‘2024 ರ ಚುನಾವಣೆ ನಮ್ಮ ಗುರಿಯಲ್ಲ’  ಪಾದಯಾತ್ರೆ ಹಿಂಸೆ,ದ್ವೇಷ, ಜನರ ಸಮಸ್ಯೆಗಳ ವಿರುದ್ಧ : ರಾಹುಲ್ ಗಾಂಧಿ

 ‘2024 ರ ಚುನಾವಣೆ ನಮ್ಮ ಗುರಿಯಲ್ಲ’  ಪಾದಯಾತ್ರೆ ಹಿಂಸೆ,ದ್ವೇಷ, ಜನರ ಸಮಸ್ಯೆಗಳ ವಿರುದ್ಧ : ರಾಹುಲ್ ಗಾಂಧಿ

 ‘2024 ರ ಚುನಾವಣೆ ನಮ್ಮ ಗುರಿಯಲ್ಲ’    ಪಾದಯಾತ್ರೆ ಹಿಂಸೆ,ದ್ವೇಷ, ಜನರ ಸಮಸ್ಯೆಗಳ ವಿರುದ್ಧ : ರಾಹುಲ್ ಗಾಂಧಿ



 ‘2024 ರ ಚುನಾವಣೆ ನಮ್ಮ ಗುರಿಯಲ್ಲ’ 


ಪಾದಯಾತ್ರೆ ಹಿಂಸೆ,ದ್ವೇಷ, ಜನರ ಸಮಸ್ಯೆಗಳ ವಿರುದ್ಧ : ರಾಹುಲ್ ಗಾಂಧಿ

ತುರುವೇಕೆರೆ: ‘ಭಾರತವನ್ನು ಒಂದುಗೂಡಿಸುವುದು ಭಾರತ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವೇ ಹೊರತು, 2024ರ ಚುನಾವಣೆ ನಮ್ಮ ಗುರಿಯಲ್ಲ. ಹಿಂಸಾಚಾರ, ದ್ವೇಷದಿಂದ ಮಾನಸಿಕವಾಗಿ ವಿಭಜನೆಯಾಗುತ್ತಿರುವ ಭಾರತವನ್ನು ಒಗ್ಗೂಡಿಸುವುದು, ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಕುಸಿಯುತ್ತಿದ್ದು, ಕೆಲ ಉದ್ಯಮಿಗಳ ಬಳಿ ದೇಶದ ಸಂಪತ್ತು ಸೇರುತ್ತಿರುವುದರ ವಿರುದ್ಧ, ರ‍್ಥಿಕ ಕುಸಿತ ಹಾಗೂ ನಿರುದ್ಯೋಗ ಹೆಚ್ಚಾಗುತ್ತಿರುವುದರ ವಿರುದ್ಧ, ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ತರವಾಗಿದ್ದು, ಅವರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಈ ಯಾತ್ರೆಯ ಪ್ರಮುಖ ಉದ್ದೇಶ’ ಎಂದು ರಾಹುಲ್ ಗಾಂಧಿ ಅವರು ಸ್ಪಷ್ಟಪಡಿಸಿದರು.

ಭಾರತ ಐಕ್ಯತಾ ಯಾತ್ರೆ ಭಾಗವಾಗಿ ಜಿಲ್ಲೆಯ ತುರುವೇಕೆರೆಯಲ್ಲಿ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ರ‍್ಗೆ ಸಮ್ಮುಖದಲ್ಲಿ ಮಾಧ್ಯಮ ಸಂವಾದ ನಡೆಸಿದ ಕಾಂಗ್ರೆಸ್ ಅಧಿನಾಯಕ  ರಾಹುಲ್ ಗಾಂಧಿ ಸುದ್ದಿಗಾರರ ಪ್ರಶ್ನೆಗಳಿಗೆ  ನೀಡಿದ ಉತ್ತರಗಳು ಹೀಗಿವೆ:


ಪಿಎಫ್ಐ ನಿಷೇಧ ಹಾಗೂ ಪಿಎಫ್ ಐಗೆ ಪ್ರೋತ್ಸಾಹ ನೀಡಿದ್ದೇ ಕಾಂಗ್ರೆಸ್ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ದೇಶದಲ್ಲಿ ಯಾರೇ ದ್ವೇಷ ಹಬ್ಬಿಸಿ ಅಶಾಂತಿ ಸೃಷ್ಟಿಸುವವರು ಯಾವುದೇ ಸಮುದಾಯದವರಾದರೂ ಅವರನ್ನು ನಾವು ವಿರೋಧಿಸುತ್ತೇವೆ’ ಎಂದು ತಿಳಿಸಿದರು.


