ಮೆಕ್ಕೆಜೋಳ ಖರೀದಿ ಮಾಡುತ್ತಿಲ್ಲವೇಕೆ? ರಾಜ್ಯ ಸರಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ
ಮೆಕ್ಕೆಜೋಳ ಖರೀದಿ ಮಾಡುತ್ತಿಲ್ಲವೇಕೆ?
ರಾಜ್ಯ ಸರಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ
ಹಾನಗಲ್ : ರಾಜ್ಯ ಸರಕಾರ ಮೆಕ್ಕೆಜೋಳಕ್ಕೆ 1850 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದೆ, ಆದರೆ ಖರೀದಿ ಮಾಡುತ್ತಿಲ್ಲ, ಖರೀದಿ ಮಾಡದೆ ಬೆಂಬಲ ಬೆಲೆ ಘೋಷಿಸಿ ಏನು ಉಪಯೋಗಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಹಾನಗಲ್ ವಿಧಾನಸಭೆ ಕ್ಷೇತ್ರದ ಮಾಸನಕಟ್ಟೆ ಗ್ರಾಮದಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ರ‍್ಥಿ ಶ್ರೀನಿವಾಸ್ ಮಾನೆ ಪರ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದರು.
ರಾಜ್ಯದಲ್ಲಿ ಬಿಜೆಪಿ ಬಂದು ಎರಡೂ ಕಾಲು ರ‍್ಷ ಆಯ್ತು? ಈ ರ‍್ಕಾರ ಜನರಿಗಾಗಿ ಏನಾದ್ರೂ ಮಾಡಿದೆಯಾ? ನಾನು ಏಳು ಕೆ.ಜಿ ಅಕ್ಕಿ ಉಚಿತವಾಗಿ ಕೊಡ್ತಿದ್ದೆ. ಈಗಿನ ಬಿಜೆಪಿ ರ‍್ಕಾರ ಅದನ್ನು ಐದು ಕೆ.ಜಿ ಗೆ ಇಳಿಸಿದೆ. ಅದಕ್ಕೆ ನಾನು ಕೊರೊನಾ ಇದೆ, ಲಾಕ್ ಡೌನ್ ಇದೆ, ಜನರಿಗೆ ದುಡಿಮೆ ಇಲ್ಲ ಹತ್ತು ಕೆ.ಜಿ ಅಕ್ಕಿ ಕೊಡಿ, ಪ್ರತಿ ಬಿಪಿಎಲ್ ಕುಟುಂಬಕ್ಕೆ ಹತ್ತು ಸಾವಿರ ಧನಸಹಾಯ ಮಾಡಿ ಎಂದು ಸದನದಲ್ಲಿ ಹೇಳಿದೆ, ನನ್ನ ಮಾತನ್ನು ಕಿವಿಗೆ ಹಾಕೊಂಡಿಲ್ಲ. ಜನರ ತೆರಿಗೆ ಹಣವನ್ನು ಜನರಿಗೆ ರ‍್ಚು ಮಾಡಲು ರ‍್ಕಾರಕ್ಕೆ ಏನು ರೋಗ? ಮುಂದಿನ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, ಆಗ ಬಡವರಿಗೆ ಹತ್ತು ಕೆ.ಜಿ ಉಚಿತ ಅಕ್ಕಿ ಕೊಡುತ್ತೇವೆ ಎಂದರು ಸಿದ್ದರಾಮಯ್ಯ.
