ಮಹಿಳೆಯರ ಮೇಲೆ ದೌರ್ಜನ್ಯ ನಿಯಂತ್ರಣಕ್ಕೆ ದೂರು ಸಮಿತಿ ರಚಿಸಿ: ಡಾ. ಕೆ. ವಿದ್ಯಾಕುಮಾರಿ

vidya kumari ceo

ಮಹಿಳೆಯರ ಮೇಲೆ ದೌರ್ಜನ್ಯ ನಿಯಂತ್ರಣಕ್ಕೆ ದೂರು ಸಮಿತಿ ರಚಿಸಿ: ಡಾ. ಕೆ. ವಿದ್ಯಾಕುಮಾರಿ


ಮಹಿಳೆಯರ ಮೇಲೆ ದೌರ್ಜನ್ಯ ನಿಯಂತ್ರಣಕ್ಕೆ
ದೂರು ಸಮಿತಿ ರಚಿಸಿ: ಡಾ. ಕೆ. ವಿದ್ಯಾಕುಮಾರಿ


ತುಮಕೂರು: ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳಲ್ಲಿ ದೂರು ಸಮಿತಿ ರಚಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.


ಜಿಲ್ಲಾ ಬಾಲಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ 2013 ಅಧಿನಿಯಮ ಮತ್ತು ಸಖಿ-ಒನ್ ಸ್ಟಾಫ್ ಸೆಂಟರ್ ಘಟಕದ ಸೇವೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಸ್ತಿçÃ-ಪುರುಷರಿಬ್ಬರಿಗೂ ಸಮಾನ ಅವಕಾಶ ಇದ್ದು, ಕೆಲಸದ ಸ್ಥಳದಲ್ಲಿ ಅಲ್ಲದೆ ಬೇರೆ ಕಡೆಯೂ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಸರ್ಕಾರಿ ಕಚೇರಿಗಳಲ್ಲಿ ದೌರ್ಜನ್ಯ ನಡೆದರೆ ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ದೂರು ಸಮಿತಿಗೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಂತರಿಕ ದೂರು ಸಮಿತಿಗೆ ದೂರನ್ನು ನೀಡಬೇಕು ಎಂದರು.


ಸ್ಥಳೀಯ ದೂರು ನಿವಾರಣಾ ಸಮಿತಿ ಅಧ್ಯಕ್ಷೆ ಶಾಲಿನಿ ಹೆಚ್.ಆರ್. ಮಾತನಾಡಿ ಹತ್ತು ಮಂದಿಗಿAತ ಮೇಲ್ಪಟ್ಟ ಮಹಿಳೆಯರು ಒಂದೇ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ ಅಲ್ಲಿ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಬೇಕು. ಸ್ಥಳೀಯ ದೂರು ಸಮಿತಿಯಲ್ಲಿ ಅವರ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಚರ್ಚಿಸಬೇಕು ಎಂದು ಸಲಹೆ ನೀಡಿದರು.


ಸಖಿ ಘಟಕದ ಕಾನೂನು ಸಲಹೆಗಾರರಾದ ಮಾಲಿನಿ ಮಾತನಾಡಿ, ಸಮಾಜದಲ್ಲಿ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ ನೆರವು, ಕಾನೂನು ನೆರವು, ಆಪ್ತ ಸಮಾಲೋಚನೆಯೊಂದಿಗೆ ತಾತ್ಕಾಲಿಕ ವಸತಿ ಸೌಲಭ್ಯವನ್ನು ಸಖಿ ಒನ್ ಸ್ಟಾಫ್ ಸೆಂಟರ್ ಒದಗಿಸುತ್ತಿದ್ದು, ಸಖಿ ಮಹಿಳೆಯರ ಆಪ್ತ ಗೆಳತಿಯಾಗಿ ನೊಂದ ಮಹಿಳೆಯರಿಗೆ ನೀಡುವ ನೆರವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.


ಜಿಲ್ಲಾ ನಿರೂಪಣಾಧಿಕಾರಿ ಎಸ್. ಶಿವಕುಮಾರಯ್ಯ ಮಾತನಾಡಿ, ಸಿಡಿಪಿಒ ಜೊತೆಗೂಡಿ ತಾಲ್ಲೂಕು ಮಟ್ಟದ ಸರ್ಕಾರಿ ಕಚೇರಿಗಳಲ್ಲಿ ಸಭೆ ನಡೆಸಿ ಲೈಂಗಿಕ ಕಿರುಕುಳದ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸಬೇಕು ಎಂದರು.


ಸAಪನ್ಮೂಲ ವ್ಯಕ್ತಿ ಹಾಗೂ ವಕೀಲರಾದ ಸಾ.ಚಿ. ರಾಜ್‌ಕುಮಾರ್ ಮಾತನಾಡಿ, ಮಹಿಳೆಯರನ್ನು ಕೆಟ್ಟ ದೃಷ್ಟಿಯಲ್ಲಿ ನೋಡುವ ನೌಕರರ ಮನವನ್ನು ಪರಿವರ್ತಿಸಬೇಕು. ದೌರ್ಜನ್ಯಕ್ಕೊಳಗಾದ ಮಹಿಳಾ ನೌಕರರು 181ಕ್ಕೆ ಕರೆ ಮಾಡಿ ಸಮಸ್ಯೆ ವ್ಯಕ್ತಪಡಿಸಬಹುದು. ಇವರು ನೀಡುವ ದೂರನ್ನು ಹೊರಗಡೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಬಾರದು ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ಆರ್.ಜಿ, ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್.ಎಂ. ದಿನೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.