ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು

medical college

ಜಿಲ್ಲೆಗೆ  ಸರ್ಕಾರಿ ವೈದ್ಯಕೀಯ ಕಾಲೇಜು
ಜಿಲ್ಲೆಗೆ  ಸರ್ಕಾರಿ ವೈದ್ಯಕೀಯ ಕಾಲೇಜು


ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು 


ತುಮಕೂರು ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವ ಭರವಸೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ದೇಶಿತ ಕಾಲೇಜನ್ನು ಜಿಲ್ಲಾ  ಕೇಂದ್ರದಿAದ ಪ್ರಾರಂಭಿಸುವ ಇಂಗಿತ ವ್ಯಕ್ತಪಡಿಸಿದರು.
ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿಕೊಡಬೇಕೆಂಬ ಬೇಡಿಕೆಯನ್ನಿಟ್ಟಿದ್ದಾರೆ. ಈ ಸಂಬAಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಮೆಡಿಕಲ್ ಕಾಲೇಜು ಮಂಜೂರು ಮಾಡಲು ಆದ್ಯತೆ ನೀಡಲಾಗುವುದು. ಜಿಲ್ಲಾ ಕೆಂದ್ರದಲ್ಲಿ ಈಗಾಗಲೇ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳಿವೆ ಇದೀಗ ಮತ್ತೊಂದು ಕಾಲೇಜು ಆರಂಭಕ್ಕೆ (ಸಿದ್ದಗಂಗಾ ಶಿಕ್ಷಣ ಸಂಸ್ಥೆಗೆ) ಒಪ್ಪಿಗೆ ನೀಡುತ್ತಿದೇನೆ. ಹೀಗಾಗಿ ಜಿಲ್ಲಾ ಕೇಂದ್ರದಿAದ ಹೊರಗೆ ತರಲಾಗುವುದು ಎಂದರು.ನಗರಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆ 

ಜಯದೇವ ಹೃದಯ ಆರೋಗ್ಯ ಸಂಸ್ಥೆಯನ್ನು ಎಲ್ಲ ಜಿಲ್ಲೆಗಳಲ್ಲಿ ಸ್ಥಾಪಿಸಲು ಚಿಂತನೆ ಮಾಡಲಾಗುತ್ತಿದ್ದು , ಮುಂದಿನ ದಿನಗಳಲ್ಲಿ ತುಮಕೂರಿನಲ್ಲ್ಲೂ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪಿಸಲು ಅಗತ್ಯ  ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಜಿಲ್ಲಾಡಳಿತಕ್ಕೆ ಸೂಚಿಸಿದರು.

ಭಾನುವಾರವೂ ಲಸಿಕೆ: ಮುಖ್ಯ ಮಂತ್ರಿ


ಮುಖ್ಯಮAತ್ರಿಗಳು, ಭಾನುವಾರವೂ ಕೋವಿಡ್ ಲಸಿಕೆ ನೀಡಬೇಕೆಂಬ ಬೇಡಿಕೆಯಿದ್ದು ಈ ಹಿನ್ನೆಲೆಯಲ್ಲಿ ಚಿಂತನೆ ನಡೆಸಲಾಗುತ್ತಿದೆ. ರಜಾ ದಿನವಾದ ಭಾನುವಾರ ಲಸಿಕೆ ನೀಡುವ ನಿರ್ಣಯ ಕೈಗೊಂಡರೆ ಹೆಚ್ಚು ಜನರಿಗೆ ಲಸಿಕೆ ವಿತರಿಸಲು ಸಾಧ್ಯವಾಗುತ್ತದೆ. ಹಾಗಾಗಿ ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.

