‘ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿರುವ ದಲಿತರು’-ಹೇಳಿಕೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

‘ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿರುವ ದಲಿತರು’-ಹೇಳಿಕೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

‘ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿರುವ ದಲಿತರು’-ಹೇಳಿಕೆ


ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ


ತುಮಕೂರು: ದಲಿತರು ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿಯಲ್ಲಿ ಇದ್ದಾರೆ ಎಂದು ವಿಧಾನ ಸಭೆಯಲ್ಲಿ ವಿರೋಧ ಪಕ್ಷ(ಕಾಂಗ್ರೆಸ್)ದ ನಾಯಕ ಸಿದ್ದರಾಮಯ್ಯನವರ  ಹೇಳಿಕೆ ಖಂಡಿಸಿ ಬಿಜೆಪಿ ಪರಿಶಿಷ್ಟ ಜಾತಿ ಘಟಕದ ಸದಸ್ಯರು ನಗರದ ಪುರಭವನ ವೃತ್ತದಲ್ಲಿ ಬುಧವಾರ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.


ಬಿಜೆಪಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ವೈ.ಎಚ್.ಹುಚ್ಚಯ್ಯ ನೇತೃತ್ವದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಸಿದ್ಧರಾಮಯ್ಯ ವಿರುದ್ಧ ದಿಕ್ಕಾರ ಕೂಗಿ ಕೂಡಲೇ ದಲಿತರ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನಾಕಾರರನ್ನುದ್ಧೇಶಿಸಿ ಮಾತನಾಡಿದ ಬಿಜೆಪಿ ವೈ.ಎಚ್.ಹುಚ್ಚಯ್ಯನವರು, ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ ಎಂದು ಹೇಳುವ ಮೂಲಕ ದಲಿತರನ್ನು ಅವಮಾನ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ದಲಿತರ ಸ್ವಾಭಿಮಾನವನ್ನು ಕೆಣಕಿದ್ದಾರೆ. ಅವರ ಈ ಹೇಳಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸಂವಿಧಾನದ ಆಶಯದಲ್ಲಿ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಚೌಕಟ್ಟಿನಲ್ಲಿ ಇರುವಂತಹ ರಾಜಕೀಯ ಪಕ್ಷಗಳನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ, ಸ್ವಾತಂತ್ರö್ಯ ಜನಸಾಮಾನ್ಯರಿಗಿದೆ. ಹಾಗೆ ಕಾಂಗ್ರೆಸ್‌ನ್ನು ಆಯ್ಕೆಮಾಡಿಕೊಂಡAತಹವರು ಕೆಲವರಿದ್ದರೆ, ಬಿಜೆಪಿ ಮತ್ತು ಇತರೆ ಪಕ್ಷಗಳನ್ನು ಆಯ್ಕೆಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ ಎಂದರು.
