ನಾಗರಿಕರಿಗೆ ಕಿರಿಕಿರಿಯಾಗುತ್ತಿರುವ ಸ್ಮಾರ್ಟ್ಸಿಟಿ ಕಾಮಗಾರಿ

Smart city work

ನಾಗರಿಕರಿಗೆ ಕಿರಿಕಿರಿಯಾಗುತ್ತಿರುವ ಸ್ಮಾರ್ಟ್ಸಿಟಿ ಕಾಮಗಾರಿ
ನಾಗರಿಕರಿಗೆ ಕಿರಿಕಿರಿಯಾಗುತ್ತಿರುವ ಸ್ಮಾರ್ಟ್ಸಿಟಿ ಕಾಮಗಾರಿ

ನಾಗರಿಕರಿಗೆ ಕಿರಿಕಿರಿಯಾಗುತ್ತಿರುವ ಸ್ಮಾರ್ಟ್ಸಿಟಿ ಕಾಮಗಾರಿ


ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಸ್ಮಾರ್ಟ್ಸಿಟಿ ಯೋಜನೆ ಕೂಡ ಒಂದಾಗಿತ್ತು.
ಇದಕ್ಕೆ ಸಂಬAಧಿಸಿದAತೆ ಸ್ಮಾರ್ಟ್ಸಿಟಿ ಅಡಿಯಲ್ಲಿ ದೇಶದ ಕೆಲವು ಜಿಲ್ಲೆಗಳನ್ನು ಆಯ್ಕೆಮಾಡಿಕೊಂಡು ನಗರಗಳನ್ನು ಅಭಿವೃದ್ಧಿಪಡಿಸುವ ಮೂಲ ಉದ್ದೇಶದಿಂದ ಕೇಂದ್ರ ಸರ್ಕಾರ ಸಾಕಷ್ಟು ಹಣವನ್ನು ವಿವಿಧ ಕಾಮಗಾರಿಗಳಿಗೆ ಖರ್ಚು ಮಾಡುತ್ತಿದೆ.
ಸರ್ಕಾರದಿಂದ ಬರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವ ಹೆಸರಿನಲ್ಲಿ ಸ್ಮಾರ್ಟ್ಸಿಟಿ ಅಧಿಕಾರಿಗಳು ಕೆಲ ಯೋಜನೆಗಳನ್ನು ರೂಪಿಸಿ ಉತ್ತಮ ಚರಂಡಿ, ರಸ್ತೆ, ಪಾರ್ಕ್ ಅಭಿವೃದ್ಧಿ, ರಸ್ತೆ ಅಭಿವೃದ್ಧಿ, ಬೀದಿದೀಪ ಸೇರಿದಂತೆ ಸೇರಿದಂತೆ ಸಾಕಷ್ಟು ಕಾಮಗಾರಿ ಹಾಗೂ ಕೆಲಸಗಳನ್ನು ತುಮಕೂರು ನಗರದಲ್ಲಿ ನಿರ್ವಹಿಸುತ್ತಿದ್ದಾರೆ. ಇನ್ನು ಕಾಮಗಾರಿ ನಡೆಸುವ ಅಧಿಕಾರಿಗಳು ಹಾಗೂ ಕಂಟ್ರಾಕ್ಟರುಗಳು ನಗರದ ಜನತೆಗೆ ತೀವ್ರ ಕಿರಿಕಿರಿ ಉಂಟು ಮಾಡುತ್ತಿದ್ದು ಇದರಿಂದ ತುಮಕೂರು ನಗರದ ಜನತೆಯ ಹೈರಾಣಾಗಿದ್ದಾರೆ.
ಇದಕ್ಕೆ ಪುಷ್ಟಿ ನೀಡುವಂತೆ ತುಮಕೂರಿನ ಕೋತಿ ತೋಪಿನಿಂದ ಹನುಮಂತಪುರಕ್ಕೆ ತೆರಳುವ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು ರಸ್ತೆ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಅದರ ಹಿನ್ನೆಲೆಯಲ್ಲಿ ರಸ್ತೆಯನ್ನು ಅಗೆಯಲಾಗಿದೆ. ಆದರೆ ಮಂಗಳವಾರ ಬೆಳಗ್ಗೆ ಬೈಕ್ ಸವಾರನೊಬ್ಬ ರಸ್ತೆಯಲ್ಲಿ ಸಂಚರಿಸುವ ವೇಳೆ ರಸ್ತೆ ಬದಿಯ ಬೃಹದಾಕಾರದ ವಿದ್ಯುತ್ ಕಂಬ ಒಂದು ಏಕಾಏಕಿ ಬೈಕ್ ಮೇಲೆ ಉರುಳಿಬಿದ್ದಿದೆ. ಅದೃಷ್ಟವಶಾತ್ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಸ್ವಲ್ಪ ಹೆಚ್ಚುಕಮ್ಮಿಯಾಗಿದ್ದರೂ ಸಹ ಬೈಕ್ ಸವಾರನ ಪ್ರಾಣಪಕ್ಷಿ ಹಾರಿ ಹೋಗುತ್ತಿತ್ತು. ಇನ್ನು ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಗೊಂದಲ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯರಾದ ಅರುಣ್, ಸ್ಮಾರ್ಟ್ಸಿಟಿ ಕಾಮಗಾರಿಗಳಿಂದ ತುಮಕೂರಿನ ಜನತೆ ಹೈರಾಣಾಗಿದ್ದಾರೆ. ಕಳಪೆ ಕಾಮಗಾರಿ ಹಾಗೂ ಯಾವುದೇ ಮುಂದಾಲೋಚನೆ ಮಾಡದೆ ಸರ್ಕಾರದಿಂದ ಬರುವ ಅನುದಾನವನ್ನು ಖಾಲಿ ಮಾಡುವ ಉದ್ದೇಶದಿಂದ ಅಧಿಕಾರಿಗಳು ಮನಸೋಯಿಚ್ಛೆ ಕಾಮಗಾರಿಗಳನ್ನು ನಿರ್ವಹಿಸುತ್ತಿರುವುದು ಇಂತಹ ಅವಗಢÀಗಳಿಗೆ ಕಾರಣವಾಗುತ್ತಿವೆ. ಇನ್ನಾದರೂ ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಮಾತನಾಡಿದ ಬೆಸ್ಕಾಂ ಇಂಜಿನಿಯರ್, ಸ್ಮಾರ್ಟ್ ಸಿಟಿಯಿಂದ ಕೈಗೊಳ್ಳುತ್ತಿರುವ ಅವೈಜ್ಞಾನಿಕ ಕಾಮಗಾರಿಗಳಿಂದ ಇಂತಹ ಅವಗಢಗಳು ಸಂಭವಿಸುತ್ತಿವೆ. ಇದರಿಂದ ಸಾಕಷ್ಟು ಇಲಾಖೆಗಳಿಗೂ ಸಹ ತೀವ್ರ ಒತ್ತಡ ಹೆಚ್ಚಾಗುತ್ತಿದೆ. ಇಂತಹ ಅವಗಢಗಳಿಗೆ ಸ್ಮಾರ್ಟ್ಸಿಟಿ ಕಾಮಗಾರಿಗಳು ಹಾಗೂ ಇಂಜಿನಿಯರುಗಳ ಬೇಜವಾಬ್ದಾರಿ ಕಾರಣ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸ್ಥಳೀಯ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.