ರಾಜ್ಯಕ್ಕೆ ಇನ್ನಷ್ಟು ಆರೋಗ್ಯ ಕೇಂದ್ರಗಳು: ಸಿಎಂ


ನಗರದಲ್ಲಿ ಕ್ಯಾನ್ಸರ್, ತಾಯಿ-ಮಗು ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ
ತುಮಕೂರು: ನಾಡಿನ ಜನತೆಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಹೆಚ್ಚು ಆರೋಗ್ಯ ಸೇವಾ ಕೇಂದ್ರಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಆರೋಗ್ಯ ಅಭಿಯಾನ, ಜಿಲ್ಲಾಸ್ಪತ್ರೆ ಹಾಗೂ ಬೆಂಗಳೂರು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಶನಿವಾರ  ನೂತನ ನೂರು ಹಾಸಿಗೆಗಳುಳ್ಳ ಕ್ಯಾನ್ಸರ್ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಶೈಕ್ಷಣಿಕ, ಸಾಂಸ್ಕೃತಿಕ, ವಾಣಿಜ್ಯ ಹಾಗೂ ಕೈಗಾರಿಕಾ ವಲಯದಲ್ಲಿ ಬೆಂಗಳೂರಿಗೆ ಪರ್ಯಾಯವಾಗಿ ವೇಗವಾಗಿ ಬೆಳೆಯುತ್ತಿರುವ ಜಿಲ್ಲೆ ತುಮಕೂರಿನಲ್ಲಿ ಹೆಚ್ಚು ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಬೆಂಗಳೂರು ಮೇಲಿರುವ ಒತ್ತಡವನ್ನು ತಗ್ಗಿಸುವ ಪ್ರಯತ್ನ ಮಾಡಲಾಗುವುದು. ಈ ನಿಟ್ಟಿನಲ್ಲಿಯೇ ಕ್ಯಾನ್ಸರ್ ಆಸ್ಪತ್ರೆ ಹಾಗೂ ಪ್ರತ್ಯೇಕವಾಗಿ ತಾಯಿ ಮತ್ತು ಮಕ್ಕಳ ಆಸ್ಪತೆ ್ರಯನ್ನು ತುಮಕೂರಿನಲ್ಲಿಯೇ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಕೋವಿಡ್ ೩ನೇ ಅಲೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಕ್ಕಳ ತಪಾಸಣೆ ನಡೆಸಲಾಗುತ್ತಿದೆ. ಮೂರನೇ ಅಲೆ ಎದುರಿಸಲು ಸರ್ಕಾರ ಸಕಲ ಸಜ್ಜಾಗಿದೆ. ಈ ತಪಾಸಣೆಯಲ್ಲಿ ಕಂಡುಬAದ ಅಪೌಷ್ಟಿಕ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಳ ಸೇರಿದಂತೆ ಇತರೆ ರೋಗಗಳಿಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ತುಮಕೂರಿನಲ್ಲಿಯೂ ಹತ್ತು ಹಾಸಿಗೆಗಳುಳ್ಳ  ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರ ನಿರ್ಮಾಣವಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದರು. 
ಜಿಲ್ಲಾಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿಗಳು ನಗರದ ಹೊಸ ಪ್ರವಾಸಿ ಮಂದಿರದ ೪೯೫ ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಮೊದಲ ಅಂತಸ್ತು ಕಟ್ಟಡ ನಿರ್ಮಾಣ ಹಾಗೂ ಪೀಠೋಪಕರಣಗಳನ್ನು ಅಳವಡಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.


ಭಾಗವಹಿಸಿದ್ದ ಗಣ್ಯರು


ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ, ಶಾಸಕ ರಾಜೇಶ್ ಗೌಡ, ಮೇಯರ್ ಬಿ.ಜಿ.ಕೃಷ್ಣಪ್ಪ, ಐಜಿಪಿ ಚಂದ್ರಶೇಖರ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಹಾಗೂ  ಅಧಿಕಾರಿಗಳು 

 
ಪಿಜಿ ಸೆಂಟರ್, ವೈದ್ಯಕೀಯ ಕಾಲೇಜು ಕೊಡಿ:ಜೆಸಿಎಂ 


ಮುಖ್ಯಮಂತ್ರಿಗಳು ಜಿಲ್ಲಾಸ್ಪತ್ರೆಗೆ ಒಂದು ಪಿಜಿ ಸೆಂಟರ್ ಹಾಗೂ ತಿಪಟೂರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು, ಹೃದ್ರೋಗ ಆಸ್ಪತ್ರೆ ನಿರ್ಮಾಣಕ್ಕೆ ಗಮನಹರಿಸಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಮುಖ್ಯಮಂತ್ರಿಯವರನ್ನು ವೇದಿಕೆಯಲ್ಲಿ ಆಗ್ರಹಿಸಿದರು.
ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಸುಮಾರು ಐದಾರು ಸಾವಿರ ಮಕ್ಕಳನ್ನು ಗುರುತಿಸಲಾಗಿದ್ದು, ಖನಿಜ ನಿಧಿ ಹಣದಿಂದ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಬಿ. ಜ್ಯೋತಿಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ೭೫ ವರ್ಷ ಪೂರೈಸಿರುವ ಜಿಲ್ಲಾಸ್ಪತ್ರೆ ಹಂತ ಹಂತವಾಗಿ ನಿರ್ಮಾಣವಾಗಿ ಉತ್ತಮ ಆರೋಗ್ಯ ಸೇವೆ ನೀಡುತ್ತಾ ಬಂದಿದೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣವಾಗುವುದರಿಂದ ಕ್ಯಾನ್ಸರ್ ರೋಗಿಗಳಿಗೆ ಜಿಲ್ಲೆಯಲ್ಲಿಯೇ ಉತ್ತಮ ಚಿಕಿತ್ಸೆ ಸಿಗಲಿದೆ. ಪ್ರತ್ಯೇಕ ಮಕ್ಕಳ ಹಾಗೂ ತಾಯಿಯ ಆರೈಕೆಗಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಹಾಗೂ ಅಪೌಷ್ಟಿಕ ಪುನಶ್ಚೇತನ ಕೇಂದ್ರ ನಿರ್ಮಾಣವಾಗಲಿದೆ. ಜಿಲ್ಲೆಯ ಅಭಿವೃದ್ಧಿಗಾಗಿ ಇನ್ನೂ  ಅನೇಕ ಕಾರ್ಯಕ್ರಮಗಳನ್ನು ಸರ್ಕಾರ ಅನುಷ್ಠಾನಗೊಳಿಸಲಿದೆ ಎಂದರು.