ಕಾಂಗ್ರೆಸ್ ನಾಯಕರು ಬೇಲ್ ಮೇಲೆ ಹೊರಗಿದ್ದು, ಸರ‍್ಕಾರದ ವಿರುದ್ಧ ಹೇಗೆ 40% ಕಮಿಷನ್ ಆರೋಪ ಮಾಡುತ್ತಿರಿ ಎಂಬ ಪ್ರಶ್ನೆಗೆ, ‘ಬಿಜೆಪಿ ಹಾಗೂ ಆರ್ ಎಸ್ ಎಸ್ ದೇಶದ ಸಂವಿಧಾನಿಕ ಸಂಸ್ಥೆಗಳನ್ನು ರಾಜಕೀಯ ಲಾಭಕ್ಕೆ ದುರ‍್ಬಳಕೆ ಮಾಡಿಕೊಳ್ಳುತ್ತಿವೆ. ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಈ ಸಂಸ್ಥೆಗಳ ದುರ‍್ಬಳಕೆ ಆಗುತ್ತಿದೆ. ಇವುಗಳನ್ನು ಬಳಸಿಕೊಂಡು ಚುನಾಯಿತ ಸರ‍್ಕಾರಗಳನ್ನು ಕೆಡವಲಾಗುತ್ತಿದೆ’ ಎಂದು ಆರೋಪಿಸಿದರು.


ಜನರ ಜತೆ ಮಾತನಾಡುವಾಗ ಅವರ ನೋವು ನನಗೆ ಅನುಭವವಾಗಬೇಕು ಎಂಬುದು ಈ ಯಾತ್ರೆಯ ಉದ್ದೇಶ. ಈ ವಿಚಾರದಲ್ಲಿ ನನಗೆ ಬಹು ದೊಡ್ಡ ಅನುಭವವಾಗಿದೆ. ನನಗೆ ಇದೊಂದು ಕಲಿಕೆಯ ಮಾರ‍್ಗವಾಗಿದೆ. ಯಾತ್ರೆ ಆರಂಭವಾಗಿ ಕೇವಲ 31 ದಿನಗಳಾಗಿದ್ದು, ನಾನು ತಪಸ್ಸಿನಲ್ಲಿ ನಂಬಿಕೆ ಇಟ್ಟಿದ್ದೇನೆ. ನಮ್ಮ ಜನರಲ್ಲಿ ಅಪಾರ ದೂರದೃಷ್ಟಿಯಿದ್ದು, ನಮ್ಮ ರಾಜಕೀಯ ವ್ಯವಸ್ಥೆಯಿಂದ ಅದು ವ್ಯರ್ಥವಾಗುತ್ತಿದೆ. ಹೀಗಾಗಿ ಈ ಯಾತ್ರೆಗೆ ಎಲ್ಲ ವರ‍್ಗದ ಜನರ ಬೆಂಬಲ ಸಿಗುತ್ತಿದೆ’ ಎಂದರು.

 ಚೀನಾ ಸೇನೆ ಭಾರತ ಗಡಿಯೊಳಗೆ ಅತಿಕ್ರಮಣ ಮಾಡಿದೆ. ಆದರೆ ರ‍್ಕಾರ ಸಂಸತ್ತಿನಲ್ಲಿ ಇದರ ರ‍್ಚೆಗೆ ಅವಕಾಶ ನೀಡಲು ನಿರಾಕರಿಸುತ್ತದೆ. ಪ್ರಧಾನಮಂತ್ರಿಗಳೇ ದೇಶದ ಗಡಿಯಲ್ಲಿ ಯಾವುದೇ ಅತಿಕ್ರಮಣ ಆಗಿಲ್ಲ ಎಂದು ಹೇಳುತ್ತಾರೆ. ಎಂದು ವಾಗ್ದಾಳಿ ನಡೆಸಿದರು.


