಿಗೆದಾರರು ಹಾಗೂ ಎಂಜನಿಯರ್‌ಗಳಿಗೆ ಖಡಕ್ ಸೂಚನೆ ನೀಡಿದರು.


ನಗರದ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ಕಾಮಗಾರಿ ವಿಳಂಬವಾಗಿದ್ದು ನಿರೀಕ್ಷಿತ ವೇಗದಲ್ಲಿ ಕಾಮಗಾರಿ ನಡೆಯದೇ ಇರುವ ಬಗ್ಗೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂqರು. ತಳಪಾಯದ ಹಂತದಲ್ಲಿ ನೀರು ಬರುತ್ತಿರುವುದರ ಬಗ್ಗೆ ಪರ್ಯಾಯ ಕಂಡುಕೊಳ್ಳಬೇಕು ಹಾಗೂ ತಡೆಗೋಡೆ ನಿರ್ಮಾಣ ಮಾಡುವಂತೆ ಸೂಚಿಸಿದರು.


ಕಾಮಗಾರಿಯ ಪ್ರಗತಿ ನಿರೀಕ್ಷಿತವಾಗಿಲ್ಲ, ಶೇ. 33ರಷ್ಟು ಪ್ರಗತಿ ಆಗಿದೆ ಅಷ್ಟೇ. ಕೊರೋನಾ ಕಾರಣದಿಂದ ವಿಳಂಬವಾಗಿದೆ. ಆದರೆ ಮೂರನೇ ಅಲೆ ಬರುವ ಲಕ್ಷಣ ಇದ್ದರೂ ಸಹ ಕಾಮಗಾರಿ ಮುಗಿಯುತ್ತಿಲ್ಲ. ಕೊರೋನಾ ಸಂದರ್ಭದಲ್ಲಿಯೂ ಕಾರ್ಮಿಕರನ್ನು ಒಗ್ಗೂಡಿಸಿಕೊಂಡು ಕೆಲಸ ನಿರ್ವಹಿಸಿದರೆ ಮಾತ್ರ ಡಿಸೆಂಬರ್ ವೇಳೆಗೆ ಮೊದಲನೇ ಹಂತದ ಕಾಮಗಾರಿ ಮುಗಿಯಲಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.


ಕಾಮಗಾರಿಯ ತಾಂತ್ರಿಕ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳುವಂತೆ ಸೂಚಿಸಿದ ಅವರು, ಕಾಮಗಾರಿ ವೀಕ್ಷಣೆಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ಭೇಟಿ ನೀಡುವುದಲ್ಲದೇ, ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ ಅವರು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಹಗಲು ರಾತ್ರಿ ಕಾರ್ಯನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.