ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಆಗ್ರಹ ಇಂದಿನಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಗೆ ನಿರ್ಧಾರ-ಅಪ್ಪಯ್ಯಗೌಡ

ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಆಗ್ರಹ ಇಂದಿನಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಗೆ ನಿರ್ಧಾರ-ಅಪ್ಪಯ್ಯಗೌಡ

ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಆಗ್ರಹ
ಇಂದಿನಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಗೆ ನಿರ್ಧಾರ-ಅಪ್ಪಯ್ಯಗೌಡ

ಕೋಲಾರ: ವೃಂದ ನೇಮಕಾತಿ ನಿಯಮಗಳ ತಿದ್ದುಪಡಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈಗಾಗಲೇ ತರಬೇತಿಯನ್ನು ಬಹಿಷ್ಕರಿಸಿರುವ ಪ್ರಾಥಮಿಕ ಶಾಲಾ ಶಿಕ್ಷಕರು ಅ.೨೧ ರಿಂದ ೨೯ ರವರೆಗೂ ಕಪ್ಪುಪಟ್ಟಿ ಧರಿಸಿ ಶಾಲಾ ಕಾರ್ಯನಿರ್ವಹಿಸಿ ಸರ್ಕಾರದ ಗಮನ ಸೆಲೆಯಲು ನಿರ್ಧರಿಸಿರುವುದಾಗಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ ತಿಳಿಸಿದ್ದಾರೆ.
ಈ ಸಂಬಂಧ ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿರುವ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿಕ್ಷಕರ ಪ್ರಮುಖ ಬೇಕು ಬೇಡಿಕೆಗಳಾದ ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಗುರುಗಳಿಗೆ ೧೫,೨೦,೨೫ ವರ್ಷಗಳ ವೇತನ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿರುವುದಾಗಿ ತಿಳಿಸಿದ್ದಾರೆ. 
ಶಿಕ್ಷಕರ ಇನ್ನೂ ಹಲವಾರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಕಳೆದ ಹಲವಾರು ವರ್ಷಗಳಿಂದಲೂ ಅದರಲ್ಲೂ ಕಳೆದ ೩ ತಿಂಗಳ ಹಿಂದೆಯೇ ಈ ಕುರಿತು ಕಾಲಮಿತಿಯಲ್ಲಿ ಬೇಡಿಕೆ ಈಡೇರಿಸಲು ವಿನಂತಿಸಲಾಗಿತ್ತು. ಬೇಡಿಕೆಗಳು ಈಡೇರಿಸದಿದ್ದರೆ ಶಿಕ್ಷಕರ ಸಂಘಟನೆಯಿAದ ಅನಿವಾರ್ಯವಾಗಿ ಹೋರಾಟಕ್ಕೆ ಹೋಗುವ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ.
ಅದರಂತೆ ಅ.೪ ರಿಂದ ಶಿಕ್ಷಕರಿಗೆ ನೀಡಲಾಗುವ ವಿವಿಧ ತರಬೇತಿಗಳ್ನು ಬಹಿಷ್ಕರಿಸಲಾಗಿದ್ದು, ಅ.೨೧ ರಿಂದ ಕಪ್ಪುಪಟ್ಟಿ ಧರಿಸಿ ಶೈಕ್ಷಣಿಕ ಕಾರ್ಯ ನಿರ್ವಹಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು ಎಂದು ತಿಳಿಸಿದ್ದಾರೆ. 
ಇದಕ್ಕೂ ಸರ್ಕಾರ ಸ್ಪಂದಿಸದಿದ್ದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅ.೩೦ರಿಂದ ನ.೧೦ ರವರೆಗೂ  ಮಧ್ಯಾಹ್ನದ ಬಿಸಿಯೂಟದ ಮಾಹಿತಿಯನ್ನು ಆನ್‌ಲೈನ್‌ನಲ್ಲಿ  ಅಪ್‌ಡೇಟ್ ಮಾಡದೇ ಅಸಹಕಾರ ವ್ಯಕ್ತಪಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರ ನಮ್ಮ ಈ ಪ್ರತಿಭಟನೆಗೂ ಸ್ಪಂದಿಸದಿದ್ದರೆ ಮುಂದಿನ ಹಂತದ ಪ್ರತಿಭಟನೆಯಲ್ಲಿ ನ.೧೧ ರಿಂದ ೧೮ ರವರೆಗೂ ಸ್ಯಾಟ್ಸ್ ಅಪ್‌ಲೋಡ್ ಮಾಡದೇ ಅಸಹಕಾರ ತೋರಿ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 
ಇದಾದ ನಂತರ ಒಂದು ದಿನ ರಾಜ್ಯ ಮಟ್ಟದಲ್ಲಿ ಎಲ್ಲಾ ಪ್ರತಿನಿಧಿಗಳೂ, ಪದಾಧಿಕಾರಿಗಳು ಒಂದು ದಿನದ ರಾಜ್ಯಮಟ್ಟದ ರ‍್ಯಾಲಿ, ಧರಣಿ ಸತ್ಯಾಗ್ರಹ ನಡೆಸಿ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 
ಶಿಕ್ಷಕರು ನಿರಂತರವಾಗಿ ಮಕ್ಕಳ ಪಾಠ ಬೋಧನೆಗೆ ತೊಂದರೆಯಾಗದ ರೀತಿಯಲ್ಲಿ ಕಳೆದೆರಡು ತಿಂಗಳಿನಿAದ ಮಾಡಿರುವ ಹೋರಾಟ ಕುರಿತು ಹಾಗೂ ಅಂತಿಮವಾಗಿ ರಾಜ್ಯಮಟ್ಟದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲಾಗುವುದು. 
ಈ ಹಂತದಲ್ಲೂ ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ಇನ್ನು ಉಗ್ರವಾದ ಹೋರಾಟಗಳಾದ ತರಗತಿ ಬಹಿಷ್ಕಾರ, ಶಾಲಾ ಬಹಿಷ್ಕಾರದಂತಹ ಅಂತಿಮ ಹೋರಾಟಕ್ಕೆ ಸಂಘಟನೆಯಿAದ ರೂಪರೇಷೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಅಶ್ವಥ್ಥನಾರಾಯಣ, ಪ್ರಧಾನ ಕಾರ್ಯದರ್ಶಿ ಎಸ್.ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.