ನಮ್ಮ ರ‍್ಕಾರ ಜಾರಿಗೆ ತಂದಿದ್ದ ಕೃಷಿ ಭಾಗ್ಯ, ಸಾಲ ಮನ್ನಾ, ಶಾದಿ ಭಾಗ್ಯ, ಪಶು ಭಾಗ್ಯ, ಇಂದಿರಾ ಕ್ಯಾಂಟೀನ್, ಅನುಗ್ರಹ ಮುಂತಾದ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ಕೇಳಿದ್ರೆ ಕೊರೊನಾಗೆ ರ‍್ಚು ಮಾಡಿದೀವಿ , ನಮ್ಮ ಬಳಿ ದುಡ್ಡಿಲ್ಲ ಎನ್ನುತ್ತಾರೆ. ಈ ರ‍್ಕಾರ ಕೊರೊನಾ ಕಾಲದಲ್ಲೂ ಲೂಟಿ ಮಾಡಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಇಂದಿರಾ ಕ್ಯಾಂಟೀನ್ ಆರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಏಳು ರ‍್ಷ ತುಂಬಿದೆ. ಸುಳ್ಳು ಭರವಸೆ ನೀಡೋದು ಬಿಟ್ಟು ಜನರಿಗೆ ಬೇರೇನೂ ಮಾಡಿಲ್ಲ. ಅಚ್ಚೇ ದಿನ್ ಬರುತ್ತೆ ಅಂತ ಹೇಳಿದ್ರು, ಬಂತಾ? ಸಬ್ ಕ ಸಾಥ್, ಸಬ್ ಕ ವಿಕಾಸ್ ಅಂತ ಬಾಯಲ್ಲಿ ಹೇಳ್ತಾರೆ, ರ‍್ಮ ರ‍್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡ್ತಾರೆ. ಎಲ್ಲಾ ರ‍್ಮದ, ಜಾತಿಯ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಏಕೈಕ ಪಕ್ಷ ಕಾಂಗ್ರೆಸ್. ಕಾರಣ ನಾವು ಸಂವಿಧಾನದ ಹಾದಿಯಲ್ಲಿ ನಡೆಯುವವರು. ಸಂಪತ್ತಿನ ಸಮಾನ ಹಂಚಿಕೆ, ರ‍್ವರಿಗೂ ಸಮಾನ ಅವಕಾಶ, ಪರಸ್ಪರ ಪ್ರೀತಿ ವಿಶ್ವಾಸ ದಿಂದ ಬದುಕಬೇಕು ಎಂದು ನಂಬಿದವರು ನಾವು. ಮಹಾತ್ಮ ಗಾಂಧಿಯವರ ಚಿಂತನೆಗಳು ನಮಗೆ ಪ್ರೇರಣೆ.
ದೇಶದ ಸುಮಾರು 14% ಜನಸಂಖ್ಯೆ ಇರುವ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದ ಒಬ್ಬನೇ ಒಬ್ಬ ಶಾಸಕನಾಗಲೀ, ಸಂಸದನಾಗಲೀ, ಮಂತ್ರಿಯಾಗಲೀ ಬಿಜೆಪಿ ಪಕ್ಷದಲ್ಲಿ ಇಲ್ಲ. ಯಾಕೆ ಅವರು ದೇಶದ ನಾಗರಿಕರಲ್ಲವೇ? ಯಡಿಯೂರಪ್ಪ ಅವರ ರ‍್ಕಾರ ಹಾವೇರಿಯಲ್ಲಿ ರೈತರ ಮೇಲೆ ಗುಂಡು ಹಾರಿಸಿ ಕೊಲ್ಲಿಸಿತ್ತು. ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವರ ಮಗ ಕಾರು ಹತ್ತಿಸಿ, ನಾಲ್ವರು ರೈತರನ್ನು ಹತ್ಯೆ ಮಾಡಿದ್ದಾನೆ. ಇವರನ್ನು ಕೊಲೆಗಡುಕರು, ಗೂಂಡಾಗಳ ರ‍್ಕಾರ ಅನ್ನದೆ ಇನ್ನೇನು ಹೇಳಬೇಕು?