ರಾಜಸ್ಥಾನದಲ್ಲಿ ಅದಾನಿ ಅವರಿಗೆ ಬಂಡವಾಳ ಹೂಡಿಕೆಗೆ ಅವಕಾಶ ನೀಡಿರುವ ಬಗ್ಗೆ ಕೇಳಿದಾಗ, ‘ಅದಾನಿ ಅವರು ರಾಜಸ್ಥಾನದಲ್ಲಿ 67 ಸಾವಿರ ಕೋಟಿ ರು. ಬಂಡವಾಳ ಹೂಡಿಕೆಗೆ ಪ್ರಸ್ತಾವನೆ ನೀಡಿದ್ದಾರೆ. ಯಾವುದೇ ರಾಜ್ಯದ ಮುಖ್ಯಮಂತ್ರಿ ಇದನ್ನು ನಿರಾಕರಿಸುವುದಿಲ್ಲ, ನಿರಾಕರಿಸುವುದು ಸರಿಯೂ ಅಲ್ಲ. ನಾನು ಉದ್ಯಮಿಗಳು ಅಥವಾ ಬೇರೆ ವ್ಯಾಪಾರಸ್ಥರ ವಿರುದ್ಧವಿಲ್ಲ. ಆದರೆ ಕೆಲವರಿಗೆ ಮಾತ್ರ ಆದ್ಯತೆ ನೀಡುವುದು ದೇಶಕ್ಕೆ ಮಾರಕ. ಎಂದು ತಿಳಿಸಿದರು.


ಆದಿಚುಂಚನಗಿರಿಯಿಂದ ಬಂದ ಕಾಂಗ್ರೆಸ್ ಉನ್ನತ ನಾಯಕ ರಾಹುಲ್ ಗಾಂಧಿ ನಾಯಕತ್ವದ ಪಾದಯಾತ್ರಿಗರ  ತಂಡವನ್ನು ಜಿಲ್ಲೆಯ ಕಾಂಗ್ರೆಸ್ ನಾಯಕರು ಬರಮಾಡಿಕೊಂಡರು. ನಂತರ ಮಾಯಸಂದ್ರದಿಂದ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಯಾತ್ರೆಯುದ್ದಕ್ಕೂ ವಿವಿಧ ಕಲಾ ತಂಡಗಳು ಸ್ವಾಗತಿಸಿದವು.ಶಾಸಕ ಡಾ.ಜಿ.ಪರಮೇಶ್ವರ ಸೇರಿದಂತೆ, ಶಾಸಕರು, ಸಾಕಷ್ಟು ಸಂಖ್ಯೆಯ ಕಾರ‍್ಯಕರ‍್ತರು ಭಾಗವಹಿಸಿದ್ದರು. ಪಾದಯಾತ್ರೆಯು ಟಿ.ಬಿ. ಕ್ರಾಸ್ನಿಂದ ತುರುವೇಕೆರೆ ಮಾರ‍್ಗದಲ್ಲಿ ಸಾಗಿತು.

(ಹೆಚ್ಚಿನ ವರದಿಗಳು )

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ-ಗೆದ್ದ ನಂತರ ಸಿಎಂ ಆಯ್ಕೆ : ರಾಹುಲ್ ಗಾಂಧಿ

ಕರ್ನಾಟಕದಲ್ಲಿ ಪಕ್ಷದಲ್ಲಿನ ಆಂತರಿಕ ತಿಕ್ಕಾಟ ಹಾಗೂ ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ, ‘ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ತಿಕ್ಕಾಟವಿಲ್ಲ. ನಮ್ಮದು ಸರ್ವಾಧಿಕಾರಿ ಮನಸ್ಥಿತಿಯ ಪಕ್ಷವಲ್ಲ. ನಮ್ಮಲ್ಲಿ ಎಲ್ಲರ ಅಭಿಪ್ರಾಯ, ಭಾವನೆಗೆ ಅವಕಾಶವಿದೆ. ನಮ್ಮಲ್ಲಿ ಚರ್ಚೆಗೆ, ವಿಭಿನ್ನ ದೃಷ್ಟಿಕೋನಕ್ಕೆ ಅವಕಾಶವಿದೆ. ಅದಕ್ಕೊಂದು ಪದ್ಧತಿ ಇದೆ. ಚುನಾವಣೆಯಲ್ಲಿ ಗೆಲ್ಲಲು ಎಲ್ಲ ನಾಯಕರೂ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ನಮ್ಮಲ್ಲಿ ಹಲವು ಸಮರ್ಥ ನಾಯಕರಿದ್ದು, ಪಕ್ಷ ಚುನಾವಣೆಯಲ್ಲಿ ಗೆದ್ದ ನಂತರ, ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು’ ಎಂದವರು ರಾಹುಲ್ ಗಾಂಧಿ.

