ತುಮಕೂರು ಜಿಲ್ಲೆ ಶಂಕರಪ್ಪ ಅಮ್ಮನಘಟ್ಟ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ
ತುಮಕೂರು ಜಿಲ್ಲೆ ಶಂಕರಪ್ಪ ಅಮ್ಮನಘಟ್ಟ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು: ಕರ್ನಾಟಕ ಸರ್ಕಾರ ೨೦೨೧ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಕೃಷಿ ಕ್ಷೇತ್ರದಲ್ಲಿ ತುಮಕೂರು ಜಿಲ್ಲೆಯ ಸಾವಯವ ಕೃಷಿಕ ಶಂಕರಪ್ಪ ಅಮ್ಮನಘಟ್ಟ ಸೇರಿ ೬೬ ಸಾಧಕರಿಗೆ ಈ ಬಾರಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪ್ರತಿವರ್ಷ ನೀಡಲಾಗುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಈ ವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಭಾನುವಾರ ಪ್ರಶಸ್ತಿ ಪುರಸ್ಕöÈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಸೇವಾಸಿಂಧು ಮೂಲಕ ಜನರು ಮಾಡಿದ ಶಿಫಾರಸುಗಳನ್ನು ಪರಿಶೀಲಿಸಿ ಹಾಗೂ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿದ ಅನೇಕ ಮಹನೀಯರನ್ನು ಹೆಕ್ಕಿ ತೆಗೆದು ಪ್ರಶಸ್ತಿ ಸಲಹಾ ಸಮಿತಿ ಮತ್ತು ಮಖ್ಯಮಂತ್ರಿಗಳ ಅಧ್ಯಕ್ಷತೆಯ ಪ್ರಶಸ್ತಿ ಆಯ್ಕೆ ಸಮಿತಿ ಮುಂದೆ ಇಡಲಾಗಿತ್ತು.
ಈ ವರ್ಷ ಭಾರತ ಸ್ವಾತಂತ್ರ÷್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅದರ ಸ್ಮರಣೆಗಾಗಿ ರಾಜ್ಯದ ೧೦ ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿ ಈ ವರ್ಷಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಶಂಕರಪ್ಪ ಅಮ್ಮನಘಟ್ಟ: ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಡೆದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಮ್ಮನ ಘಟ್ಟದ ಸಾವಯವ ಕೃಷಿಕ ಎ. ಶಂಕರಪ್ಪನವರು ತಮ್ಮ ತೋಟದಲ್ಲಿ ನಾನಾ ತರಹದ ಹಣ್ಣಿನ ಗಿಡಗಳನ್ನು ಬೆಳೆಸಿದ್ದಾರೆ. ಸಾವಯವ ಆಹಾರ ಪದ್ಧತಿ, ಮಳೆ ನೀರು ಸಂಗ್ರಹಣೆ, ನಿಸರ್ಗ ಸಾವಯವ ಕೃಷಿ ಪರಿವಾರದಲ್ಲಿ ನಿರ್ದೇಶಕರಾಗಿ ರೈತರನ್ನು ಪ್ರೇರೇಪಿಸುತ್ತಿದ್ಧಾರೆ. ಇವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.