ಬಿಜೆಪಿ ಸೋಲಿಸಿದರೆ ಬೆಲೆ ಇಳಿಯುತ್ತವೆ! ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬಿಜೆಪಿ ಸೋಲಿಸಿದರೆ ಬೆಲೆ ಇಳಿಯುತ್ತವೆ! ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ


ಬಿಜೆಪಿ ಸೋಲಿಸಿದರೆ ಬೆಲೆ ಇಳಿಯುತ್ತವೆ!
ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ


ಬೆಂಗಳೂರು: ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಕೇಂದ್ರ ಸರ್ಕಾರದ ತೆರಿಗೆ ಕಡಿತಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯಿಸಿರುವ ಅವರು, 
 ಬಿಜೆಪಿಯವರು ಇದು ದೀಪಾವಳಿ ಕೊಡುಗೆ ಅಂತ ಸಂಭ್ರಮಿಸ್ತಿದ್ದಾರೆ. ಆದ್ರೆ ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ. ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ ಎಂದು ಮಾರ್ಮಿಕವಾಗಿ ನುಡಿದರು.
ಇಂಧನದ ಬೆಲೆಯ ಬಗ್ಗೆ ವಿಶ್ಲೇಷಿಸಿದ ಸಿದ್ದರಾಮಯ್ಯ, ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ. ಆಹಾರ ಧಾನ್ಯ, ಖಾದ್ಯ ತೈಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು ಸೋಲಿಸುತ್ತಲೇ ಇರಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳಿಗೆ ಹಾಗೂ ಬೆಂಗಳೂರು ಮಹಾ ನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು ಎಂದು ತಿಳಿಸಿದ್ದಾರೆ.