ಬಿಎಸ್‌ವೈ. ಆಪ್ತ ಉಮೇಶ್ ಮನೆಗೆ ಐಟಿ ದಾಳಿ ಬೆಂಗಳೂರಿನಲ್ಲಿ ೫೦ಕ್ಕೂ ಹೆಚ್ಚು ಕಡೆ ದಾಳಿ

umesh

ಬಿಎಸ್‌ವೈ. ಆಪ್ತ ಉಮೇಶ್ ಮನೆಗೆ ಐಟಿ ದಾಳಿ ಬೆಂಗಳೂರಿನಲ್ಲಿ ೫೦ಕ್ಕೂ ಹೆಚ್ಚು ಕಡೆ ದಾಳಿ


ಬಿಎಸ್‌ವೈ. ಆಪ್ತ ಉಮೇಶ್ ಮನೆಗೆ ಐಟಿ ದಾಳಿ

ಬೆಂಗಳೂರಿನಲ್ಲಿ ೫೦ಕ್ಕೂ ಹೆಚ್ಚು ಕಡೆ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ೫೦ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಭಾಷ್ಯಂ ಸರ್ಕಲ್‌ನಲ್ಲಿರುವ ಬಿ.ಎಸ್. ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮತ್ತು ಕಚೇರಿ ಸೇರಿ ೪ ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ ಪಿಎ ರೀತಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಆದರೆ, ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದಿಂದ ಇಳಿದ ಮೇಲೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಮೇಶ್‌ನನ್ನು ಅದೇ ಹುದ್ದೆಯಲ್ಲಿ ಮುಂದುವರಿಸಿದ್ದರು. ಬಿಎಸ್‌ವೈ ಅವರ ಬಳಿ ಕರ್ತವ್ಯಕ್ಕೆ ಉಮೇಶ್ ಅವರನ್ನು ನಿಯೋಜಿಸಲಾಗಿತ್ತು ಎಂದು ಹೇಳಲಾಗಿದೆ.
ಉಮೇಶ್ ಯಾರು?
ಶಿವಮೊಗ್ಗ ಜಿಲ್ಲೆ ಆಯನೂರು ನಿವಾಸಿಯಾಗಿರುವ ಉಮೇಶ್, ಆರಂಭದಲ್ಲಿ ಕೆಲಕಾಲ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಅವರ ಆಪ್ತ ಸಹಾಯಕನಾಗಿದ್ದರು. ೨೦೧೨ರಿಂದಲೂ ಯಡಿಯೂರಪ್ಪ ಅವರ ಆಪ್ತ ಸಹಾಯಕನಾಗಿದ್ದರು. ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ. ವಿಜಯೇಂದ್ರ ಅವರ ಅತ್ಯಾಪ್ತರಲ್ಲಿ ಉಮೇಶ್ ಒಬ್ಬರು. ಬಿಎಸ್‌ವೈ ಮುಖ್ಯಮಂತ್ರಿ ಆಗಿದ್ದಾಗ ಪಿಎ ಆಗಿದ್ದ ಉಮೇಶ್ ಅದಕ್ಕೂ ಮೊದಲು ಬಿಎಂಟಿಸಿ ಬಸ್ ಕಂಡಕ್ಟರ್ ಕಂ ಡ್ರೆöÊವರ್ ಆಗಿದ್ದ. ಯಲಹಂಕದ ಪುಟ್ಟೇನಹಳ್ಳಿ ಬಿಎಂಟಿಸಿ ಡಿಪೋದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 
ಉಮೇಶ್ ಮನೆಯಲ್ಲಿ ಅಪಾರ ಪ್ರಮಾಣದ ದಾಖಲೆಗಳನ್ನು ಐ.ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಚೀಲಗಳಲ್ಲಿ ಮೂಟೆ ಕಟ್ಟಿ ದಾಖಲೆಗಳನ್ನು ಕೊಂಡೊಯ್ಯಲಾಗಿದೆ. ಗುತ್ತಿಗೆದಾರರಿಗೆ ಸೇರಿದ ಸ್ಥಳಗಳಿಂದಲೂ ಬೃಹತ್ ಪ್ರಮಾಣದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ೩೦ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಮುಂದುವರಿದಿದೆ. ರಾಜಾಜಿನಗರದ ರಾಮಮಂದಿರ ಪ್ರದೇಶದಲ್ಲಿರುವ ಉಮೇಶ್ ಮನೆ, ನಾಗಸಂದ್ರದಲ್ಲಿ ಉಮೇಶ್ ಹೊಂದಿರುವ ಧವಳಗಿರಿ ಹೆಸರಿನ ಮನೆ, ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಲೆಕ್ಕ ಪರಿಶೋಧಕಿಯೊಬ್ಬರ ಮನೆ, ಗುತ್ತಿಗೆದಾರರಾದ ಡಿ.ವೈ. ಉಪ್ಪಾರ್, ಎ.ವೈ. ಕಟ್ಟೀಮನಿ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ. ಬೀದರ್‌ನ ಗುತ್ತಿಗೆದಾರ ಸುರೇಶ್ ಕಣಜಿ, ಬೆಂಗಳೂರಿನ ಸಹಕಾರ ನಗರದಲ್ಲಿರುವ ಸಿಮೆಂಟ್ ಮತ್ತು ಕಬ್ಬಿಣ ಪೂರೈಕೆ ಮಾಡುವ ರಾಹುಲ್ ಎಂಟರ್ ಪ್ರೆöÊಸಸ್ ಮೇಲೂ ಐ.ಟಿ ದಾಳಿ ನಡೆದಿದೆ.
