ಸರ್ಕಾರ ವಜಾ ಮಾಡಿ’’ ರಾಜ್ಯಪಾಲರಿಗೆ ಕಾಂಗ್ರೆಸ್ ಮೊರೆ

memorandum to governor from congress

ಸರ್ಕಾರ ವಜಾ ಮಾಡಿ’’ ರಾಜ್ಯಪಾಲರಿಗೆ ಕಾಂಗ್ರೆಸ್ ಮೊರೆ


``ಸರ್ಕಾರ ವಜಾ ಮಾಡಿ’’
ರಾಜ್ಯಪಾಲರಿಗೆ ಕಾಂಗ್ರೆಸ್ ಮೊರೆ


ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಸರ್ಕಾರದ ಪ್ರತಿನಿಧಿಗಳು ಹಾಗೂ ಸಂಸದರಿಗೆ ಪಾಲು ಸಂದಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.


ಗುರುವಾರ ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಸಭೆ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ತಿನ ಕಾಂಗ್ರೆಸ್ ನಾಯಕ ಎಸ್.ಆರ್. ಪಾಟೀಲ್ ಅವರನ್ನೊಳಗೊಂಡ ನಿಯೋಗ ದೂರು ಸಲ್ಲಿಸಿದೆ.


ರಾಜ್ಯ ಸರ್ಕಾರದ ಲೋಕೋಪಯೋಗಿ, ಸಣ್ಣ ಮತ್ತು ಭಾರೀ ನೀರಾವರಿ, ಪಂಚಾಯತ್ ರಾಜ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು ಹಾಗೂ ಬಿಬಿಎಂಪಿಯಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗುವ ಹಣದಲ್ಲಿ ಶೇ. 40ರಷ್ಟು ಮೊತ್ತವನ್ನು ಕಮೀಷನ್ ರೂಪದಲ್ಲಿ ನೀಡಬೇಕಾಗದ ಪರಿಸ್ಥಿತಿ ಇದೆ. ಸಂಬAಧಿಸಿದ ಸಚಿವರು, ಶಾಸಕರು, ಸಂಸದರು ಮತ್ತು ಹಿರಿಯ ಅಧಿಕಾರಿಗಳಿಗೆ ಕಮೀಷನ್ ನೀಡಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ವತಿಯಿಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳೆದ ಜುಲೈ 6ರಂದು ದೂರು ಸಲ್ಲಿಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಹಿಂದೆAದೂ ಇಂತಹ ಘಟನೆ ನಡೆದಿರಲಿಲ್ಲ ಎಂದು ತಿಳಿಸಿದ್ದಾರೆ.


ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ, ಸುಮಾರು ಒಂದು ಲಕ್ಷ ಸದಸ್ಯರನ್ನು ಹೊಂದಿರುವ ನೊಂದಾಯಿತ ಜವಾಬ್ದಾರಿಯುತ ಸಂಘವಾಗಿದ್ದು, ಸಂಘವೇ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವುದರ ಬಗ್ಗೆ ದೂರಿರುವುದು ಅತ್ಯಂತ ಗಂಭೀರ ವಿಷಯವಾಗಿದೆ. ಕಮೀಷನ್ ವ್ಯವಹಾರವೆಂದರೆ ಕಾನೂನಿನ ರೀತಿಯಲ್ಲಿ ಅದನ್ನು ಲಂಚವೆAದೇ ಪರಿಭಾವಿಸಬೇಕಾಗಿದೆ ಎಂದು ತಿಳಿಸಿದ್ದಾರೆ.


ಗುತ್ತಿಗೆದಾರರು ಕಮೀಷನ್ ಜೊತೆಗೆ ಜಿಎಸ್‌ಟಿ ಕಟ್ಟಬೇಕು. ಡೆಪಾಸಿಟ್ ಇಡಬೇಕು. ಆದಾಯ ತೆರಿಗೆ ಪಾವತಿಸಬೇಕು. ಹೀಗೆ ಗುತ್ತಿಗೆ ಹಣದಲ್ಲಿ ಶೇ. 70ರಷ್ಟು ಹಣ ಅಭಿವೃದ್ಧಿ ಕಾಮಗಾರಿಗಳಿಗಲ್ಲದೇ ಈ ರೀತಿಯ ಬೇರೆ ಉದ್ದೇಶಗಳಿಗೆ ಬಳಕೆಯಾಗುತ್ತಿದೆ ಎಂದು ವಿವರಿಸಿದ್ದಾರೆ.