ಮುಂಬರುವ ರಾಜ್ಯ ಚುನಾವಣೆಯಲ್ಲಿ ಬಹುಮತ ಬರದಿದ್ದರೆ ಕಾಂಗ್ರೆಸ್ ಪಕ್ಷವು ಜೆಡಿಎಸ್ ಜತೆ ಕೈ ಜೋಡಿಸುತ್ತದೆಯೇ ಎಂಬ ಪ್ರಶ್ನೆಗೆ,

‘ಈ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಸಮರ್ಥ ಉತ್ತರ ನೀಡುತ್ತಾರೆ. ನನ್ನ ಪ್ರಕಾರ ಕಾಂಗ್ರೆಸ್ ಪಕ್ಷ ಮುಂಬರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ. ಈ ಯಾತ್ರೆಯ ಅನುಭವದಲ್ಲಿ, ವಿವಿಧ ವರ್ಗದ ಜನರ ಜತೆಗಿನ ಚರ್ಚೆಯಲ್ಲಿ ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ವಿಚಾರವಾಗಿ ನಾಗರೀಕರು ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು

 

ಆರ್ ಎಸ್ ಎಸ್ ಬ್ರಿಟಿಷರ ಪರ ಇತ್ತು ‘

ಭಾರತ ವಿಭಜನೆಗೆ ನಿಮ್ಮ ಪೂರ್ವಜರು ಕಾರಣರಾಗಿದ್ದು, ಈಗ ಭಾರತ ಜೋಡೋ ಯಾತ್ರೆ ಮಾಡುತ್ತಿರುವುದೇಕೆ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ಬ್ರಿಟೀಷರ ವಿರುದ್ಧ ಹೋರಾಡಿ, ಜೈಲುವಾಸ ಅನುಭವಿಸಿದ ಮಹಾತ್ಮ ಗಾಂಧಿ, ನೆಹರೂ, ಸರ್ದಾರ್ ಪಟೇಲ್ ಹಾಗೂ ಇತರರು ಕಾಂಗ್ರೆಸಿಗರು. ಆರ್ ಎಸ್ಎಸ್ ನವರು ಬ್ರಿಟೀಷರ ಪರವಾಗಿ ನಿಂತಿದ್ದರು. ಸಾರ್ವಕರ್ ಅವರು ಬ್ರಿಟೀಷರಿಂದ ಆರ್ಥಿಕ ನೆರವು ಪಡೆಯುತ್ತಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನ, ಹಸಿರು ಕ್ರಾಂತಿ ತಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಈಗ ದ್ವೇಷವನ್ನು ಸೃಷ್ಟಿಸಿ, ದೇಶ ವಿಭಜಿಸುತ್ತಿದ್ದಾರೆ ಎಂದವರು ರಾಹುಲ್ ಗಾಂಧಿ.

 

ರಾಹುಲ್ ಜೊತೆ ಎಸ್‍.ಆರ್.ಶ್ರೀನಿವಾಸ್ ಹೆಜ್ಜೆ

ತುರುವೇಕರೆ; ಜೆಡಿಎಸ್‍ನಿಂದ ಹೊರಬಂದಿರುವ ಗುಬ್ಬಿಯ ಶಾಸಕ ಹಾಗೂ ಮಾಜಿ ಸಚಿವ ಎಸ್‍.ಆರ್.ಶ್ರೀನಿವಾಸ್ (ವಾಸಣ್ಣ) ಶನಿವಾರ  ಬೆಳಿಗ್ಗೆ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಸಮೀಪದ ಟಿ.ಬಿ.ಕ್ರಾಸ್ ನಿಂದ ಆರಂಭದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದರು. ಕಾಂಗ್ರೆಸ್ ಸೇರಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಆ ಪಕ್ಷದಿಂದ ಟಿಕೆಟ್ ಪಡೆದು ಕಣಕ್ಕಿಳಿಯುವ ಉಮೇದಿನಲ್ಲಿರುವ ಶ್ರೀನಿವಾಸ್ ಜೊತೆಯಲ್ಲೇ ಆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಹೈಕೋರ್ಟ್ ವಕೀಲ ಜಿ.ಎಸ್.ಪ್ರಸನ್ನಕುಮಾರ್ ಕೂಡಾ ಪಕ್ಕದಲ್ಲಿ ನಡೆಯುತ್ತಾ ರಾಹುಲ್ ಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು. ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ ಹಾಗೂ ಮಾಜಿ ಶಾಸಕ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಕೂಡಾ ಈ ಸಂದರ್ಭದಲ್ಲಿ ಜೊತೆಯಲ್ಲಿ ಸಾಗಿದರು.

