’ ಕೋಮುವಾದಿ ಬಿಜೆಪಿ ಸರ‍್ಕಾರ ಕಿತ್ತೊಗೆಯಿರಿ’  75ನೇ ಜನ್ಮದಿನ ಸಮಾರಂಭದಲ್ಲಿ ರಾಜ್ಯದ ಜನತೆಗೆ ಸಿದ್ದರಾಮಯ್ಯ ಕರೆ

’ ಕೋಮುವಾದಿ ಬಿಜೆಪಿ ಸರ‍್ಕಾರ ಕಿತ್ತೊಗೆಯಿರಿ’  75ನೇ ಜನ್ಮದಿನ ಸಮಾರಂಭದಲ್ಲಿ ರಾಜ್ಯದ ಜನತೆಗೆ ಸಿದ್ದರಾಮಯ್ಯ ಕರೆ

’ ಕೋಮುವಾದಿ ಬಿಜೆಪಿ ಸರ‍್ಕಾರ ಕಿತ್ತೊಗೆಯಿರಿ’    75ನೇ ಜನ್ಮದಿನ ಸಮಾರಂಭದಲ್ಲಿ ರಾಜ್ಯದ  ಜನತೆಗೆ ಸಿದ್ದರಾಮಯ್ಯ ಕರೆ

’ ಕೋಮುವಾದಿ ಬಿಜೆಪಿ ಸರ‍್ಕಾರ ಕಿತ್ತೊಗೆಯಿರಿ’ 


75ನೇ ಜನ್ಮದಿನ ಸಮಾರಂಭದಲ್ಲಿ ರಾಜ್ಯದ

ಜನತೆಗೆ ಸಿದ್ದರಾಮಯ್ಯ ಕರೆ

ದಾವಣಗೆರೆ: ಇಡೀ ದೇಶದಲ್ಲಿಯೇ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಯುವಕರು, ಮಹಿಳೆಯರು ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ, ಮೋದಿ ಪ್ರಧಾನಿಯಾದ ಮೇಲೆ ಈ ದೇಶ, ಪ್ರಜಾಪ್ರಭುತ್ವ ಸಂಕಷ್ಟದಲ್ಲಿದೆ. ಸಂವಿಧಾನಕ್ಕೆ ರಕ್ಷಣೆ ಇಲ್ಲವಾಗಿದೆ, ``ರಾಜ್ಯದ ಮೂಲೆ ಮೂಲೆಗಳಿಂದ ಶುಭ ಕೋರಲು ಬಂದಿದ್ದೀರಿ. ನನಗೆ ಶುಭ ಕೋರುವ ಮೂಲಕ, ಈ ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತು ಒಗೆಯುವ, ಕಾಂಗ್ರೆಸ್ ಸರ್ಕಾರನ್ನು ಅಧಿಕಾರಕ್ಕೆ ತರುವ ಶಪಥ ಮಾಡಬೇಕು'' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರೆ ನೀಡಿದರು.


ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯನವರ 75ನೇ ಜನ್ಮ ದಿನ ಆಚರಣೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
``ನಮ್ಮ ಮುಂದೆ ಇರುವ ಭ್ರಷ್ಟ ಕೋಮುವಾದಿ ಸರ್ಕಾರವನ್ನು ಕಿತ್ತೊಗೆಯುವುದೇ ಆಗಿದೆ. ಈ ಜನಪೀಡಕ ಸರ್ಕಾರವನ್ನು ಕಿತ್ತೊಗೆದು, ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ತರುತ್ತೇವೆ. ಇದಕ್ಕೆ ನಿಮ್ಮೆಲ್ಲರ ಆರ್ಶೀವಾದ ಇರಬೇಕು'' ಎಂದರು.
 ಹಿಂದೂ ರಾಷ್ಟç ಮಾಡಬೇಕು, ಲೂಟಿ ಮಾಡಬೇಕು, ಸರ್ವಾಧಿಕಾರ ತರಬೇಕು, ಸಂವಿಧಾನ ಬದಲಾಯಿಸಬೇಕು ಎಂಬುದು ಬಿಜೆಪಿಯವರ ಉದ್ದೇಶ. ಕಾಂಗ್ರೆಸ್ ಮುಗಿಸಲು ಯಾರಿಂದರೂ ಸಾಧ್ಯವಿಲ್ಲ. ಸಂವಿಧಾನ ಬದಲಾವಣೆ ಮಾಡಲು ಈ ದೇಶದ ಜನ ಬಿಡುವುದಿಲ್ಲ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ. ಬಡವರ ಬಗ್ಗೆ, ದಲಿತರು, ಹಿಂದುಳಿದ ವರ್ಗದ ಬಗ್ಗೆ ಕಾಳಜಿ ಇರುವವರು ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ರಾಹುಲ್ ಗಾಂಧಿಯವರಿಗೆ ಆ ಅರ್ಹತೆ ಇದೆ. ಮೋದಿ ನುಡಿದಂತೆ ನಡೆಯಲಿಲ್ಲ. ದೇಶದ ಆರ್ಥಿಕತೆ ನಾಶವಾಯಿತು ಎಂದು ಟೀಕಿಸಿದರು.


ಮಾತ್ತೆತ್ತಿದರೆ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಎನ್ನುತ್ತೀರಿ, ದಲಿತರು, ರೈತರು, ಅಲ್ಪಸಂಖ್ಯಾತರು, ಹಿಂದುಳಿದವರ ಬದುಕನ್ನು ಹಾಳು ಮಾಡಿದ್ದೀರಿ. ಯುವಕರಿಗೆ ಉದ್ಯೋಗ ನೀಡಲಿಲ್ಲ. ಬೆಲೆ ಏರಿಕೆ ಗಗನಕ್ಕೇರಿದೆ. ಕರ್ನಾಟಕದಲ್ಲಿರುವ ಗುತ್ತಿಗೆದಾರರ ಸಂಘದವರು ನಲವತ್ತು ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಉತ್ತರ ಸಿಕ್ಕಿಲ್ಲ ಎಂದರು.


ರಾಹುಲ್ ಗಾಂಧಿಯವರಿಗೆ, ಸೋನಿಯಾ ಗಾಂಧಿಯವರಿಗೆ ಅನಗತ್ಯವಾಗಿ ವಿಚಾರಣೆ ಮಾಡಿದ್ದೀರಿ. ಯಾವ ತಪ್ಪಿಗಾಗಿ, ಸೋನಿಯಾ ಗಾಂಧಿಯವರ ವಯಸ್ಸನ್ನೂ ಲೆಕ್ಕಿಸದೆ ಇ.ಡಿ. ಕಚೇರಿಗೆ ಕರೆಸಿ ಗಂಟೆಗಟ್ಟಲೆ ವಿಚಾರಣೆ ಮಾಡಿದ್ದೀರಿ. ಕಾಂಗ್ರೆಸ್‌ನಲ್ಲಿ ಕೋಟ್ಯಾಂತರ ಕಾರ್ಯಕರ್ತರಿದ್ದಾರೆ. ಎಲ್ಲರೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಜೊತೆಯಲ್ಲಿ ಇದ್ದಾರೆ 


ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡಲಾಯಿತು. ನರೇಂದ್ರ ಮೋದಿಯವರು ರೈತ ವಿರೋಧ ಮೂರು ಕಾಯ್ದೆಗಳನ್ನು ತಂದು ರೈತರು ಒಂದು ವರ್ಷ ಚಳವಳಿ ಮಾಡುವಂತಾಯಿತು. ವಿಧಿ ಇಲ್ಲದೆ ವಾಪಸ್ ಪಡೆದುಕೊಂಡಿದ್ದಾರೆ. ಆದರೆ ಕರ್ನಾಟಕದಲ್ಲಿ ಇನ್ನೂ ವಾಪಸ್ ತೆಗೆದುಕೊಂಡಿಲ್ಲ. ಎಪಿಎಂಸಿ ಹಾಳು ಮಾಡಿದ್ದಾರೆ ಎಂದು ದೂರಿದರು ಎಂದು ಪ್ರಶ್ನಿಸಿದರು.

