ವಿಧಾನ ಪರಿಷತ್ ಚುನಾವಣೆ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ  

ವಿಧಾನ ಪರಿಷತ್ ಚುನಾವಣೆ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ  


ವಿಧಾನ ಪರಿಷತ್ ಚುನಾವಣೆ:
ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ  


ತುಮಕೂರು: ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣಾ ಬಹಿರಂಗ ಪ್ರಚಾರವನ್ನು ನಿಯಂತ್ರಿಸಲು, ಚುನಾವಣೆಯನ್ನು ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಸೆಂಬರ್ 7ರ  ಸಂಜೆ 4 ರಿಂದ ಡಿ. 10ರ ಸಂಜೆ 4 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್. ಪಾಟೀಲ ಆದೇಶ ಹೊರಡಿಸಿದ್ದಾರೆ. 


ನಿಷೇಧಾಜ್ಞೆಯ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ.  ಈ ಅವಧಿಯಲ್ಲಿ ಯಾವುದೇ ಸ್ಫೋಟಕ ವಸ್ತು ಮತ್ತು ಮಾರಕಾಸ್ತçಗಳನ್ನು ಕೊಂಡೊಯ್ಯುವುದಾಗಲಿ ಅಥವಾ ಮಾರಕಾಸ್ತçಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ.  ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮೆರವಣಿಗೆ ಮಾಡಬಾರದು. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿ ಪತ್ರಗಳನ್ನು ಪ್ರಕಟಿಸುವಂತಿಲ್ಲ.  ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುAಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು. ಸಾರ್ವಜನಿಕರ ಪ್ರಾಣ ಮತ್ತು ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸಬಾರದು. ನಿಷೇಧಾಜ್ಞೆ ಅವಧಿಯಲ್ಲಿ ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ, ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ. ಚುನಾವಣಾ ಆಯೋಗದ ಸ್ಪಷ್ಟೀಕರಣದಂತೆ ಮತದಾನದ ಹಿಂದಿನ 72 ಗಂಟೆಯ ಅವಧಿಯಲ್ಲಿ ಅಭ್ಯರ್ಥಿಯು ಮನೆ-ಮನೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡುವುದಕ್ಕೆ ವಿನಾಯಿತಿ ನೀಡಲಾಗಿದೆ. 


ಈ ನಿಷೇಧಾಜ್ಞೆಯು ಡಿಸೆಂಬರ್ 10ರಂದು ಬೆಳಿಗ್ಗೆ 8 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಜಿಲ್ಲಾ ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳಿಗೆ ಮತದಾನ ಮಾಡಲು ಬರುವವರಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ.


ಚುನಾವಣಾ ಕರ್ತವ್ಯದಲ್ಲಿ ಉದಾಸೀನ ಬೇಡ:
ವೀಕ್ಷಕರಿಗೆ ಡಾ. ರವಿಕುಮಾರ್ ಕಟ್ಟುನಿಟ್ಟಿನ ಸೂಚನೆ


ತುಮಕೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಉದಾಸೀನ ಬೇಡ ಎಂದು ಮುಖ್ಯ ಚುನಾವಣಾ ವೀಕ್ಷಕರಾದ ಡಾ. ರವಿಕುಮಾರ್ ಸುರಪುರ ಚುನಾವಣಾ ವೀಕ್ಷಕರಿಗೆ ಸೂಚನೆ ನೀಡಿದರು.


ನಗರದ ಗುಬ್ಬಿ ವೀರಣ್ಣ ರಂಗಮAದಿರದಲ್ಲಿ ಮಂಗಳವಾರ ಚುನಾವಣಾ ವೀಕ್ಷಕರಿಗಾಗಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯು ಎಂದಿನAತೆ ನಡೆಯುವ ಸಾರ್ವತ್ರಿಕ ಚುನಾವಣಾ ಕ್ರಮಕ್ಕಿಂತ ಭಿನ್ನವಾಗಿದ್ದು, ವೀಕ್ಷಕರು ಉದಾಸೀನ ಮಾಡುವಂತಿಲ್ಲ ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಚುನಾವಣೆ ಪ್ರಕ್ರಿಯೆಗಳು ನಿಯಮಾನುಸಾರ ನಡೆಯಬೇಕಿದ್ದು, ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಈಗಾಗಲೇ ಪ್ರತೀ ಮತದಾನ ಕೇಂದ್ರಕ್ಕೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಮತಗಟ್ಟೆ ಅಧಿಕಾರಿಗಳ ಸಮನ್ವಯ-ಸಹಕಾರದೊಂದಿಗೆ ಕರ್ತವ್ಯ ನಿರ್ವಹಿಸಿ ಎಂದು ಅವರು ತಿಳಿಸಿದರು.


ಮತದಾನದ ದಿನ ಮತಾಧಿಕಾರದ ಗೌಪ್ಯತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಸಾಂವಿಧಾನಿಕ ಕರ್ತವ್ಯವಾಗಿದ್ದು, ವೈಯಕ್ತಿಕ ಆಸಕ್ತಿಗಳಿಗೆ ಮನ್ನಣೆ ನೀಡುವಂತಿಲ್ಲ ಎಂದರಲ್ಲದೆ, ಅಂಧರು, ವಿಶೇಷ ಚೇತನರು, ಅಶಕ್ತರೊಂದಿಗೆ ಮತ ಚಲಾವಣೆಗೆ ಬರುವವರ ಕುರಿತ ಮಾಹಿತಿಯನ್ನು ಮೊದಲೇ ತಿಳಿಸಿರಬೇಕು. ಯಾವುದೇ ಅಹಿತಕರ ಘಟನೆ ನಡೆಯುವ ಮುನ್ಸೂಚನೆ ಸಿಕ್ಕ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸೂಚಿಸಿದರು.


ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಚುನಾವಣಾ ಸಂಬAಧ ನೇಮಕಗೊಂಡಿರುವ ಸಿಬ್ಬಂದಿಗಳು ಮತದಾನದ ದಿನ ಕಡ್ಡಾಯ ಹಾಜರಾತಿಯೊಂದಿಗೆ ಮತದಾನ ಕೇಂದ್ರಗಳಲ್ಲಿ ಪೂರ್ಣ ಸಮಯದವರೆಗೂ ಕರ್ತವ್ಯ ನಿರ್ವಹಿಸಬೇಕು. ಆಯಾ ತಾಲೂಕು ಸಿಬ್ಬಂದಿಗಳಿಗೆ ಆಯಾ ತಾಲೂಕಿನಲ್ಲೇ ಕರ್ತವ್ಯಕ್ಕೆ ನೇಮಕ ಮಾಡಲಾಗಿದ್ದು, ಯಾವುದೇ ಗೊಂದಲಗಳಿಗೆ, ಪಕ್ಷಪಾತಕ್ಕೆ ಎಡೆ ಮಾಡಿಕೊಡದೆ ಪಾರದರ್ಶಕವಾಗಿ ಮತದಾನ ನಡೆಯುವಂತೆ ನೋಡಿಕೊಳ್ಳಬೇಕು. ತಪ್ಪಿದಲ್ಲಿ ಚುನಾವಣಾ ನೀತಿ-ನಿಯಮಾನುಸಾರ ಶಿಸ್ತು ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಕಿವಿಮಾತು ಹೇಳಿದರು.


ತರಬೇತಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆ ಪ್ರಾಂಶುಪಾಲ ಮಂಜುನಾಥ್ ಹಾಜರಿದ್ದರು.