ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕುಚ್ಚಂಗಿ ಪ್ರಸನ್ನ ನೇಮಕ

ಸಂಪಾದಕರ ಸಂಘದ ಕಾರ್ಯಕಾರಿ ಸಮಿತಿಗೆ ಸದಸ್ಯ ರಾಗಿ  ನೇಮಕ

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕುಚ್ಚಂಗಿ ಪ್ರಸನ್ನ ನೇಮಕ

ಬೆಂಗಳೂರು : ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ  ರಾಜ್ಯ ಕಾರ್ಯಕಾರಿ ಸಮಿತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ  ತುಮಕೂರು ಜಿಲ್ಲೆಯಿಂದ ಪ್ರಕಟವಾಗಿ ಪ್ರಸಾರವಾಗುತ್ತಿರುವ " ಬೆವರ ಹನಿ"  ಪ್ರಾದೇಶಿಕ ಕನ್ನಡ ದಿನಪತ್ರಿಕೆಯ ಸಂಪಾದಕರಾದ ಕುಚ್ಚಂಗಿ ಪ್ರಸನ್ನ ಅವರನ್ನು ನೇಮಕ ಮಾಡಿ ಜನವರಿ 23 ರಂದು  ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಆದೇಶ ಹೊರಡಿಸಿದ್ದಾರೆ.

 ಸಂಪಾದಕರ ಸಂಘದ ಕಾರ್ಯಕಾರಿ ಸಮಿತಿಗೆ ಸದಸ್ಯ ರಾಗಿ  ನೇಮಕವಾದ ಸಂಗತಿ ತಿಳಿದು ಸನ್ಮಾನ್ಯ ಸಹಕಾರ ಸಚಿವರಾದ ಶ್ರೀ ಕೆ.ಎನ್. ರಾಜಣ್ಣನವರು ಈ ದಿನ ಬೆಳಿಗ್ಗೆ ಅವರ ನಿವಾಸದಲ್ಲಿ  ಕುಚ್ಚಂಗಿ ಪ್ರಸನ್ನ ರವರನ್ನು ಅಭಿನಂದಿಸಿದರು,


ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಾ ಕುಮಾರ್ ಹಾಗೂ ಪದಾಧಿಕಾರಿಗಳು ಜೊತೆಯಲ್ಲಿ ದ್ದಾರೆ.