ಖಾಸಗೀಕರಣ ವಿರೋಧಿಸಿ ಇಂದು, ನಾಳೆ ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಷ್ಕರ

privatisation-of-banks-strike-today

ಖಾಸಗೀಕರಣ ವಿರೋಧಿಸಿ ಇಂದು, ನಾಳೆ ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಷ್ಕರ


ಖಾಸಗೀಕರಣ ವಿರೋಧಿಸಿ ಇಂದು, ನಾಳೆ
ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಷ್ಕರ


ಬೆಂಗಳೂರು: ರಾಷ್ಟçದ ಎರಡು ಪ್ರಮುಖ ರಾಷ್ಟಿçÃಕೃತ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬ್ಯಾಂಕ್ ನೌಕರರು ಇಂದು ಮತ್ತು ನಾಳೆ ಮುಷ್ಕರ ನಡೆಸಲಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತಿರುವ ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗಿಗೆ ವಹಿಸುವ ಸರ್ಕಾರದ ಯೋಜನೆಯನ್ನು ತೀವ್ರವಾಗಿ ವಿರೋಧಿಸಿರುವ ಬ್ಯಾಂಕ್ ಒಕ್ಕೂಟಗಳು ಮುಷ್ಕರಕ್ಕೆ ಕರೆ ನೀಡಿವೆ.
ಈ ರೀತಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣದಿಂದ ಆರ್ಥಿಕತೆಯ ಪ್ರಮುಖ ವಲಯಗಳಿಗೆ ಹಾನಿಯಾಗುತ್ತದೆ. ಅಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಸದೃಢವಾಗಿ, ಆರ್ಥಿಕ ಸ್ವಾವಲಂಬನೆ ಸಾಧಿಸುತ್ತಿರುವ ಸ್ವ-ಸಹಾಯ ಗುಂಪುಗಳಿಗೆ ಮತ್ತು ಗ್ರಾಮೀಣ ಆರ್ಥಿಕತೆಗೆ ತೀವ್ರ ತೊಂದರೆಯಾಗಲಿದೆ ಎಂದು ಹೇಳಲಾಗಿದೆ.
ಎರಡು ದಿನಗಳ ಬ್ಯಾಂಕ್ ಮುಷ್ಕರ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ನ ಒಕ್ಕೂಟ ಸದಸ್ಯ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಬೆಂಬಲವಾಗಿ ಮುಷ್ಕರದಲ್ಲಿ ಭಾಗವಹಿಸಲಿವೆ. ಎರಡು ದಿನಗಳ ಮುಷ್ಕರದಿಂದ ಬ್ಯಾಂಕುಗಳ ದೈನಂದಿನ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ.
ಆದರೆ, ಮುಷ್ಕರದ ಸಂದರ್ಭದಲ್ಲಿ ತನ್ನ ಶಾಖೆಗಳ ಕಾರ್ಯ ನಿರ್ವಹಣೆ ಎಂದಿನAತೆ ಇರಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್‌ಬಿಐ ತಿಳಿಸಿದೆ.
ಇದರ ಮಧ್ಯೆ "ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ಮುಷ್ಕರದ ಸೂಚನೆಯನ್ನು ನಮಗೆ ನೀಡಿದೆ ಎಂದು ಭಾರತೀಯ ಬ್ಯಾಂಕ್‌ಗಳ ಅಸೋಸಿಯೇಷನ್, ಐಬಿಎ ಖಚಿತಪಡಿಸಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣದ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ. ಈಗಾಗಲೇ ಐಡಿಬಿಐ ಬ್ಯಾಂಕ್‌ನ ಅತಿಹೆಚ್ಚಿನ ಪಾಲಿನ ಷೇರನ್ನು 2019ರಲ್ಲಿ ಎಲ್‌ಐಸಿಗೆ ಮಾರಾಟ ಮಾಡುವ ಮೂಲಕ ಖಾಸಗೀಕರಣಗೊಳಿಸಿತ್ತು. ಅಲ್ಲದೆ ಕಳೆದ ನಾಲ್ಕು ವರ್ಷಗಳಲ್ಲಿ 14 ಸಾರ್ವಜನಿಕ ವಲಯ ಬ್ಯಾಂಕ್‌ಗಳನ್ನು ಒಟ್ಟು 5ಕ್ಕೆ ಇಳಿಕೆ ಮಾಡಿದೆ.
ಇದರಿಂದ, ಅಂದ್ರೆ ಬ್ಯಾಂಕುಗಳ ಖಾಸಗೀಕರಣದಿಂದ, ಪಿಎಸ್‌ಬಿಗಳು ಭಾರತದಲ್ಲಿನ ಒಟ್ಟು ಠೇವಣಿಗಳಲ್ಲಿ ಹೊಂದಿರುವ ಶೇ.70ರಷ್ಟನ್ನು ಪಾಲನ್ನು ಖಾಸಗಿ ಬಂಡವಾಳಕ್ಕೆ ಹಸ್ತಾಂತರಿಸಲಾಗುತ್ತದೆ. ಇದರಿಂದ ಜನಸಾಮಾನ್ಯರು ಬ್ಯಾಂಕ್‌ಗಳಲ್ಲಿಟ್ಟಿರುವ ಠೇವಣಿ ಹಣ ಅಪಾಯಕ್ಕೆ ಸಿಲುಕಲಿದೆ ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ಎಚ್ಚರಿಸಿದೆ.