``ಅನೇಕ ಸಲ ಮಾಧ್ಯಮಗಳು, ವಿರೋಧಿ ಪಕ್ಷಗಳು ಸುಳ್ಳುಗಳನ್ನು ಸೃಷ್ಟಿ ಮಾಡಿ ತಪುö್ಪ ಮಾಹಿತಿ ನೀಡುತ್ತಿವೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ಬಿರುಕಿದೆ ಎಂಬುದು ಭ್ರಮೆ. ನಾನು ಮತ್ತು ಶಿವಕುಮಾರ್ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ'' ಎಂದರು ಸಿದ್ದು .


ಮುಖ್ಯಮಂತ್ರಿ ತಾರತಮ್ಯ


ಕರಾವಳಿಯಲ್ಲಿ ಮೂರು ಕೊಲೆಗಳಾಗಿವೆ. ಬಸವರಾಜ ಬೊಮ್ಮಾಯಿ ಕರಾವಳಿಗೆ ಹೋಗಿದ್ದರು. ಮಸೂದ್, ಪ್ರವೀಣ್, ಫಾಝಿಲ್ ಎನ್ನುವವರ ಕೊಲೆಯಾಗಿತ್ತು. ಬೊಮ್ಮಾಯಿಯವರೇ ನೀವು ಇಡೀ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯೋ ಅಥವಾ ಒಂದು ಧರ್ಮದ ಮುಖ್ಯಮಂತ್ರಿಯೋ? ಮಸೂದ್ ಹಾಗೂ ಫಾಝಿಲ್ ಮನೆಗೆ ಹೋಗಲಿಲ್ಲ. ಪ್ರವೀಣ್‌ಗೆ ಮಾತ್ರ ಪರಿಹಾರ ನೀಡಿದ್ದೀರಿ. ಅದು ತಪ್ಪೆಂದು ಹೇಳುತ್ತಿಲ್ಲ. ಆದರೆ ಯಾಕೆ ನೀವು ಫಾಝಿಲ್ ಕುಟುಂಬಕ್ಕೆ , ಮಸೂದ್ ಕುಟುಂಬಕ್ಕೆ ಪರಿಹಾರ ಕೊಡಲಿಲ್ಲ. ಈ ರಾಜ್ಯದ ಮುಖ್ಯಮಂತ್ರಿಯಾಗಿರಲು ನೀವು ಲಾಯಾಕ್ಕಾ? ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ಎಲ್ಲ ಜನರನ್ನು ಕಾಪಾಡುವ ಜವಾಬ್ದಾರಿ ಹೊತ್ತಿರುತ್ತೀರಿ. ಆದರೆ ಅಲ್ಪಸಂಖ್ಯಾತರು ಆತಂಕದಲ್ಲಿ ಬದುಕುತ್ತಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ.


2013ರಲ್ಲಿ ಕೊಟ್ಟ ಎಲ್ಲ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ಎಸ್‌ಸಿ, ಎಸ್‌ಟಿಗಳಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗಾಗಿ ವಿಶೇಷ ಕಾನೂನುಗಳನ್ನು ಮಾಡಿದ್ದೇವೆ. ಎಲ್ಲ ಬಡವರಿಗೆ ನ್ಯಾಯ ಕೊಡುವ ಕೆಲಸವನ್ನು ಮಾಡಿದ್ದೇವೆ. ಅನ್ನಭಾಗ್ಯ, ಶೂ ಭಾಗ್ಯ, ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್, ಮನಸ್ವಿನಿ, ವಿದ್ಯಾಸಿರಿ, ಕೃಷಿ ಭಾಗ್ಯ- ಈ ಎಲ್ಲ ಕಾರ್ಯಕ್ರಮ ಮಾಡಿದ್ದೇವೆ. ನೀವೇನು ಮಾಡಿದ್ದೀರಿ ಬೊಮ್ಮಾಯಿ?

- ಸಿದ್ದರಾಮಯ್ಯ