ಫೋಟೋ ಕ್ಯಾಪ್ಷನ್

ಫೋಟೋ ಕ್ಯಾಪ್ಷನ್


ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ. ಜಿ. ಪರಮೇಶ್ವರ್ ಅವರ ತುಮಕೂರಿನ ನಿವಾಸಕ್ಕೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಅವರು ಹೊಸವರ್ಷದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ತುಮಕೂರು ಜಿಲ್ಲೆ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಹಾಜರಿದ್ದರು.ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿ ಮಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ಮಾಜಿ ಶಾಸಕರಾದ ಕೆ.ಎನ್. ರಾಜಣ್ಣ ಅವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದರು.

ತುಮಕೂರು: ನಗರದ ಸರ್ಕಾರಿ ಜಿಮ್ಮಿನಲ್ಲಿ ಕ್ರೀಡಾಭ್ಯಾಸ ಮಾಡಿ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ತುಮಕೂರಿನ ಯುವ ಕ್ರೀಡಾಪಟು ದೀಪಶ್ರೀ ಪ್ರಥಮ ಸ್ಥಾನ ಗಳಿಸಿದ್ದು ಅವರನ್ನು ತುಮಕೂರು ನಗರದ ಮುಂಜಾನೆ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಲಾಯಿತು.


ಇತ್ತೀಚೆಗಷ್ಟೇ ದಕ್ಷಿಣ ಕನ್ನಡದ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ್ದ ಸ್ಪರ್ಧೆಯಲ್ಲಿ ತುಮಕೂರಿನ ಸರ್ಕಾರಿ ಜಿಮ್‌ನಲ್ಲಿ ಕ್ರೀಡಾಭ್ಯಾಸ ನಡೆಸುತ್ತಾ ಸಾಧನೆ ಮಾಡಿ ಆಳ್ವಾಸ್ ಪ್ರತಿಷ್ಠಾನದ ಪ್ರಥಮ ಬಹುಮಾನವನ್ನು ನಗರದ ದೀಪಶ್ರೀ ಪಡೆದಿದ್ದು ತುಮಕೂರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ವೇಳೆ ದೀಪಶ್ರೀ ಅವರನ್ನು ಅಭಿನಂದಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಸೇವಕರಾದ ಧನಿಯ ಕುಮಾರ್, ಇತ್ತೀಚಿನ ದಿನಗಳಲ್ಲಿ ಯುವಕರು ಮೊಬೈಲ್‌ಗೆ ಮಾರು ಹೋಗುತ್ತಿದ್ದು ಕ್ರೀಡೆಯ ಬಗ್ಗೆ ಆಸಕ್ತಿಯನ್ನು ತೋರುತ್ತಿಲ್ಲ. ಒಂದು ವೇಳೆ ಆಸಕ್ತಿ ತೋರಿದರೂ ಕ್ರಿಕೆಟ್ ಬಗ್ಗೆ ಒಲವನ್ನು ಹೊಂದಿರುತ್ತಾರೆ. ಗ್ರಾಮಾಂತರ ಕ್ರೀಡೆಗಳಾದ ಕಬಡ್ಡಿ, ಕೋಕೋ, ವಾಲಿಬಾಲ್, ಭಾರ ಎತ್ತುವುದು ಮುಂತಾದ ಕ್ರೀಡೆಗಳಿಗೆ ಯಾರೂ ಸಹ ಆಸಕ್ತಿಯನ್ನು ತೋರುತ್ತಿಲ್ಲ. ಈ ಕಾಲಘಟ್ಟದಲ್ಲಿ ದೀಪಶ್ರೀ ಅವರು ವೇಯ್ಟ್ ಲಿಫ್ಟಿಂಗ್ ಕ್ರೀಡೆಯನ್ನು ಆಯ್ದುಕೊಂಡು ಪ್ರತಿದಿನ ಕಠಿಣ ಅಭ್ಯಾಸ ನಡೆಸಿ ತಮ್ಮ ಸತತ ಪ್ರಯತ್ನದ ಫಲವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರಥಮ ಬಹುಮಾನವನ್ನು ಪಡೆದು ನಗರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ತಿಳಿಸಿದರು


ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಸೇವಕರಾದ ವಾಲೆ ಚಂದ್ರಯ್ಯ, ಯುವಕರು ಉತ್ತಮವಾದ ಹಾಗೂ ಸದೃಢವಾದ ದೇಹ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಬಹಳ ಮುಖ್ಯವಾದುದು. ಕೇವಲ ಮನರಂಜನೆಗಾಗಿ ಮಾತ್ರವಲ್ಲದೆ ಭವಿಷ್ಯದಲ್ಲಿ ಕೂಡ ಕ್ರೀಡೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಯುವಕರು ಸದಾ ಚೈತನ್ಯಶೀಲರಾಗಿದ್ದು ಸದೃಢ ದೇಹ ಮತ್ತು ಮನಸ್ಸನ್ನು ಹೊಂದಬೇಕೆAದು ಕರೆ ನೀಡಿದರು.


ಅಭಿನಂದನೆಗಳನ್ನು ಸ್ವೀಕರಿಸಿ ಮಾತನಾಡಿದ ಕ್ರೀಡಾಪಟು ದೀಪಶ್ರೀ, ತಮಗೆ ಉತ್ತಮ ಸಾಧನೆ ಮಾಡಲು ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸುವುದಾಗಿ ತಿಳಿಸಿದರಲ್ಲದೆ, ರಾಷ್ಟ್ರಮಟ್ಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಸಾಧನೆ ಮಾಡಲು ಹಂಬಲವಿದ್ದು ಅದಕ್ಕೆ ಪೂರ್ವತಯಾರಿ ನಡೆಸುತ್ತಿರುವುದಾಗಿ ತಿಳಿಸಿದರು.