ವಿಧಾನಪರಿಷತ್ ಚುನಾವಣೆ: ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಕೆ.ಎಚ್.ಮುನಿಯಪ್ಪ ಪ್ರಚಾರ

mlc election congress candidate r rajendra kh muniyappa

ವಿಧಾನಪರಿಷತ್ ಚುನಾವಣೆ: ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಕೆ.ಎಚ್.ಮುನಿಯಪ್ಪ ಪ್ರಚಾರ

ವಿಧಾನಪರಿಷತ್ ಚುನಾವಣೆ: ತುಮಕೂರು ಜಿಲ್ಲೆಯಲ್ಲಿ
ಕಾಂಗ್ರೆಸ್ ಅಭ್ಯರ್ಥಿ ಪರ ಕೆ.ಎಚ್.ಮುನಿಯಪ್ಪ ಪ್ರಚಾರ

ಕೋಲಾರ: ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ವಿಧಾನಪರಿಷತ್ ಚುನಾವಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ರಾಜೇಂದ್ರ ಪರ ಇಂದು ಸಿರಾ ಮತ್ತು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.


ಈ ಸಭೆಯಲ್ಲಿ ಮಾಜಿ ಕೇಂದ್ರ ಸಚಿವರಾದ ಕೆ.ಎಚ್.ಮುನಿಯಪ್ಪ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ, ಬೆಲೆ ಏರಿಕೆ, ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಕೇಂದ್ರ,ರಾಜ್ಯ ಸರ್ಕಾರದ ವಿರುದ್ದ ಹೋರಾಡಲು ಕಾಂಗ್ರೆಸ್ ಕೈಬಲಪಡಿಸಿ ಎಂದು ಕರೆ ನೀಡಿದರು.


ಶಾಸಕರಾದ ರಿಜ್ವಾನ್ ಆರ್ಷದ್, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಸಂಸz ಮುದ್ದಹನುಮೇಗೌಡ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಶಫಿ ಅಹಮದ್, ಕೆ ಷಡಕ್ಷರಿ, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆ ಮಾಜಿ ಜಿ.ಪಂ ಸದಸ್ಯ ಕೆಂಚಮಾರಯ್ಯ, ಜಿ.ಜೆ.ರಾಜಣ್ಣ, ಮುಖಂಡರಾದ ಕೊಂಡವಾಡಿ ಚಂದ್ರಶೇಖರ್, ಚಂದ್ರಶೇಖರ್ ಗೌಡ, ಸಿರಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸ್ಥಳೀಯ ಸಂಸ್ಥೆ ಚುನಾಯಿತ ಹಾಲಿ ಹಾಗೂ ಮಾಜಿ ಸದಸ್ಯರು, ಮಾಜಿ ಜಿ.ಪಂ, ತಾ.ಪಂ.ಸದಸ್ಯರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮತ್ತು ಕಾಂಗ್ರೆಸ್ ಕಾರ್ಯಕರ್ತರು, ಭಾಗವಹಿಸಿದ್ದರು.