ಜನಪರ ಉತ್ಸವ ಮತ್ತು ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸವಲತ್ತುಗಳ ವಿತರಣೆ ಸಮಾರಂಭ
ಜನಪರ ಉತ್ಸವ ಮತ್ತು ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸವಲತ್ತುಗಳ ವಿತರಣೆ ಸಮಾರಂಭ
ಜನಪರ ಉತ್ಸವ ಮತ್ತು ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸವಲತ್ತುಗಳ ವಿತರಣೆ ಸಮಾರಂಭ
ಕೋಲಾರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೋಲಾರ ಹಾಗೂ ತೋಟಗಾರಿಕೆ ಇಲಾಖೆ ಮತ್ತು ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಜನಪರ ಉತ್ಸವ ಮತ್ತು ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸವಲತ್ತುಗಳ ವಿತರಣೆ ಸಮಾರಂಭವನ್ನು ಫೆಬ್ರವರಿ 26 ರಂದು ಬೆಳಿಗ್ಗೆ 11.00 ಗಂಟೆಗೆ ತೋಟಗಾರಿಕೆ ಮಹಾವಿದ್ಯಾಲಯ ಟಮಕ ಗ್ರಾಮ, ಕೋಲಾರ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ನೆರವೇರಿಸುವರು. ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಶ್ರೀನಿವಾಸಗೌಡ ಅವರು ಅಧ್ಯಕ್ಷತೆ ವಹಿಸುವರು. ಕೋಲಾರ ಲೋಕಸಭಾ ಕ್ಷೇತ್ರದ ಸದಸ್ಯರಾದ ಎಸ್.ಮುನಿಸ್ವಾಮಿ ಅವರು ಘನ ಉಪಸ್ಥಿತಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರು, ಹಾಗೂ ಮುಳಬಾಗಿಲು ವಿಧಾನಸಭಾ ಕ್ಷೇತ್ರ ಶಾಸಕರಾದ ಹೆಚ್.ನಾಗೇಶ್, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಆರ್.ರಮೇಶ್‌ಕುಮಾರ್, ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ.ಕೆ.ಎಂ., ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ವೈ ನಂಜೇಗೌಡ, ಕೆ.ಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಕಲಾ ಎಂ.ಶಶಿಧರ್ ವಿಧಾನಪರಿಷತ್ ಸದಸ್ಯರಾದ ನಜೀರ್ ಅಹ್ಮಮದ್, ಡಾ|| ವೈ.ಎ ನಾರಾಯಣಸ್ವಾಮಿ, ಎಂ.ಎಲ್.ಅನಿಲ್ ಕುಮಾರ್, ಗೋವಿಂದರಾಜು, ಚಿದಾನಂದ ಎಂ.ಗೌಡ, ಹಾಗೂ ಕೋಲಾರ ನಗರಸಭೆಯ ಅಧ್ಯಕ್ಷರಾದ ಆರ್.ಶ್ವೇತ ಶಬರೀಶ್, ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಎ.ವಿ.ವೆಂಕಟೇಶಪ್ಪ ಅವರು ಭಾಗವಹಿಸುವರು.
05 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ಹಾಕಿಸಿ
- ಡಾ|| ಜಗದೀಶ್
ಕೋಲಾರ : ಪೋಲಿಯೋ ಕಾಯಿಲೆಗೆ ಯಾವುದೇ ಒಂದು ಮಗು ತುತ್ತಾಗಬಾರದು, 5 ವರ್ಷದೊಳಗಿನ ಜಿಲ್ಲೆಯ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಜಗದೀಶ್ ಅವರು ತಿಳಿಸಿದರು.
ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು 15 ವರ್ಷಗಳಿಂದ ಜಿಲ್ಲೆಯಲ್ಲಿ ಯಾವುದೇ ಪೋಲಿಯೋ ಕಾಯಿಲೆ ಕಂಡುಬAದಿಲ್ಲ. ಆದ್ದರಿಂದ ಪೋಲಿಯೋ ನಿರ್ಮೂಲನೆ ಸಂಪೂರ್ಣವಾಗಿ ಮಾಡಲಾಗುವುದು. ಶೇ. 100 ರಷ್ಟು ಲಸಿಕೆ ನೀಡುವುದೇ ನಮ್ಮ ಮುಖ್ಯ ಗುರಿ, ಪೋಲಿಯೋ ನಿರ್ಮೂಲನೆಯಲ್ಲಿ ಭಾರತ ದೇಶವು ಗಣನೀಯ ಪ್ರಗತಿಯನ್ನು ಸಾಧಿಸಿದ್ದು, ಜನವರಿ, 2011 ರಿಂದ ಯಾವುದೇ ಹೊಸ ಪೋಲಿಯೋ ಪ್ರಕರಣ ಕಂಡುಬAದಿಲ್ಲ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯು ಭಾರತ ದೇಶವನ್ನು ಪೋಲಿಯೋ ಮುಕ್ತ ರಾಷ್ಟ್ರ ಎಂದು 2014ರಲ್ಲಿ ಘೋಷಿಸಿದೆ ಎಂದು ತಿಳಿಸಿದರು.
ವಿಶ್ವದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ದೇಶಗಳನ್ನು ಹೊರತುಪಡಿಸಿ ಉಳಿದೆಲ್ಲ ದೇಶಗಳಲ್ಲಿ ಸಂಪೂರ್ಣವಾಗಿ ಪೋಲಿಯೋ ನಿರ್ಮೂಲನೆಯಾಗಿದೆ. ಪೋಲಿಯೋ ಕಾಯಿಲೆ ನಿರ್ಮೂಲನೆ ಮಾಡಲು ಹಲವಾರು ಇಲಾಖೆಗಳ ಅಧಿಕಾರಿಗಳು, ನೌಕರರು, ಸ್ವಯಂಸೇವಕರು, ಸಾಕಷ್ಟು ಉತ್ತಮ ಕೆಲಸ ಮಾಡುತ್ತಿರುವುದು ಪ್ರಶಂಸನೀಯವಾಗಿದೆ. ಭಾರತ ಸರ್ಕಾರದ ನಿರ್ದೇಶನದಂತೆ ಪೋಲಿಯೋ ನಿರ್ಮೂಲನೆ ಅಂಗವಾಗಿ ಈ ವರ್ಷ ಒಂದು ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು 27ನೇ ಫೆಬ್ರವರಿ 2022 ರಂದು ಮೊದಲನೇ ದಿನ ಪೋಲಿಯೋ ಬೂತ್‌ಗಳಲ್ಲಿ ಹಾಗೂ ನಂತರದ ಎರಡು ಮೂರು ದಿನಗಳಲ್ಲಿ ಮನೆ ಮನೆ ಭೇಟಿ ಮೂಲಕ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಹನಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
2021 ನೇ ಸಾಲಿನಲ್ಲಿ ಒಟ್ಟು 1,59,374 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಿ ಶೇ 101.40% ಪ್ರಗತಿ ಸಾಧಿಸಲಾಗಿದೆ. ಈ ವರ್ಷ ಜಿಲ್ಲೆಯ ವ್ಯಾಪ್ತಿಯಲ್ಲಿ 3,65,937 ಮನೆ ಮನೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. 1,361 ಗಂಡಾAತರ ಪ್ರದೇಶಗಳನ್ನು ಗುರುತಿಸಿದ್ದು, ಇದರಲ್ಲಿ ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಿದ್ದೇವೆ ಎಂದರು.
ಈ ಕಾರ್ಯಕ್ರಮಕ್ಕೆ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ನರ್ಸಿಂಗ್ ವಿದ್ಯಾರ್ಥಿಗಳು, ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿ ವರ್ಗದವರು ಸೇರಿ ಒಟ್ಟು 3,124 ವ್ಯಾಕ್ಸಿನೇಟೊರ್ಸ್ ಆಗಿ ಕಾರ್ಯನಿರ್ವಹಿಸುತ್ತಾರೆ. 157 ಮೇಲ್ವಿಚಾರಕರು ಪಲ್ಸ್ ಪೋಲಿಯೋ ಕಾರ್ಯಕ್ರಮದ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ, ಹಾಗೂ ಎನ್.ಜಿ.ಓ ಸಂಸ್ಥೆಗಳಾದ ಲಯನ್ಸ್ ಹಾಗೂ ರೋಟರಿ ಕ್ಲಬ್ ಅವರು ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳಾದ
ಡಾ|| ವಿಜಯಕುಮಾರಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಕೊಟ್ರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.