ಈಗ ಪೆಟ್ರೋಲ್ ಬೆಲೆ 110, ಡೀಸೆಲ್ ಬೆಲೆ 100, ಗ್ಯಾಸ್ ಬೆಲೆ 950 ರೂಪಾಯಿ ಆಗಿದೆ. ಬಡವರು ಹೇಗೆ ಬದುಕಬೇಕು? ರ‍್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಯುವಕರಿಗೆ ಮೋದಿ ಭರವಸೆ ನೀಡಿದ್ರು, ಪಾಪ ಯುವಕರು ನಂಬಿ ಓಟು ಹಾಕಿ ಗೆಲ್ಲಿಸಿದ್ರು, ಈಗ ಉದ್ಯೋಗ ಕೇಳಿದ್ರೆ ಪಕೋಡ ಮಾರಿ ಎಂದು ಬಿಟ್ಟಿಸಲಹೆ ಕೊಡ್ತಾರೆ. ಹೋಗಲಿ ಪಕೋಡಾ ಆದ್ರೂ ಮಾರಲು ಸಾಧ್ಯವಿದೆಯಾ? ಅಡುಗೆ ಎಣ್ಣೆ ಬೆಲೆ 200 ರೂಪಾಯಿ ಆಗಿದೆ. ಮೋದಿ ಮೋದಿ ಎಂದವರಿಗೆ ತಿರುಪತಿ ನಾಮ ಹಾಕಿದ್ದಾರೆ. ಅದಕ್ಕೆ ಈಗ ಯಾರೂ ಸರ‍್ವಜನಿಕ ಸಭೆಗಳಲ್ಲಿ ಮೋದಿ ಮೋದಿ ಅಂತ ಕೂಗಾಡ್ತಿಲ್ಲ.
ಮೋದಿಯನ್ನು, ಆರ್.ಎಸ್.ಎಸ್ ಅನ್ನು ಹೊಗಳಿ ಹೊಗಳಿ ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾರೆ. ಇವರು ರಿಮೋಟ್ ಮುಖ್ಯಮಂತ್ರಿ, ಇವರನ್ನು ಬಿಜೆಪಿ ಕಂಟ್ರೋಲ್ ಮಾಡುತ್ತಿದೆ. ಒಂದು ಸಾವಿರ ಕೋಟಿ ಬೆಲೆಬಾಳುವ ಜಮೀನನ್ನು ಕೇವಲ 50 ಕೋಟಿಗೆ ಆರ್.ಎಸ್.ಎಸ್ ಮೂಲದ ಶಿಕ್ಷಣ ಸಂಸ್ಥೆಗೆ ನೀಡಿದ್ದಾರೆ. ಇದು ಬಹುದೊಡ್ಡ ಹಗರಣ. ಇದನ್ನು ಕೇಳಿದ್ರೆ ಸಂಘಪರಿವಾರದವರು ದೇಶಭಕ್ತರು ಎನ್ನುತ್ತಾರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಒಬ್ಬನೇ ಒಬ್ಬ ಆರ್.ಎಸ್.ಎಸ್ ನಾಯಕನ ಹೆಸರು ಹೇಳಲಿ ನೋಡೋಣ. ಇಂಥವರು ಬೇರೆಯವರಿಗೆ ದೇಶಭಕ್ತಿ ಪಾಠ ಮಾಡ್ತಾರೆ ಎಂದು ಟೀಕಿಸಿದರು.
ಬಾಕ್ಸ್
ಕುಮಾರ ಸ್ವಾಮಿಗೆ ಹಸಿವಿನ ಸಂಕಟ ಗೊತ್ತಿಲ್ಲ
ನಾನು ಮುಖ್ಯಮಂತ್ರಿ ಆಗುವಾಗ ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡುತ್ತಿದ್ದ ಅನುದಾನ ಕೇವಲ 400 ಕೋಟಿ ರೂಪಾಯಿ ಇತ್ತು, ನನ್ನ ಕಡೇ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡಿದ ಅನುದಾನ 3,100 ಕೋಟಿ. ಬಡವರಿಗೆ ಅಕ್ಕಿ ಕೊಟ್ಟು ಜನರನ್ನು ಸೋಮಾರಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳ್ತಾರೆ. ಹಸಿವಿನ ಸಂಕಟ ಗೊತ್ತಿಲ್ಲದವರು ಮಾತ್ರ ಇಂಥಾ ಹೇಳಿಕೆ ಕೊಡಲು ಸಾಧ್ಯ.
-ಸಿದ್ದರಾಮಯ್ಯ