ಸದರಿ ಸಂಘವು ಪ್ರಧಾನಿಯವರಿಗೆ ದೂರು ಸಲ್ಲಿಸಿ ಸುಮಾರು ನಾಲ್ಕು ತಿಂಗಳಾದರೂ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಬಗ್ಗೆ ಪ್ರಧಾನಿಯವರು ಮೌನ ವಹಿಸಿರುವುದು ಇದರಲ್ಲಿ ಕೇಂದ್ರಕ್ಕೂ ಪಾಲು ಸಂದಾಯವಾಗುತ್ತಿರಬಹುದೆAಬ ಅನುಮಾನ ಕಾಡುತ್ತಿದೆ ಎಂದಿರುವ ಕಾಂಗ್ರೆಸ್, ಕರ್ನಾಟಕ ಸರ್ಕಾರ, ರಾಜ್ಯ ಪೊಲೀಸ್, ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆ ಮತ್ತು ಇತರ ಸಂಬAಧಿತ ಅಧಿಕಾರಿಗಳು ಮೇಲಿನ ಅತಿರೇಕದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ವಿಷಯದ ಬಗ್ಗೆ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.


ಕಮಿಷನ್/ಕಿಕ್ ಬ್ಯಾಕ್‌ಗಳ ಶೇಕಡಾವಾರು ಲಂಚ, ಮನಿ ಲಾಂಡರಿAಗ್ ಮತ್ತು ಭಾರತೀಯ ದಂಡ ಸಂಹಿತೆ, ಭ್ರಷ್ಟಾಚಾರ ತಡೆಗಟ್ಟುವಿಕೆ ಕಾಯಿದೆ, ಮನಿ ಲಾಂಡರಿAಗ್ ತಡೆಗಟ್ಟುವಿಕೆ ಕಾಯಿದೆ ಮತ್ತು ಕಾನೂನಿನ ಇತರ ನಿಬಂಧನೆಗಳ ಪ್ರಕಾರ ಒಂದು ಅಪರಾಧವಾಗಿದೆ. ಪ್ರಧಾನಮಂತ್ರಿ ಮತ್ತು ಇತರ ಸಂಬAಧಿತ ಅಧಿಕಾರಿಗಳ ಕ್ರಮವು ನಿಜವಾಗಿಯೂ ನಮ್ಮ ದೇಶದ ಕಾನೂನು ಪಾಲಿಸುವ ನಾಗರಿಕರಲ್ಲಿ ವಿಶೇಷವಾಗಿ ಕರ್ನಾಟಕದ ನಾಗರಿಕರ ಮನಸ್ಸಿನಲ್ಲಿ ಬಹಳಷ್ಟು ಭೀತಿ ಮತ್ತು ಆತಂಕವನ್ನು ಉಂಟುಮಾಡುತ್ತದೆ.


ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ನರೇಂದ್ರ ಮೋದಿಯವರು ನಮ್ಮ ಸರ್ಕಾರವನ್ನು ಕಮೀಷನ್ ಸರ್ಕಾರ ಎಂದು ಟೀಕಿಸಿದ್ದರು. ಆದರೆ, ಆಗಿನ ಅವರ ಹೇಳಿಕೆಗೆ ಯಾವುದೇ ಆಧಾರವಿರಲಿಲ್ಲ. ಆದರೆ, ಈಗ ಗುತ್ತಿಗೆದಾರರ ಸಂಘ ನೀಡಿರುವ ದೂರಿನ ಮನವಿಯಲ್ಲಿ ದಾಖಲೆಗಳನ್ನು ಒದಗಿಸಿದ್ದು, ಇದು ಪತ್ರಿಕೆಗಳಲ್ಲೂ ಪ್ರಕಟಗೊಂಡಿವೆ. ಇದು ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆಯ ಪ್ರಕರಣವಾಗಿದೆ.


ಇತ್ತೀಚೆಗೆ ಬಿಡಿಎ ಮೇಲೆ ಎಸಿಬಿಯವರು ದಾಳಿ ಮಾಡಿ ಸುಮಾರು 300 ಕೋಟಿ ರುಪಾಯಿಯಷ್ಟು ನಷ್ಟವಾಗಿದೆ ಎಂದು ವರದಿ ನೀಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಹಾಗಾಗಿ ಈ ಸರ್ಕಾರಕ್ಕೆ ಸಂವಿಧಾನಾತ್ಮಕವಾಗಿ ಆಡಳಿತ ನಡೆಸುವ ನೈತಿಕ ಹಕ್ಕಿಲ್ಲ. ಹಾಗಾಗಿ ರಾಜ್ಯದಲ್ಲಿ 356ನೇ ವಿಧಿಯನ್ನು ಜಾರಿಗೊಳಿಸಲು ಮನವಿ ಮಾಡಿದರು.


ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.


ರಾಜ್ಯದಲ್ಲಿ ಸಂವಿಧಾನ, ಕಾನೂನು ಕುಸಿದು ಬಿದ್ದಿದೆ. ಹಾಗಾಗಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರ್ಕಾರವನ್ನು ವಜಾಗೊಳಿಸಿ ರಾಷ್ಟçಪತಿ ಆಡಳಿತ ಹೇರಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ. ಅಲ್ಲದೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.