‘ಬಜೆಟ್- ನೀರಸ, ಅಭಿವೃದ್ಧಿ ವಿರೋಧಿ’  ಬಜೆಟ್‌ಗಳ ಛಾಂಪಿಯನ್ ಸಿದ್ಧರಾಮಯ್ಯ ಟೀಕೆ  

‘ಬಜೆಟ್- ನೀರಸ, ಅಭಿವೃದ್ಧಿ ವಿರೋಧಿ’  ಬಜೆಟ್‌ಗಳ ಛಾಂಪಿಯನ್ ಸಿದ್ಧರಾಮಯ್ಯ ಟೀಕೆ  

‘ಬಜೆಟ್- ನೀರಸ, ಅಭಿವೃದ್ಧಿ ವಿರೋಧಿ’  ಬಜೆಟ್‌ಗಳ ಛಾಂಪಿಯನ್ ಸಿದ್ಧರಾಮಯ್ಯ ಟೀಕೆ  

 

‘ಬಜೆಟ್- ನೀರಸ, ಅಭಿವೃದ್ಧಿ ವಿರೋಧಿ’ 
ಬಜೆಟ್‌ಗಳ ಛಾಂಪಿಯನ್ ಸಿದ್ಧರಾಮಯ್ಯ ಟೀಕೆ  

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ತಮ್ಮ ಮೊದಲ ಬಜೆಟ್ ಮಂಡಿಸಿದ್ದಾರೆ. ಅವರು ತಮ್ಮ ಮಾತುಗಳ ಮೂಲಕ ಜನರಲ್ಲಿ ಬಹಳಷ್ಟು ನಿರೀಕ್ಷೆ ಮೂಡಿಸಿದ್ದರು. 'ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣ ಮಾಡುತ್ತೇವೆ', ಭವಿಷ್ಯಕ್ಕಾಗಿ ಧೃಡ ಹೆಜ್ಜೆ ಇಡುತ್ತೇವೆ ಎಂದು ಹೇಳಿದ್ದರು. ಆದರೆ ಬಜೆಟ್ ನೋಡಿದ ಮೇಲೆ ಅವರ ಮಾತುಗಳು ಹುಸಿಯಾಗಿವೆ. ಇದು ಅತ್ಯಂತ ನೀರಸ, ಅಭಿವೃದ್ಧಿಯ ವಿರೋಧಿ, ದೂರದೃಷ್ಟಿ ಇಲ್ಲದ ಬಜೆಟ್ ಆಗಿದೆ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ.

ರಾಜ್ಯದಲ್ಲಿ ಒಟ್ಟು 14ಸಲ ಮುಂಗಡ ಪತ್ರ ಮಂಡಿಸುವ ಮೂಲಕ ಬಜೆಟ್‌ಗಳ ಛಾಂಪಿಯನ್ ಎನಿಸಿಕೊಂಡಿರುವ ಸಿದ್ದರಾಮಯ್ಯನವರು ಶುಕ್ರವಾರ ಸಂಜೆ ಸುದ್ದಿಗೋಷ್ಟಿಯಲ್ಲಿ ವಿಶ್ಲೇಷಿಸಿದ ಪ್ರಕಾರ ಬಜೆಟ್ ಎಂದರೆ ಜನರಿಗೆ ಕನಸು ಕಟ್ಟಿಕೊಡುವಂತಿರಬೇಕು, ನಾಡಿನ ಎಲ್ಲ ಜನರ ಭವಿಷ್ಯದ ಮುನ್ಸೂಚನೆಯಂತಿರಬೇಕು. ನಮ್ಮ ಸರ್ಕಾರದ ಅವಧಿಯಲ್ಲಿ ಇಲಾಖಾವಾರು ಮಾಹಿತಿಯನ್ನು ಜನರಿಗೆ ಪಾರದರ್ಶಕವಾಗಿ ಕೊಡುತ್ತಿದ್ದೆವು. ಹಿಂದಿನ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಹಣ ನೀಡಿದ್ದೆವು, ಎಷ್ಟು ಖರ್ಚಾಗಿತ್ತು, ಮುಂದೆ ಎಷ್ಟು ನೀಡುತ್ತಿದ್ದೇವೆ, ಹೀಗೆ ಇಲಾಖೆಯ ಪ್ರಗತಿಯನ್ನು ಪಾರದರ್ಶಕವಾಗಿ ನೀಡಿದ್ದೆವು, ಈಗ ಹಾಗಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ಮೇಲಿಂದ ವಲಯವಾರು ಬಜೆಟ್ ಮಂಡನೆ ಮಾಡಲು ಆರಂಭಿಸಿದರು. ಇದರಿಂದ ಹಿಂದೆ ಇದ್ದ ಪಾರದರ್ಶಕತೆ ಈಗ ಇಲ್ಲವಾಗಿದೆ. 