ಬಿಜೆಪಿಯಲ್ಲಿ ದಲಿತರು ಹೊಟ್ಟೆಪಾಡಿಗಾಗಿ ಇದ್ದಾರೆ ಎಂಬ ಸಿದ್ಧರಾಮಯ್ಯ ಅವರ ಹೇಳಿಕೆಯನ್ನು ನೋಡಿದರೆ ಸಿದ್ಧರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ. ಮಾನಸಿಕ ಅಸ್ವಸ್ಥತೆಯಲ್ಲಿರುವ ಸಿದ್ಧರಾಮಯ್ಯ ಅವರನ್ನು ಮನೋ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸುವ ಅಗತ್ಯವಿದೆ ಎಂದು ಹೇಳಿದರು.
ದಲಿತರು ಪ್ರಬುದ್ಧರಿದ್ದಾರೆ, ವಿದ್ಯಾವಂತರಿದ್ದಾರೆ, ಸಶಕ್ತರಿದ್ದಾರೆ, ದಲಿತರು ಏನನ್ನಾದರೂ ಸಾಧನೆ ಮಾಡುವಂತಹ ಶಕ್ತಿ ದಲಿತರಿಗಿದೆ. ಅಂತಹ ಶಕ್ತಿವಂತಹ ದಲಿತರನ್ನು ಹೊಟ್ಟೆಪಾಡಿಗಾಗಿ ಇದ್ದಾರೆ ಎಂದು ಹೇಳಿ ಅಪಮಾನ ಮಾಡಲಾಗಿದೆ ಎಂದು ಖಂಡಿಸಿದರು.
ಇAದು ಕಾಂಗ್ರೆಸ್‌ನಲ್ಲಿ ನಿಮ್ಮ ಸಹಪಾಠಿಗಳಾಗಿ ಕೆಲಸ ಮಾಡುತ್ತಿರುವವರೆಲ್ಲಾ ಹೊಟ್ಟೆಪಾಡಿಗಾಗಿ ಇದ್ದಾರಾ.? ನೀವು ದಳದಲ್ಲಿ ಇದ್ದಂತಹವರು ರಾಜಕಾರಣ ಮಾಡಿಕೊಂಡು ಕಾಂಗ್ರೆಸ್‌ಗೆ ಹೊಟ್ಟೆಪಾಡಿಗಾಗಿ ಬಂದಿದ್ದೀರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದು ಕಾಂಗ್ರೆಸ್‌ನ ಉಸಿರು ದಲಿತರು ಎಂಬುದನ್ನು ಮರೆಯಬೇಡಿ, ದಲಿತರಿಂದ ಇಂದು ಕಾಂಗ್ರೆಸ್ ಉಸಿರಾಡುತ್ತಿದೆ. ಬರೀ ಮಾತಿನಲ್ಲೇ ದಲಿತರನ್ನು ತೃಪ್ತಿಪಡಿಸಿ ಅಧಿಕಾರಕ್ಕೆ ಬರುತ್ತಿರುವ ಕಾಂಗ್ರೆಸ್‌ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ ಎಂದು ಪ್ರಶ್ನಿಸಿದರು.
ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಮಾತನಾಡಿ, ದಲಿತ ಸಮುದಾಯ ಬಿಜೆಪಿಯನ್ನು ನಂಬಿ ಬಂದಿದೆ. ಕಾಂಗ್ರೆಸ್ ಅಂದರೆ ದಲಿತರು, ದಲಿತರು ಅಂದ್ರೆ ಕಾಂಗ್ರೆಸ್ ಎನ್ನುವ ಸಂದರ್ಭ ಒಂದಿತ್ತು, ದಲಿತರನ್ನೇ ಮತ ಬ್ಯಾಂಕ್ ಮಾಡಿಕೊಂಡು ದೇಶವನ್ನ ಆಳುತ್ತಾ ಬಂದಿತ್ತು. ಆದರೆ ಈಗ ದಲಿತರೂ ಕಾಂಗ್ರೆಸ್ ತೊರೆಯುತ್ತಿದ್ದಾರೆ. ದಲಿತರನ್ನ ಕಳೆದುಕೊಂಡು ಕಾಂಗ್ರೆಸ್ ಸೋಲುತ್ತಾ,  ಅಧಿಕಾರವನ್ನೂ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹೆಚ್.ಎನ್. ಚಂದ್ರಶೇಖರ್ ಮಾತನಾಡಿ, ನೀವು ಮತ್ತು ನಿಮ್ಮ ಪಕ್ಷ ಇಂತಹ ಕೀಳು ರಾಜಕಾರಣವನ್ನು ಇನ್ನೂ ಎಷ್ಟು ವರ್ಷ ಮಾಡುತ್ತೀರಿ, ಮುಂಚೆಯಿAದಲೂ ದಲಿತರೆಂದರೆ ಅಷ್ಟೊಂದು ಅಸಹನೆ ಯಾಕೆ, ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ರಮೇಶ್, ನಗರ ಅಧ್ಯಕ್ಷ ವರದಯ್ಯ, ಟೂಡಾ ಸದಸ್ಯರಾದ ಹನುಮಂತಪ್ಪ, ಪ್ರತಾಪ್, ಕಾರ್ಯದರ್ಶಿ ಸುಶೀಲ್, ಸಂದೀಪ್ ಗೌಡ, ಅಂಜನಮೂರ್ತಿ,  ಬಿಜೆಪಿ ನಗರಾಧ್ಯಕ್ಷ ಹನುಮಂತರಾಜು, ಕೊಪ್ಪಳ್ ನಾಗರಾಜ್, ಫರ್ಜಾನಾ ತಬಸ್ಸುಮ್, ಸೌಮ್ಯ, ಮಾರುತಿ ಗಂಗಹನುಮಯ್ಯ ಆನಂದ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.