ಹೊಸ ಯೋಜನೆಗಳ ವಿವರ
ಹೊಸ ಯೋಜನೆಗಳ ವಿವರ
‘ರೈತ ಶಕ್ತಿ’ ಹೊಸ ಯೋಜನೆ ಪ್ರಕಟ
ಬೆಂಗಳೂರು,ಮಾ. 4- ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಅನ್ನದಾತನ ನೆರವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸುವುದಾಗಿ ಪ್ರಕಟಿಸಿರುವ ಅವರು, ಈ ಬಾರಿಯ ಕೃಷಿ ಕ್ಷೇತ್ರಕ್ಕೆ 33,700 ಕೋಟಿ ರೂ. ಘೋಷಿಸಿದ್ದಾರೆ.ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸಿದ ಅವರು, ಕೃಷಿಯ ಮಾಡಿ 'ಉಣ್ಣದೆ ಹಸಿವು ಅರಿವ ಪರಿ ಇನ್ನೆಂತೋ' ಎಂಬ ಸೊನ್ನಲಿಗೆಯ ಸಿದ್ದರಾಮ ಅವರ ಕವಿವಾಣಿಯನ್ನು ಓದಿದ್ದು ಗಮನ ಸೆಳೆಯಿತು.ರೈತರಿಗೆ ಕೃಷಿ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಬಾರವನ್ನು ಕಡಿಮೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಠ 5 ಎಕರೆಗೆ ಡಿಬಿಟಿ ಮೂಲಕ ಡೀಸಲ್‌ಗೆ ಸಹಾಯಧನವನ್ನು ನೀಡಲು 'ರೈತ ಶಕ್ತಿ' ಎಂಬ ಹೊಸ ಯೋಜನೆಗೆ 500 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಿಸಾನ್ ಯೋಜನೆಯಡಿಯಲ್ಲಿ 50 ಲಕ್ಷಕ್ಕೂ ಹೆಚ್ಚಿನ ರೈತರಿಗೆ ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಗೆ 1978 ರೂ.ಗಳ ನಗದು ಅನುದಾನ ರೈತರ ಖಾತೆಗೆ ಜಮಾವಣೆ ಮಾಡಲಾಗಿದ್ದು, ಈ ಯೋಜನೆಯನ್ನು ಈ ವರ್ಷವೂ ಮುಂದುವರೆಸುವುದಾಗಿ ಪ್ರಕಟಿಸಿದರು.ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಈಗಾಗಲೇ ಸ್ಥಾಪಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ರಾಜ್ಯದ ಎಲ್ಲ ಹೋಬಳಿಗೆ ವಿಸ್ತರಿಸಲು ನಿರ್ಧರಿಸಿದ್ದಾರೆ.ಕೆಪೆಕ್ ಮುಖಾಂತರ ರೈತರ ಉತ್ಪಾದಕರ ಸಂಸ್ಥೆಗಳಿಗೆ ಸಾಮಾನ್ಯ ಕೇಂದ್ರಗಳನ್ನು ಅಭಿವೃದ್ಧಿಗಾಗಿ ಕೊಯ್ಲಿನೋತ್ತರ ನಿರ್ವಹಣೆಗೆ ಹಾಗೂ ಅವುಗಳ ಉತ್ಪನ್ನ ಮತ್ತು ಮಾರಾಟ ಮತ್ತು ರಫ್ತಿಗೆ 50 ಕೋಟಿ ರೂ. ಯೋಜನೆ ರೂಪಿಸಲಾಗಿದೆ.
ರಾಜ್ಯದ 57 ತಾಲ್ಲೂಕುಗಳ ವ್ಯಾಪ್ತಿಯ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾಯನ ಅಭಿವೃದ್ಧಿಗಾಗಿ 642 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಮುಂದಾಗಿದ್ದಾರೆ.
ಮಹಿಳೆಯರಿಗೆ ಬಜೆಟ್‌ನಲ್ಲಿ ಬಂಪರ್
ಬೆAಗಳೂರು: ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಮಹಿಳೆಯರಿಗಾಗಿಯೇ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಮಹಿಳೆಯರ ಸಂರಕ್ಷಣೆ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡಲಾಗಿದ್ದು, ಮಹಿಳಾ ಉದ್ದೇಶಿತ ಯೋಜನೆಗಳಿಗೆ ಪ್ರಸಕ್ತ ಸಾಲಿನಲ್ಲಿ 40,944 ಕೋಟಿ ರೂ. ಅನುದಾನ ನೀಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯಗಳನ್ನು ಪ್ರಾರಂಭಿಸಲು ಒತ್ತು ನೀಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳೆಯರಿಗೆ ವಸತಿ ನಿಲಯದಲ್ಲಿ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿಗಳು ಪ್ರಕಟಿಸಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ರಾಜೀವ್‌ಗಾಂಧಿ ವಸತಿ ನಿಗಮದ ಮೂಲಕ ವಸತಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ 300 ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪ್ರತಿಷ್ಠಿತ ಐಐಎಂನಲ್ಲಿ ಉದ್ಯಮಶೀಲದ ತರಬೇತಿ ನೀಡಲು ಸರ್ಕಾರ ಮುಂದಾಗಿದೆ.
