ತುರುವೇಕೆರೆ: ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ಲಾಕ್‌ಡೌನ್ ಭೀತಿ ಬೇಡ: ಶಾಸಕ ಮಸಾಲಾ ಜಯರಾಂ 

ತುರುವೇಕೆರೆ: ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ಲಾಕ್‌ಡೌನ್ ಭೀತಿ ಬೇಡ: ಶಾಸಕ ಮಸಾಲಾ ಜಯರಾಂ

ತುರುವೇಕೆರೆ: ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ಲಾಕ್‌ಡೌನ್ ಭೀತಿ ಬೇಡ: ಶಾಸಕ ಮಸಾಲಾ ಜಯರಾಂ 


ತುರುವೇಕೆರೆ: ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ
ಲಾಕ್‌ಡೌನ್ ಭೀತಿ ಬೇಡ: ಶಾಸಕ ಮಸಾಲಾ ಜಯರಾಂ 


ತುರುವೇಕೆರೆ: ರಾಗಿ ಕೇಂದ್ರ ಪ್ರಾರಂಭವಾಗಿದ್ದು ರೈತರು ನೇರವಾಗಿ ಉತ್ತಮ ಗುಣಮಟ್ಟದ ರಾಗಿಯನ್ನು ಖರೀದಿ ಕೇಂದ್ರಕ್ಕೆ ಬಿಡಬೇಕೆಂದು ಶಾಸಕ ಮಸಾಲಾ ಜಯರಾಮ್ ಹೇಳಿದರು.


ಪಟ್ಟಣದ ಕೃಷಿ ಮಾರುಕಟ್ಟೆ ಆವರಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ವತಿಯಿಂದ ಸರ್ಕಾರಿ ಸಹಾಯ ಧನದೊಂದಿಗೆ 2021-22 ನೇ ಸಾಲಿಗೆ ಆರಂಭಗೊAಡ ರಾಗಿ ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು,  ರೈತರು ವರ್ಷವಿಡೀ ಕಷ್ಟಪಟ್ಟು ಬೆವರು ಸುರಿಸಿ ಬೆಳೆದ ಬೆಳೆಯನ್ನು ಮಧ್ಯವರ್ತಿಗಳ ಬಾಯಿಗೆ ಹಾಕದಂತೆ ಮನವೊಲಿಸಿ ರೈತರೇ ನೇರವಾಗಿ ಎಪಿಎಂಸಿ ರಾಗಿ ಖರೀದಿ ಕೇಂದ್ರದಲ್ಲಿ ವ್ಯವಹರಿಸುವಂತೆ ಮಾಡಿ ಎಂದು ಅಧಿಕಾರಿಗಳಿಗೆ ಶಾಸಕ ಮಸಾಲ ಜಯರಾಮ್ ತಾಕೀತು ಮಾಡಿದರು.


ರೈತರ ಹೆಸರಿನಲ್ಲಿ ದಳ್ಳಾಳಿಗಳು ರಾಗಿ ನೀಡಿ ಸರ್ಕಾರಕ್ಕೆ ಮೋಸ ಮಾಡುತ್ತಾರೆ. ದಳ್ಳಾಳಿಗಳ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಸರ್ಕಾರ ಬೆಂಬಲ ಬೆಲೆ ನಿಗದಿ ಮಾಡಿ ರಾಗಿ ಖರೀದಿ ಕೇಂದ್ರ ಪ್ರಾರಂಭಿಸಿ ಮಾ. 31 ರವರೆಗೆ ಎಫ್‌ಎಕ್ಯೂ ಗುಣಮಟ್ಟದ ರಾಗಿ ಖರೀದಿಸಲಿದ್ದು ಸರ್ಕಾರ ಪ್ರತಿ ಕ್ವಿಂಟಾಲ್ ರಾಗಿಗೆ 3377 ರೂ. ಗಳನ್ನು ನೀಡಲಿದೆ.


