ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ


ತಿಪಟೂರು : ಮುಖ್ಯಚುನಾವಣಾಧಿಕಾರಿಗಳ ನಿರ್ದೇಶನದ ಅನ್ವಯ 01 ಜನವರಿ 2022ಕ್ಕೆ 18 ವರ್ಷ ತುಂಬಿದ ಯುವಕ-ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಬಹುದಾಗಿದೆ ಎಂದು ತಹಶೀಲ್ದಾರ್ ಆರ್.ಜೆ.ಚಂದ್ರಶೇಖರ್ ತಿಳಿಸಿದರು.


ನಗರದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ತಾಲ್ಲೂಕು ಚುನಾವಣಾ ಶಾಖೆಯ ವತಿಯಿಂದ ಸುದ್ದಿಗೋಷ್ಠಿ ನಡೆಸಿದರು. 


ಜನವರಿ 1, 2022ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ ಮತದಾರರ ಸಂಕ್ಷಿಪ್ತ ಪರಿಷ್ಕರಣೆ-2022ರ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಮತ್ತು ತಾಲ್ಲೂಕು ಕಚೇರಿಗಳಲ್ಲಿ ಸಾರ್ವಜನಿಕ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ.  ಸಾರ್ವಜನಿಕರು ಡಿಸೆಂಬರ್ 8, 2021ರ ಒಳಗಾಗಿ ನಿಗದಿತ ನಮೂನೆಗಳಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಸಂಬAಧಿಸಿದ ಬಿ.ಎಲ್.ಓ.ಗಳನ್ನು ಸಂಪರ್ಕಿಸಿ ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಬಹುದು. ತಾಲ್ಲೂಕಿನಾದ್ಯಂತ ನ.11, ನ.21 ಮತ್ತು 28ರ ಭಾನುವಾರಗಳಂದು ವಿಶೇಷ ಆಂದೋಒಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ದಿನಾಂಕಗಳAದು ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಜರಿದ್ದು ನಿಗಧಿತ ನಮೂನೆಗಳಲ್ಲಿ ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,81,586 ಮತದಾರರಿದ್ದು ಅದರಲ್ಲಿ ಪುಇರುಷ ಮತದಾರರ ಸಂಖ್ಯೆ 88451 , ಮಹಿಳಾ ಮತದದಾರರ ಸಂಖ್ಯೆ 93133 ಹಾಗೂ ತೃತೀಯ ಲಿಂಗದವರು ಇಬ್ಬರಿದ್ದಾರೆ. ಈ ಬಾರಿ ಹೊಸದಾಗಿ ಸೇರ್ವಾಡೆಯಾಗುವ ಯುವಕ-ಯುವತಿಯರು ಆನ್‌ಲೈನ್ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ.


ತೃತೀಯ ಲಿಂಗದವರನ್ನು ಸೇರ್ಪಡೆಗೆ ವಿಶೇಷ ಒತ್ತು


ನಗರದಲ್ಲಿ ತೃತೀಯ ಲಿಂಗದವರ ಸಂಖ್ಯೆ ಹೆಚ್ಚಾಗಿದ್ದು, ಅವರಿಗೂ ಮತದಾನ ಮಾಡಲು ಪ್ರಜಾಪ್ರಭುತ್ವದಲ್ಲಿ ಅವಕಾಶ ಕಲ್ಪಿಸಿದ್ದು ಅವರ ಮನವೊಲಿಕೆ ಮಾಡಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು.
ನಗರಸಭೆಯ ಪೌರಾಯುಕ್ತ ಉಮಾಕಾಂತ್ ಇದ್ದರು.