 

 

ಖರ್ಗೆ-ತರೂರ್ ರಿಮೋಟ್  ಕಂಟ್ರೋಲ್ ಆಗಲ್ಲ

ತುರುವೇಕೆರೆ: ‘ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ‍್ಥಾನದ  ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಹಿರಿಯ ನಾಯಕರಾದ ರಾಜ್ಯ ಸಭಾ ಸದಸ್ಯರಾದ  ಮಲ್ಲಿಕಾರ್ಜುನ ಖರ್ಗೆ ಅಥವಾ ಶಶಿ ತರೂರ್ ಇಬ್ಬರೂ ಸ್ವತಂತ್ರ ದೃಷ್ಟಿಕೋನಗಳನ್ನು ಉಳ್ಳವರು. ಕಾನೂನು ತಿಳುವಳಿಕೆಯುಳ್ಳವರು. ಇವರಿಬ್ಬರಲ್ಲಿ ಯಾರೇ ಗೆದ್ದರೂ ಇವರು ಹೈಕಮಾಂಡ್‍ನ ರಿಮೋಟ್ ಕಂಟ್ರೋಲ್ ಆಗುತ್ತಾರೆ ಎಂದು ನಾನು ಭಾವಿಸಲಾರೆ’ ಎಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅಥವಾ ಶಶಿ ತರೂರ್‌ಅವರಲ್ಲಿ ಯಾರು ಗೆದ್ದರೂ, ಅವರು ರಿಮೋಟ್‌ಕಂಟ್ರೋಲ್‌ಆಗಿರಲಾರರು ಎಂದು ನಾನು ಭಾವಿಸಿದ್ದೇನೆಂದು ಕಾಂಗ್ರೆಸ್‌ನಾಯಕ ರಾಹುಲ್‌ಗಾಂಧಿ ಹೇಳಿದ್ದಾರೆ.

ಭಾರತ ಜೋಡಿಸಿ ಯಾತ್ರೆ ಆದಿಚುಂಚನಗಿರಿ ಮುಖಾಂತರ ಮಾಯಸಂದ್ರ ಮಾರ್ಗವಾಗಿ ತುರುವೇಕೆರೆ ತಲುಪಿದ್ದು, ಅರಳೀಕೆರೆ ಪಾಳ್ಯದ ಬಳಿ ಮಧ್ಯಾಹ್ನದ ಊಟದ ಬಿಡುವಿನ ಸಮಯದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೇ ಆಯ್ಕೆಯಾದರೂ, ಅವರು ಗಾಂಧಿ ಕುಟುಂಬದ ರಿಮೋಟ್‌ಕಂಟ್ರೊಲ್ ಆಗಲಿದ್ದಾರೆ’ ಎಂಬ ಟೀಕೆಗಳು ಈಗಾಗಲೇ ಕೇಳಿ ಬಂದಿದ್ದು ಈ ಕುರಿತು ರಾಹುಲ್‌ಗಾಂಧಿ ಅವರು ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದರು.

 

 

ಕಾರ್ಯಕರ್ತನ ಮನೆಯಲ್ಲಿ ಉಪಹಾರ

ತುರುವೇಕೆರೆ : ತಾಲ್ಲೂಕಿನ ಮಾಯಸಂದ್ರದ ಟಿ.ಬಿ ಕ್ರಾಸ್ ನಿಂದ ಶನಿವಾರ ಬೆಳಗ್ಗೆ ಪಾದ ಯಾತ್ರೆ ಆರಂಭಿಸಿದ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ಹೆಡ್ಡನಕಟ್ಟೆ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತ ರಾಜೇಶ್ ಅವರ ಮನೆಯಲ್ಲಿ ಉಪಹಾರ ಸೇವಿಸಿ, ಪಾದಯಾತ್ರೆ ಮುಂದುವರೆಸಿದರು.ತಿಂಡಿ ತಿಂದು, ಕಾಫಿ ಕುಡಿದ ರಾಹುಲ್  ರಾಜೇಶ ಅವರ ಪುತ್ರಿ ಸಿಂಚನ ವ್ಯಾಸಂಗದ ಬಗ್ಗೆ ವಿಚಾರಿಸಿದರು ಹಾಗೂ ಕ್ರೀಡಾಪಟುವಾದ ಆಕೆಗೆ ಹಾಕಿಯಲ್ಲಿ ಉತ್ತಮ ಸಾಧನೆ ಮಾಡುವಂತೆ ಸಲಹೆ ಮಾಡಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಡಾ.ಜಿ.ಪರಮೇಶ್ವರ ಇತರರು ಇದ್ದರು