ಆದರೆ ಬಜೆಟ್‌ನ ಅಂಶಗಳು ಘೋಷಿತ ಪಂಚ ಸೂತ್ರಗಳಿಗೆ ತದ್ವಿರುದ್ಧವಾಗಿದೆ. ಸ್ವಾತಂತ್ರ‍್ಯ ಬಂದ ನಂತರದಿAದ 2018-19 ರ ನಮ್ಮ ಸರ್ಕಾರದ ಕೊನೆಯ ಬಜೆಟ್ ವರೆಗೆ ರಾಜ್ಯದ ಮೇಲಿದ್ದ ಒಟ್ಟು ಸಾಲ ರೂ. 2,42,000 ಕೋಟಿ. ಮುಂದಿನ ವರ್ಷದ ಮಾರ್ಚ್ ವೇಳೆಗೆ ರಾಜ್ಯದ ಒಟ್ಟು ಸಾಲ ರೂ. 5,18,000 ಕೋಟಿ ಆಗುತ್ತೆ. ಬಿಜೆಪಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರೂ. 2,66,000 ಕೋಟಿ ಸಾಲ ಮಾಡಿದೆ. 


ನಮ್ಮ ಐದು ವರ್ಷಗಳ ಆಡಳಿತದಲ್ಲಿ ರಾಜಸ್ವ ಉಳಿಕೆ ಬಜೆಟ್ ಇತ್ತು, ಬಿಜೆಪಿ ಬಂದಮೇಲೆ ರಾಜಸ್ವ ಕೊರತೆ ಆರಂಭವಾಗಿದೆ. ಇದು ನಮ್ಮ ಮತ್ತು ಬಿಜೆಪಿ ಸರ್ಕಾರದ ನಡುವಿನ ವ್ಯತ್ಯಾಸ. 