ಈ ದಿಸೆಯಲ್ಲಿ ರಾಗಿ ಬೆಳೆದ ರೈತರು ಪಹಣಿ, ಹೆಸರು, ವಿಳಾಸದೊಂದಿಗೆ ಬೆಳೆದ ರಾಗಿಯ ಸ್ಯಾಂಪಲ್ ನೀಡಿ ಒಂದು ಚೀಲಕ್ಕೆ 50 ಕೆ.ಜಿ. ಸಾಮರ್ಥ್ಯದ ಗೋಣಿ ಚೀಲದಲ್ಲಿ ಮಾತ್ರ ನೀಡಬೇಕು. ತಾಲ್ಲೂಕಿನ ರೈತರು ನಿಗದಿತ ದಿನಾಂಕವನ್ನು ಮುಂಗಡವಾಗಿ ಕಾಯ್ದಿರಿಸಿಕೊಂಡು ಅಗತ್ಯ ದಾಖಲೆಗಳೊಂದಿಗೆ ಆ ದಿನ ರಾಗಿಯನ್ನು ನೀಡಬಹುದು ಎಂದರು.  
ತಹಶೀಲ್ದಾರ್ ನಯೀಂ ಉನ್ನಿಸಾ ಮಾತನಾಡಿ, ರೈತರ ಪಹಣಿಯಲ್ಲಿ ತೆಂಗು, ಅಡಿಕೆ, ಬಾಳೆ ಎಂದು ತಪ್ಪಾಗಿ ನೊಂದಣಿಯಾಗಿದ್ದಲ್ಲಿ ಅಂತಹ ರೈತರು ತಾಲೂಕಿನ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸರಿಪಡಿಸಿಕೊಳ್ಳುವ ಮೂಲಕ ಇದರ ಸದುಪಯೋಗಪಡಿಸಿಕೊಳ್ಳಿ ಎಂದರು.


ರಾಗಿ ಖರೀದಿ ಅಧಿಕಾರಿ ರವಿಕುಮಾರ್ ಮಾತನಾಡಿ, ತಾಲೂಕಿನಲ್ಲಿ ರಾಗಿ ಖರೀದಿ ಕೇಂದ್ರ ಪ್ರಾರಂಭವಾಗಿದೆ. ಮಾ. 31 ರವರೆಗೆ ನೊಂದಣಿಗೆ ಸಮಯಾವಕಾಶವಿದೆ. ರೈತರು ನೊಂದಣಿ ಮಾಡಿಸಲು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ. ಪ್ರತಿ ರೈತರಿಂದ ಒಂದು ಎಕರೆಗೆ 10 ಕ್ವಿಂಟಾಲ್‌ನAತೆ ಗರಿಷ್ಟ 20 ಕ್ವಿಂಟಾಲ್ ರಾಗಿ ಖರೀದಿಸಲಾಗುವುದು ಎಂದರು.


ಸಮಾರAಭದಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ಕೆಂಪರಾಜು, ಎಪಿಎಂಸಿ ಅಧ್ಯಕ್ಷ ನರಸಿಂಹ, ಉಪಾಧ್ಯಕ್ಷ ಪ್ರಸನ್ನ, ಸದಸ್ಯರಾದ ವಿ.ಟಿ. ವೆಂಕಟರಾಮು, ಮಧು, ವಿಜಿಯೇಂದ್ರ, ಕಾಂತರಾಜು, ನರಸಿಂಹರಾಜು, ಚಂದ್ರಣ್ಣ, ಪ್ರಸಾದ್, ವಿ.ಬಿ. ಸುರೇಶ್,  ಪ.ಪಂ. ಮಾಜಿ ಅಧ್ಯಕ್ಷ ಅಂಜನ್‌ಕುಮಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಪೂಜಾ, ಎಪಿಎಂಸಿ ಮಾಜಿ ಅಧ್ಯಕ್ಷ ಕೊಂಡಜ್ಜಿ ವಿಶ್ವನಾಥ್, ಆರ್‌ಎಂಸಿ ಕಾರ್ಯದರ್ಶಿ ವೆಂಕಟೇಶ್, ಬಾಬು ಸೇರಿದಂತೆ ಎಪಿಎಂಸಿ ಸದಸ್ಯರುಗಳು ಹಾಗೂ ರೈತರು ಪಾಲ್ಗೊಂಡಿದ್ದರು.



ಲಾಕ್‌ಡೌನ್ ಆತಂಕ ಬೇಡ


ಕೊರೋನಾ ಲಾಕ್ ಡೌನ್‌ನಿಂದ ಮತ್ತೆ ಎಲ್ಲಿ ಖರೀದಿ ಕೇಂದ್ರ ಮುಚ್ಚುವುದೋ ಎಂಬ ಆತಂಕದಲ್ಲಿ ರಾಗಿ ಕೇಂದ್ರಕ್ಕೆ ರೈತರು ಮುಗಿಬಿದ್ದಿದ್ದು ರೈತರು ಯಾವುದೇ ಆತಂಕಕ್ಕೆ ಒಳಗಾಗದೆ ಕೊಳ್ಳುವ ಅವಧಿ ಮುಂದೂಡಲು ಸರ್ಕಾರಕ್ಕೆ ಒತ್ತಾಯಿಸುವುದಾಗಿ ಶಾಸಕ ಮಸಾಲಾ ಜಯರಾಂ ಭರವಸೆ ನೀಡಿದರು.