ಒಂದು ದಿನಕ್ಕೆ ಕನ್ನಡ ರಾಜ್ಯೋತ್ಸವ  ಸಿಮೀತವಾಗಬಾರದು: ಮುನಿರತ್ನ

ಒಂದು ದಿನಕ್ಕೆ ಕನ್ನಡ ರಾಜ್ಯೋತ್ಸವ  ಸಿಮೀತವಾಗಬಾರದು: ಮುನಿರತ್ನ
ಒಂದು ದಿನಕ್ಕೆ ಕನ್ನಡ ರಾಜ್ಯೋತ್ಸವ  ಸಿಮೀತವಾಗಬಾರದು: ಮುನಿರತ್ನ

ಒಂದು ದಿನಕ್ಕೆ ಕನ್ನಡ ರಾಜ್ಯೋತ್ಸವ 
ಸಿಮೀತವಾಗಬಾರದು: ಮುನಿರತ್ನ


ಕೋಲಾರ: ಒಂದು ದಿನಕ್ಕೆ ಕನ್ನಡ ರಾಜ್ಯೋತ್ಸವ ಸಿಮೀತವಾಗಬಾರದು, ಕೋಲಾರ ಜಿಲ್ಲೆಯು ಗಡಿ ಜಿಲ್ಲೆಯಾಗಿದ್ದು ಜನರು ಹೆಚ್ಚಾಗಿ ಪರಬಾಷೆಯನ್ನು ಬಳಸುತ್ತಿದ್ದಾರೆ. ಕನ್ನಡ ನಾಡಿನ ಜಲ, ನೆಲ ಬಳಸುತ್ತಿದ್ದು ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಯಾವುದೇ ಬಾಷೆ ಮಾತಡಿದರೂ ಹೊರಗಡೆ ಕನ್ನಡ ಭಾಷೆಯನ್ನು ಮಾತನಾಡಬೇಕು ಎಂದು ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ತಿಳಿಸಿದರು.
 ಸೋಮವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಸಭೆ, ಕೋಲಾರ ಹಾಗೂ ಶ್ರೀ ಭುವನೇಶ್ವರಿ ಸಂಘ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 66 ನೇ ಕನ್ನಡ ರಾಜ್ಯೋತ್ಸವ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದ ಧ್ವಜರೋಹಣ ನೇರವೆರಿಸಿ ಅವರು ಮಾತನಾಡಿದರು. ದೇಹಕ್ಕೆ ಉಸಿರು ಎಷ್ಟು ಮುಖ್ಯವೋ ರಾಜ್ಯಕ್ಕೆ ಕನ್ನಡ ಭಾಷೆ ಅಷ್ಟೆ ಮುಖ್ಯ. ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸಿ. ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಿ, ಕನ್ನಡ ಭಾಷೆ ಹೆತ್ತ ತಾಯಿಗೆ ಸಮಾನ ಎಂದು ಅವರು ತಿಳಿಸಿದರು.
 ಸಂಸದ ಎಸ್. ಮುನಿಸ್ವಾಮಿ ಅವರು ಮಾತನಾಡಿ, ಕರ್ನಾಟಕ ರಾಜ್ಯಕ್ಕೆ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರು ಕೋಲಾರ ಜಿಲ್ಲೆಯವರು, ಜಿಲ್ಲೆಯ ರೈತರು, ಕನ್ನಡ ಪರ ಹೋರಾಟಗಾರರು, ಕವಿಗಳು, ವಿದ್ವಾಂಸರು ಹೆಚ್ಚಿನ ಹೆಸರುವಾಸಿಯಾಗಿದ್ದಾರೆ. ಜಿಲ್ಲೆಯಲ್ಲಿ ವಿದ್ಯಾವಂತರು ಆನೇಕ ಉನ್ನತ ಹುದ್ದೆಗಳನ್ನು ಆಲಂಕರಿಸಿದ್ದಾರೆ. ಮುಂದಿನ ವರ್ಷ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ವಿಜೃಂಭನೆಯಿAದ ಆಚರಿಸಬೇಕು. ಪ್ರತಿಯೊಬ್ಬರು ಕನ್ನಡ ಭಾಷೆ ಮಾತನಾಡಬೇಕು. ಕನ್ನಡ ಭಾಷೆಯಲ್ಲಿ ವ್ಯವಹರಿಸಬೇಕು, ಕನ್ನಡ ಭಾಷೆಯನ್ನು ಬೆಳೆಸಬೇಕು ಎಂದು ಅವರು ತಿಳಿಸಿದರು.
 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಶ್ರೀನಿವಾಸ ಗೌಡ ಅವರು ವಹಿಸಿ ಮಾತನಾಡಿ ಕೋಲಾರ ಜಿಲ್ಲೆಯು ಗಡಿ ಜಿಲ್ಲೆಯಾಗಿದ್ದು ಹೆಚ್ಚಿನ ಪರ ಭಾಷೆ ಪ್ರಭಾವವಿದೆ. ಆದರೂ ಜಿಲ್ಲೆಯಲ್ಲಿ ಕನ್ನಡ ಭಾಷೆ ಬಳಸುವವರು ಹೆಚ್ಚು ಜನ ಇದ್ದಾರೆ ಎಂದು ಅವರು ತಿಳಿಸಿದರು.
ಕೋಲಾರ ನಗರ ಸಭೆ ಅಧ್ಯಕ್ಷೆ ಶ್ವೇತಾ ಶಬರೀಶ್ ಅವರು ಮಾತನಾಡಿ, ಮಕ್ಕಳಿಗೆ ಕನ್ನಡ ಭಾಷೆಯ ಮಹತ್ವದ ಬಗ್ಗೆ ಹಾಗೂ ನಾಡ ಹಬ್ಬಗಳ ಬಗ್ಗೆ ಅರಿವು ಮೂಡಿಸಬೇಕು. ಕನ್ನಡ ಹೋರಾಟಗಾರರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದು ಅವರು ತಿಳಿಸಿದರು. 
ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 14 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಕುರಿತ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.
ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಉಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ|| ಸ್ನೇಹಾ, ಉಪ ವಿಭಾಗಾಧಿಕಾರಿ ಆನಂದ್ ಪ್ರಕಾಶ್ ಮೀನಾ, ನಗರ ಅಭಿವೃಧಿ ಪ್ರಾಧಿಕಾರದ ಅಧ್ಯಕ್ಷ ಚಲಪತಿ, ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ಮುನಿರಾಜು, ತಹಶಿಲ್ದಾರ್ ವಿಲಿಯಂ, ಶ್ರೀ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಕೆ.ಆರ್. ತ್ಯಾಗರಾಜ್ ಇದ್ದರು.