ವಿದ್ಯಾರ್ಥಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಸಲು ಮಾಸಿಕ ಭೋಜನ ವೆಚ್ಚವನ್ನು 107 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಲಾಗುತ್ತದೆ.
7 ವಿನೂತನ ವಿ.ವಿ. ಪ್ರಾರಂಭ
ಬೆAಗಳೂರು : ರಾಜ್ಯದಲ್ಲಿ ಕಾಲೇಜುಗಳ ಮೇಲ್ವಿಚಾರಣೆಯನ್ನು ಸುಧಾರಿಸಲು ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಪ್ರದೇಶಗಳಲ್ಲಿ 7 ವಿನೂತನ ಮಾದರಿಯ ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ಪ್ರಕಟಿಸಿದ್ದಾರೆ.ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.2022 ? 23ನೇ ಸಾಲಿನ ಮುಂಗಡ ಪತ್ರ ಮಂಡಿಸಿ ಮಾತನಾಡಿದ ಅವರು, ಈ 7 ವಿಶ್ವವಿದ್ಯಾಲಯಗಳು ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಿಗಿಂತ ವಿಭಿನ್ನವಾಗಿ ತಂತ್ರಜ್ಞಾನದ ಗರಿಷ್ಠ ಬಳಕೆಯಿಂದ ಮಾನವ ಸಂಪನ್ಮೂಲ ಉಪಯೋಗಿಸದೆ ಕಾರ್ಯ ನಿರ್ವಹಿಸಲಿವೆ ಎಂದು ಅವರು ತಿಳಿಸಿದ್ದಾರೆ.
ಸ್ನಾತಕೋತ್ತರ ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸುವ ಈ ವಿಶ್ವವಿದ್ಯಾಲಯಗಳಿಗೆ ವಾರ್ಷಿಕ ತಲಾ 2 ಕೋಟಿ ರೂ. ಆವರ್ತಕ ವೆಚ್ಚ ಬಳಸಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.ರಾಯಚೂರಿನಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ ವಿಶ್ವವಿದ್ಯಾಲಯಕ್ಕೆ ಪ್ರಯೋಗ ಶಾಲೆ ಒದಗಿಸಲು 15 ಕೋಟಿ ರೂ. ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸರ್ವರಿಗೂ ಸೂರು ಸರ್ಕಾರದ ಆದ್ಯತೆ
ಬೆಂಗಳೂರು, ಮಾ. 4- ರಾಜ್ಯದಲ್ಲಿ ಪ್ರಸಕ್ತ ವರ್ಷ 3 ಲಕ್ಷ ಮನೆಗಳ ನಿರ್ಮಾಣಕ್ಕೆ ಒತ್ತುನೀಡಿದ್ದು, ಸೂರಿಲ್ಲದ ಸರ್ವರಿಗೂ ಸೂರು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ಪ್ರಕಟಿಸಿದ್ದಾರೆ.
