ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ; ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ; ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ;
ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ


ಬೆಂಗಳೂರು: ಪುನೀತ್ ರಾಜಕುಮಾರ್ ಅವರ ಅಕಾಲಿಕ ಅಗಲಿಕೆಯ ಈ ದುಃಖಕರ ಸನ್ನಿವೇಶದಲ್ಲಿ, ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ, ಶಾಂತಿ, ಸಂಯಮದಿAದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ. ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನೀತ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ನವೆಂಬರ್ ೧ರಂದು ಕನ್ನಡ ರಾಜ್ಯೋತ್ಸವಕ್ಕೆ ಪುನೀತ್ ರಾಜ್ ಕುಮಾರ್ ಅವರ ವೆಬ್ ಸೈಟ್ ಉದ್ಘಾಟನೆ ಮಾಡಲು ಸಿಎಂ ಜೊತೆಗೆ ಭೇಟಿ ನಿಗದಿಯಾಗಿತ್ತಂತೆ. ಅದರಂತೆ ನಿನ್ನೆ ಫೋನ್ ಮಾಡಿ ಪುನೀತ್ ಅವರಲ್ಲಿ ಸಿಎಂ ಮಾತನಾಡಿದ್ದರಂತೆ. ಇಂದು ಭೇಟಿ ಮಾಡಿ ಮಾತನಾಡುವುದೆಂದು ಸಮಯ ಕೂಡ ನಿಗದಿಯಾಗಿತ್ತು, ಆದರೆ ವಿಧಿಯೆಷ್ಟು ಕ್ರೂರ, ಇಂದು ಅವರು ನಮ್ಮ ಜೊತೆ ಇಲ್ಲ ಎಂದು ಬೇಸರಪಟ್ಟುಕೊಂಡರು. 
ಡಾ ರಾಜ್ ಕುಮಾರ್ ಅವರ ಕುಟುಂಬದ ಜೊತೆ ನನಗೆ ಹಿಂದಿನಿAದಲೂ ಒಡನಾಟವಿತ್ತು. ಪುನೀತ್ ರಾಜ್ ಕುಮಾರ್ ಅವರು ಯುವ ಜನಾಂಗಕ್ಕೆ ಮಾದರಿಯಾಗಿದ್ದು, ಸರಳ, ಸಂಭಾವಿತ ಮನುಷ್ಯ, ಅವರು ಚಿತ್ರರಂಗದಲ್ಲಿ ಇನ್ನೂ ಎತ್ತರಕ್ಕೆ ಹೋಗುವವರಿದ್ದರು. ಒಬ್ಬ ಪ್ರತಿಭಾನ್ವಿತ ನಟನಾಗಿ ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಜೊತೆಯಾಗಿದ್ದರು, ಅವರು ಕೇವಲ ನಾಯಕ ಮಾತ್ರವಲ್ಲ, ನಾಯಕತ್ವ ಇರುವ ನಟ, ಡಾ.ರಾಜ್ ಕುಮಾರ್ ಅವರ ನಡೆ-ನುಡಿಗಳನ್ನು ಮೈಗೂಡಿಸಿಕೊಂಡಿದ್ದವರು, ಎಲ್ಲರಿಗೂ ಅಚ್ಚುಮೆಚ್ಚಾಗಿದ್ದರು ಎಂದು ಸಿಎಂ ಹೇಳಿ ಭಾವುಕರಾದರು. 

ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿರುವುದು ಅತೀವ ಆಘಾತವನ್ನುಂಟು ಮಾಡಿದೆ ಎಂದು ತಿಳಿಸಿರುವ ಅವರು, ಕಿರಿಯ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ ರಾಷ್ಟçಪ್ರಶಸ್ತಿ ಪುರಸ್ಕöÈತ ಜನಪ್ರಿಯ ಮೇರು ನಟ, ಯುವಜನತೆಯ ಕಣ್ಮಣಿ, ಯೂತ್ ಐಕಾನ್ ಆಗಿದ್ದ ಪುನೀತ್ ನಿಧನ ಹೊಂದಿರುವುದು ಕಲಾರಂಗಕ್ಕೆ ಬಹಳ ದೊಡ್ಡ ನಷ್ಟ, ವಿಧಿಯ ಕ್ರೂರ ಆಟ'' ಎಂದು ಬಣ್ಣಿಸಿದ್ದಾರೆ.
"ವೈಯಕ್ತಿಕವಾಗಿ ಅತ್ಯಂತ ಆತ್ಮೀಯ ಸಹೃದಯ ಬಂಧುವನ್ನು ಕಳೆದುಕೊಂಡಿದ್ದೇನೆ. ಅವರ ಉತ್ಸಾಹ, ಪ್ರತಿಭೆ, ಅವರ ಅನೇಕ ಅತ್ಯುತ್ತಮ ಚಲನಚಿತ್ರಗಳನ್ನು, ಕನ್ನಡದ ಸಾಂಸ್ಕöÈತಿಕ ರಾಯಭಾರಿಯಂತೆ ನಾಡಿನ ಸಮಸ್ತ ಜನತೆಯ ಮನೆ, ಮನ ತಲುಪಿದ್ದ ಅವರ ವ್ಯಕ್ತಿತ್ವವನ್ನು ಮರೆಯುವುದು ಸಾಧ್ಯವೇ ಇಲ್ಲ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಜ್ಯಪಾಲರ ಸಂತಾಪ


ಬೆAಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ.  ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಸ್ಥರು ಹಾಗೂ ನಾಡಿನ ಜನತೆಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.