ಈ ವರ್ಷದ ಜೂನ್ 30ರ ವರೆಗೆ ಮಾತ್ರ ನಮ್ಮ ರಾಜ್ಯಕ್ಕೆ ಜಿ.ಎಸ್.ಟಿ ಪರಿಹಾರ ಸಿಗುತ್ತದೆ. ಹಾಗಾಗಿ ಮುಂದಿನ ದಿನಗಳು ಇನ್ನಷ್ಟು ಕಷ್ಟದಾಯಕವಾಗಿರಲಿದೆ. ಇದೇ ಕಾರಣಕ್ಕೆ ಜಿ.ಎಸ್.ಟಿ ಪರಿಹಾರವನ್ನು ಇನ್ನೂ ಐದು ವರ್ಷ ಮುಂದುವರೆಸಲು ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡಿ ಎಂದು ನಾನು ಸಲಹೆ ನೀಡಿದ್ದೆ. ಆದರೆ ಈ ಬಾರಿಯ ಕೇಂದ್ರದ ಬಜೆಟ್ ನಲ್ಲಿ ಇದನ್ನು ಮುಂದುವರೆಸುವ ಬಗ್ಗೆ ಯಾವ ಪ್ರಸ್ತಾಪವೂ ಇಲ್ಲ, 
ಬಿಜೆಪಿಯವರು ನೀರಾವರಿ ಬಗ್ಗೆ ಬಹಳ ಮಾತಾಡುತ್ತಿದ್ದರು. 2018 ರ ನಮ್ಮ ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಇಟ್ಟಿದ್ದ ಹಣ ರೂ. 18,112 ಕೋಟಿ. ಈ ಸರ್ಕಾರ ಬಜೆಟ್ ನಲ್ಲಿ ಇಟ್ಟಿರುವ ಹಣ ರೂ. 20,601 ಕೋಟಿ. ನನ್ನ ಪ್ರಕಾರ ಕನಿಷ್ಠ ರೂ. 10,000 ಕೋಟಿಗೂ ಅಧಿಕ ಮೊತ್ತದ ಬಾಕಿ ಬಿಲ್ ಗಳಿವೆ. ಅದನ್ನೂ ಕೊಟ್ಟರೆ ಹೊಸ ನೀರಾವರಿ ಯೋಜನೆಗಳಿಗೆ ಉಳಿಯೋದು ಕೇವಲ ರೂ. 10,000 ಕೋಟಿ. ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ. 


ಮೇಕೆದಾಟು ಯೋಜನೆ ಜಾರಿಯಾಗಬೇಕು ಎಂಬುದು ನಮ್ಮ ಒತ್ತಾಯ. ಆದರೆ ಪರಿಸರ ಅನುಮತಿ ಪತ್ರ ಪಡೆಯದೆ ಯೋಜನೆ ಹೇಗೆ ಆರಂಭ ಮಾಡುತ್ತಾರೆ? 


ದೀನದಯಾಳು ಉಪಾಧ್ಯಾಯ ಅವರ ಹೆಸರಿನಲ್ಲಿ ಸಾವಿರ ವಿದ್ಯಾರ್ಥಿಗಳ ಹಾಸ್ಟೆಲ್ ಮಾಡುವುದಾಗಿ ಹೇಳಿದ್ದಾರೆ, ಆದರೆ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ. 200 - 300 ಮಕ್ಕಳ ಹಾಸ್ಟೆಲ್ ಮಾಡಿದರೆ ಅದೇ ದೊಡ್ಡದು. ನಾಲ್ಕು ಕಡೆ ಸಾವಿರ ವಿದ್ಯಾರ್ಥಿಗಳ ಹಾಸ್ಟೆಲ್ ಮಾಡ್ತೀವಿ ಎಂದಿದ್ದಾರೆ, ಇದು ಅವಾಸ್ತವಿಕ ಮತ್ತು ಅಸಾಧ್ಯವಾದ ಕೆಲಸ. 

ಹಿಂದುಳಿದ ಜಾತಿಗಳೆಲ್ಲವೂ ಸೇರಿ ಅವುಗಳ ಅಭಿವೃದ್ಧಿ ನಿಗಮಗಳಿಗೆ ರೂ. 400 ಕೋಟಿ ನೀಡಿದ್ದರು. ಈ ವರ್ಷ ಅದೂ ಇಲ್ಲ. 


. ಪುಣ್ಯಕೋಟಿ ಹೆಸರಿನಲ್ಲಿ ಗೋವುಗಳನ್ನು ದತ್ತು ಪಡೆಯುವವರಿಗೆ ಸರ್ಕಾರ ರೂ. 11,000 ಕೊಡುವುದಾಗಿ ಹೇಳಿದೆ, ಈ ಹಣವನ್ನು ರೈತರಿಗೇ ಕೊಟ್ಟಿದ್ದರೆ ಅವರೇ ಸಾಕ್ತಿದ್ದರು. ಇದರಿಂದ ಜಾನುವಾರುಗಳ ಮಾಲಿಕರಾದ ರೈತರಿಗೆ ಅನ್ಯಾಯ ಆಗುತ್ತದೆ.