ರಾಜ್ಯ ಸರ್ಕಾರ ಒಟ್ಟು 5 ಲಕ್ಷ ಮನೆಗಳ ನಿರ್ಮಾಣ ಗುರಿಯನ್ನು ಹೊಂದಿದ್ದು, ಇದಕ್ಕಾಗಿ 6,212 ಕೋಟಿ ರೂ. ವೆಚ್ಚ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.2022 ? 23ನೇ ಸಾಲಿನ ಮುಂಗಡ ಪತ್ರ ಸಲ್ಲಿಸಿ, ಮಾತನಾಡಿದ ಅವರು, ಮುಖ್ಯಮಂತ್ರಿಗಳ 1 ಲಕ್ಷ ಬೆಂಗಳೂರು ಬಹುಮಹಡಿ ವಸತಿ ಯೋಜನೆಯಡಿ 53,800 ಮನೆಗಳಿಗೆ ಟೆಂಡರ್ ಕರೆಯಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಇವುಗಳ ಪೈಕಿ 20 ಸಾವಿರ ಮನೆಗಳನ್ನು ಪ್ರಸಕ್ತ ಸಾಲಿನ ಅಂತ್ಯಕ್ಕೆ ಪೂರ್ಣಗೊಳಿಸಿ ಫಲಾನುಭವಿಗಳಿಗೆ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಅಮೃತ ಗ್ರಾಮೀಣ ವಸತಿ ಯೋಜನೆ
75ನೇ ಸ್ವಾತಂತ್ರೊ÷್ಯÃತ್ಸವದ ಅಮೃತ ಮಹೋತ್ಸವದ ನೆನಪಿಗಾಗಿ `ಅಮೃತ ಗ್ರಾಮೀಣ ವಸತಿ ಯೋಜನೆ' ಯಡಿ ಆಯ್ದ 750 ಗ್ರಾಮ ಪಂಚಾಯಿತಿಗಳಲ್ಲಿ ವಸತಿರಹಿತ ಮತ್ತು ನಿವೇಶನರಹಿತರನ್ನು ಗುರುತಿಸಿ ಸರ್ವರಿಗೂ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.ಕರ್ನಾಟಕ ಗೃಹ ಮಂಡಳಿ ವತಿಯಿಂದ ವಸತಿ ಡಾವಣೆಗಳ ಅಭಿವೃದ್ಧಿ, ಮನೆಗಳ ನಿರ್ಮಾಣ ಮತ್ತು ಸಹಭಾಗಿತ್ವದಲ್ಲಿ ವಸತಿ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಯೋಜನೆಗಳಲ್ಲಿ 10,555 ನಿವೇಶನಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಹೆಚ್ಚುವರಿಯಾಗಿ 11 ವಸತಿ ಯೋಜನೆಗಳು ತಯಾರಿಕಾ ಹಂತದಲ್ಲಿವೆ. ಇದರಿಂದ 11,674 ನಿವೇಶನಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಹಕ್ಕುಪತ್ರ ವಿತರಣೆ
ಸರ್ಕಾರಿ ಮಾಲೀಕತ್ವದಲ್ಲಿರುವ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಅಂದಾಜು 3.36 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ.
ಪ್ರಧಾನ iಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿ 25.40 ಲಕ್ಷ ವಸತಿ ಮತ್ತು ನಿವೇಶನರಹಿತರ ಮಾಹಿತಿಯನ್ನು ಕೇಂದ್ರ ಸರ್ಕಾರದ ಆವಾಸ್ ಮತ್ತು ಡಾಟಾ ಬೇಸ್ ನಲ್ಲಿ ನಮೂದು ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಸರ್ಕಾರದ ವಿವಿಧ ವಸತಿ ಯೋಜನೆಯಡಿ ನಿವೇಶನ ಅಡಮಾನ ಮಾಡುವವರಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದ್ದು, ನೊಂದಣಿ ಪ್ರಕ್ರಿಯೆಯಲ್ಲಿ ಉಂಟಾಗುವ ವಿಳಂಬ ತಪ್ಪಿಸಲು ಫಲಾನುಭವಿಗಳಿಗೆ ಶೀಘ್ರ ಮನೆ ನಿರ್ಮಾಣಕ್ಕೆ ಒತ್ತುನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ 215 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ನ್ಯಾಕ್ ಮಾನ್ಯತಾ ಪ್ರಕ್ರಿಯೆಗೆ ಒಳಪಡಿಸಲು ಹಾಗೂ 40 ಸರ್ಕಾರಿ ಪಾಲಿಟೆಕ್ನಿಕ್ ಗಳು ಮತ್ತು 4 ಸರ್ಕಾರಿ ಇಂಜಿನಿಯರಿAಗ್ ಕಾಲೇಜುಗಳಲ್ಲಿ ಕೋರ್ಸ್ಗಳನ್ನು ಎನ್ ಬಿ ಎ ಮಾನ್ಯತೆಗೆ ಒಳಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದವರು ಹೇಳಿದರು.
ಹಾಲು ಉತ್ಪಾದಕರಿಗಾಗಿ `ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್'
ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಲು ಉದ್ದೇಶಿಸಲಾಗಿದೆ.
ಹಾಲು ಉತ್ಪಾದಕರಿಗೆ ಸರಳ ನಿಬಂಧನೆಗಳೊAದಿಗೆ ಸಾಲ ನೀಡಲು ಹಾಲು ಉತ್ಪಾದಕರ ಸಹಕಾರ ಸಂಘ ಕೆಎಂಎಫ್ ಮತ್ತು ಜಿಲ್ಲಾ ಹಾಲು ಒಕ್ಕೂಟಗಳು 260 ಕೋಟಿ ರೂ. ಮತ್ತು ರಾಜ್ಯಸರ್ಕಾರ 100 ಕೋಟಿ ರೂ. ಷೇರು ಬಂಡವಾಳವನ್ನು ಬ್ಯಾಂಕಿಗೆ ಒದಗಿಸುವ ಪ್ರಸ್ತಾಪವನ್ನು ಇಂದು ಮುಖ್ಯಮಂತ್ರಿ ಮಂಡಿಸಿ ಆಯವ್ಯಯದಲ್ಲಿ ಘೋಷಿಸಲಾಗಿದೆ.