ಬೆಂಗಳೂರು ನಗರದಲ್ಲಿ ೫೦ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆಸಿದ್ದು, ಕರ್ನಾಟಕ ಗೋವಾ ಘಟಕದ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
೫೦ಕ್ಕೂ ಹೆಚ್ಚು ಕಡೆ ದಾಳಿ
ಸುಮಾರು ೩೦೦ ಅಧಿಕಾರಿಗಳ ತಂಡ ಏಕಕಾಲದಲ್ಲಿ ಬೆಂಗಳೂರಿನ ೫೦ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉದ್ಯಮಿಗಳು ಮತ್ತು ಗುತ್ತಿಗೆದಾರರ ಮನೆಗಳು ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ತಂಡೋಪಾದಿಯಲ್ಲಿ ದಾಳಿಗಳನ್ನು ನಡೆಸಿದ್ದಾರೆ.
ದಾಳಿಗಾಗಿ ೧೨೦ ಕಾರುಗಳು, ೩೦೦ ಅಧಿಕಾರಿಗಳು ೧೦ಕ್ಕೂ ಹೆಚ್ಚು ಅಧಿಕಾರಿಗಳ ತಂಡ ೫೦ಕ್ಕೂ ಹೆಚ್ಚು ಕಡೆ ದಾಳಿ ಮಾಡಿದೆ. ಬೆಳಗ್ಗೆ ೫ ಗಂಟೆಯಿAದ ಶೋಧ ಕಾರ್ಯಕಾರ್ಯ ಶುರುವಾಗಿದೆ. ಮೊದಲೇ ನಿರ್ಧರಿಸಿದ್ದಂತೆ ೧೨೦ ಇನೋವಾ ಕಾರುಗಳನ್ನ ಐಟಿ ಅಧಿಕಾರಿಗಳನ್ನು ಬುಕ್ ಮಾಡಿಕೊಂಡಿದ್ದರು, ಅದರಂತೆ ಗುರುವಾರ ಬೆಳಗ್ಗೆ ಏಕಕಾಲದಲ್ಲಿ ೫೦ ಕಡೆ ೩೦೦ಕ್ಕೂ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಡಿಗೇಹಳ್ಳಿ ಸಹಕಾರ ನಗರದಲ್ಲಿರುವ ರಾಹುಲ್ ಎಂಟರ್ ಪ್ರೆöÊಸಸ್ ಮೇಲೆ ಐಟಿ ದಾಳಿ ನಡೆದಿದೆ. ರಾಹುಲ್ ಎಂಟರ್‌ಪ್ರೆöÊಸಸ್ ಸಿಮೆಂಟ್, ಸ್ಟೀಲ್ ಡೀಲರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮೂರು ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ಆಗಮಿಸಿರುವ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಅಂತೆಯೇ ಬೆಂಗಳೂರಿನ ಹೆಗಡೆ ನಗರದಲ್ಲಿರುವ ಎನ್.ಆರ್. ರಾಯಲ್ ಅಪಾರ್ಟ್ಮೆಂಟ್ ನಲ್ಲಿರುವ ಚಾರ್ಟೆಡ್ ಅಕೌಂಟೆAಟ್ ಅಮಲಾ ಮನೆ ಮೇಲೆ ಐಟಿ ದಾಳಿ ನಡೆದಿದೆ. 


ದಾಳಿಯಲ್ಲಿ ಸರ್ಕಾರದ ಪಾತ್ರವಿಲ್ಲ: ಸಿಎಂ
ಇನ್ನು ಐಟಿ ದಾಳಿ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಹಲವೆಡೆ ಐಟಿ ದಾಳಿಯಾದ ಕುರಿತು ಮಾಹಿತಿ ಬಂದಿದೆ. ಆದರೆ ಈ ಬಗ್ಗೆ ಸಂಪೂರ್ಣ ಮಾಹಿತಿ ಲಭಿಸಿಲ್ಲ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದೇನೆ. ಈ ದಾಳಿಗೂ ಸರ್ಕಾರಕ್ಕೂ ಯಾವುದೇ ಸಂಬAಧವಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದೇ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಮೈಸೂರಿನಲ್ಲಿ ಬೊಮ್ಮಾಯಿ ಹೇಳಿದರು.