ಡಾ. ಅಂಬೇಡ್ಕರ್ ಭಾವಚಿತ್ರ ತೆರವು ಘಟನೆ: ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವರ್ಗಾವಣೆ

ಡಾ. ಅಂಬೇಡ್ಕರ್ ಭಾವಚಿತ್ರ ತೆರವು ಘಟನೆ: ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವರ್ಗಾವಣೆ

ಡಾ. ಅಂಬೇಡ್ಕರ್ ಭಾವಚಿತ್ರ ತೆರವು ಘಟನೆ:
ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವರ್ಗಾವಣೆ


ರಾಯಚೂರು: ಗಣರಾಜ್ಯೋತ್ಸವ ದಿನದಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಅವಮಾನ ಮಾಡಿದ ಘಟನೆಗೆ ಸಂಬಂಧಿಸಿದತೆ ಇಲ್ಲಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ.


ಮಲ್ಲಿಕಾರ್ಜುನ ಗೌಡ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ರಾಜ್ಯ ಹೈಕೋರ್ಟ್ ಆದೇಶ ನೀಡಿದ್ದು, ಬೆಂಗಳೂರಿನಲ್ಲಿ ಓಓಡಿ ಅಧ್ಯಕ್ಷರೆಂದು ಸ್ಥಳ ನಿಯುಕ್ತಿಗೊಳಿಸಿದೆ.


ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ತೆರವುಗೊಳಿಸಿದ ಘಟನೆ ನಡೆದ ದಿನದಿಂದ ನ್ಯಾಯಮೂರ್ತಿಗಳ ವಜಾ, ಗಡಿಪಾರು ಸೇರಿದಂತೆ ಹಲವು ಕಠಿಣ ಕ್ರಮಕ್ಕೆ ಒತ್ತಾಯಿಸಿ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.


ಇದೇ ವಿಷಯಕ್ಕೆ ಸಂಬಂಧಿಸಿದAತೆ ಇಂದು, ಫೆಬ್ರವರಿ 19 ರಂದು ದಲಿತ ಸಂಘಟನೆಗಳು ವಿಧಾನ ಸೌಧ ಚಲೋ ಹೋರಾಟ ಹಮ್ಮಿಕೊಂಡಿದ್ದವು. ಇದೀಗ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದ್ದು, ಹೋರಾಟ ಮುಂದುವರಿಸಬೇದೋ, ಕೈಬಿಡಬೇಕೋ ಎಂಬ ಬಗ್ಗೆ ಚರ್ಚೆ ನಡೆಸಿದ ನಂತರ ತೀರ್ಮಾನಿಸಲಾಗುವುದು ಎಂದು ದಲಿತ ಸಂಘಟನೆಗಳ ಒಕ್ಕೂಟ ತಿಳಿಸಿದೆ.