ಪಶು ಚಿಕಿತ್ಸಾಲಯಗಳನ್ನು ಬಲಪಡಿಸುವುದರ ಜೊತೆಗೆ ಹೊಸದಾಗಿ 100 ಪಶು ಚಿಕಿತ್ಸಾಲಯಗಳನ್ನು ಹಂತಹAತವಾಗಿ ಪ್ರಾರಂಭಿಸಲಾಗುತ್ತದೆ. ಖಾಲಿ ಇರುವ 400 ಪಶು ವೈದ್ಯಾಕಾರಿಗಳ ಹುದ್ದೆ ಭರ್ತಿಗೆ ಕೈಗೊಳ್ಳುವ ಭರವಸೆ ನೀಡಲಾಗಿದೆ.
ರಾಜ್ಯದಲ್ಲಿರುವ ಗೋ ಶಾಲೆಗಳ ಸಂಖ್ಯೆಯನ್ನು 31 ರಿಂದ 100ಕ್ಕೆ ಹೆಚ್ಚಿಸಲು 50 ಕೋಟಿ ರೂ. ಒದಗಿಸಲಾಗಿದೆ. ಗೋವುಗಳನ್ನು ದತ್ತು ತೆಗೆದುಗೊಳ್ಳುವುದನ್ನು ಪ್ರೋತ್ಸಾಹಿಸಲು ಪುಣ್ಯಕೋಟಿ ದತ್ತು ಯೋಜನೆ ಪ್ರಾರಂಭಿಸಲಿದೆ,
ದ್ವಿತಳಿ ಬಿತ್ತನೆ ಗೂಡಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು 50 ರೂ.ಗೆ ಹೆಚ್ಚಿಸಲಾಗುತ್ತದೆ. ರೇಷ್ಮೆ ಬೆಳೆಗಾರರಿಗೆ ಪಾರದರ್ಶಕ ಮತ್ತು ನ್ಯಾಯಯುತ ಬೆಲೆ ಒದಗಿಸಲು ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಇ-ವೆಯಮೆಂಟ್ ಮತ್ತು ಇ-ಪೇಮೆಂಟ್ ಅನುಷ್ಠಾನಗೊಳಿಸಲಾಗುವುದು.
ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟವಾಗುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ಘೋಷಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುತ್ತಿರುವ ಗೌರವಧನವನ್ನು ಸೇವೆಯ ಆಧಾರದ ಮೇಲೆ ಹೆಚ್ಚಿಸಲು ನಿರ್ಧರಿಸಿರುವುದಾಗಿ ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾಗಿದೆ.
20 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ ? 1500, 10-20 ವರ್ಷ ಸೇವೆ ಸಲ್ಲಿಸಿದವರಿಗೆ ? 1250 ಮತ್ತು 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೆ ? 1000 ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
2015ರಿಂದ ಸ್ಥಗಿತಗೊಂಡಿದ್ದ ಎನ್‌ಪಿಎಸ್ ಲೈಟ್ ಯೋಜನೆಯಿಂದ ವಂಚಿತರಾದ ಅಂಗನವಾಡಿ ಕಾರ್ಯಕರ್ತೆಯರಿಗೆ 50 ಸಾವಿರ ಮತ್ತು ಅಂಗನವಾಡಿ ಸಹಾಯಕರಿಗೆ 30 ಸಾವಿರ ಪಾವತಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ದುಡಿಯುವ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ರಾಜ್ಯದ 5 ತಾಲ್ಲೂಕುಗಳಲ್ಲಿ ಮಹಾತ್ಮಾ ಗಾಂಧಿ ಎನ್‌ಆರ್‌ಇಜಿಎ ಯೋಜನೆಯ ಸಹಯೋಗದಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.
ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ ಧನ ಹೆಚ್ಚಳ,
ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿರುವ 2022-23ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಪ್ರೋತ್ಸಾಹ ಧನವನ್ನು ಪ್ರಕಟಿಸಲಾಗಿದೆ. ರೇಷ್ಮೆ ಉತ್ಪಾದನೆಯಲ್ಲಿ ರಾಜ್ಯ ರಾಷ್ಟçದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ರೇಷ್ಮೆ ಬೆಳೆಗಾರರು ಉತ್ಪಾದಿಸಿದ ದ್ವಿತಳಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ಗೆ 10 ಸಾವಿರ ರೂ. ಗಳಂತೆ ಪ್ರೋತ್ಸಾಹ ಧನ ಘೋಷಿಸಿದ್ದಾರೆ.
ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತೀಕರಿಸಲು ಮದ್ದೂರು, ರಾಣಿಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಶೈತ್ಯಾಗಾರ, ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ರೇಷ್ಮೆ ಬೆಳೆಗಾರರು ಆದಾಯ ಹೆಚ್ಚಿಸಲು ಮತ್ತು ರೇಷ್ಮೆ ಉತ್ಪಾದನೆಯನ್ನು ವೃದ್ಧಿಸಲು ದ್ವಿತಳಿ ಬಿತ್ತನೆ ಗೂಡಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಕೆಜಿಗೆ 50 ರೂ.ಗಳಷ್ಟು ಹೆಚ್ಚಿಸಲಾಗುವುದು ಹಾಗೂ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೂ ಪ್ರೋತ್ಸಾಹ ಧನ ನೀಡಲಾಗುವುದು ಎಂದಿದ್ದಾರೆ.
ಮAಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ರೇಷ್ಮೆಯ ಎಲ್ಲಾ ಉತ್ಪಾದನಾ ಚಟುವಟಿಕೆಗಳಿಗೆ ಸಂಬAಧಿಸಿದAತೆ ಸುಸಜ್ಜಿತ ತರಬೇತಿ ಕೇಂದ್ರವನ್ನು ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು, ರೇಷ್ಮೆಗೂಡು ಮತ್ತು ಕಚ್ಚಾ ರೇಷ್ಮೆ ಧಾರಣೆಗಳಲ್ಲಿ ಕುಸಿತವಾದಾಗ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಣಿಕೆದಾರರ ಹಿತರಕ್ಷಣೆಗಾಗಿ ಅವರು ಉತ್ಪಾದಿಸಿದ ಕಚ್ಚಾ ರೇಷ್ಮೆಯನ್ನು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ವತಿಯಿಂದ ಖರೀದಿಸಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪಶು ಸಂಗೋಪನೆ ಕ್ಷೇತ್ರ: ಗ್ರಾಮೀಣ ಪ್ರದೇಶದಲ್ಲಿ ಜಾನುವಾರಗಳ ಆರೋಗ್ಯ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಕಿತ್ಸಾಲಯಗಳನ್ನು ಬಲಪಡಿಸುವುದರೊಂದಿಗೆ ನೂತನ 100 ಪಶು ಚಿಕಿತ್ಸಾಲಯಗಳನ್ನು ಹಂತ ಹಂತವಾಗಿ ಪ್ರಾರಂಭಿಸಲಾಗುವುದು, ಖಾಲಿಯಿರುವ 400 ಪಶು ವೈದ್ಯಾಧಿಕಾರಿ ಹುದ್ದೆ ಭರ್ತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಸರ್ಕಾರ ಉತ್ಪಾದಕರಿಗೆ ಸರಳ ನಿಬಂಧನೆಗಳೊAದಿಗೆ ಸಾಲ ಸೌಲಭ್ಯ- ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಲು ಉದ್ದೇಶಿಸಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ, ದಾವಣಗೆರೆ- ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ರಚಿಸಲು ಉದ್ದೇಶಿಸಲಾಗಿದೆ.
ಗೋಶಾಲೆಗಳಲ್ಲಿನ ಗೋವುಗಳನ್ನು ಸಾರ್ವಜನಿಕರು ಹಾಗೂ ಖಾಸಗಿ ಸಂಸ್ಥೆಗಳು ವಾರ್ಷಿಕ 11,000 ರೂ. ಗಳ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವುದನ್ನು ಪ್ರೋತ್ಸಾಹಿಸಲು ರಾಜ್ಯದಲ್ಲಿಯೇ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆ ಪ್ರಾರಂಭಿಸಲಾಗಿದೆ. ರಾಜ್ಯದ ಸ್ಥಳೀಯ ಗೋ ತಳಿಗಳನ್ನು ಸಂರಕ್ಷಿಸಲು ಮತ್ತು ಅವುಗಳ ಸಂತತಿಯನ್ನು ಹೆಚ್ಚಿಸಲು ಕೆ.ಎಂ.ಎಫ್ ಮೂಲಕ 2,000 ಗೋ ತಳಿಗಳನ್ನು ರೈತರಿಗೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.