ನಗರದಲ್ಲಿ ಸಿಎಂ ಬೊಮ್ಮಾಯಿ ಕನಿಷ್ಟ 14 ಸ್ಥಾನ ಗೆಲ್ಲುತ್ತೇವೆ

we will win 14 mlc seats cm bommai

ನಗರದಲ್ಲಿ ಸಿಎಂ ಬೊಮ್ಮಾಯಿ ಕನಿಷ್ಟ 14 ಸ್ಥಾನ ಗೆಲ್ಲುತ್ತೇವೆ


ನಗರದಲ್ಲಿ ಸಿಎಂ ಬೊಮ್ಮಾಯಿ
ಕನಿಷ್ಟ 14 ಸ್ಥಾನ ಗೆಲ್ಲುತ್ತೇವೆ


ತುಮಕೂರು: ಪರಿಷತ್ ಚುನಾವಣೆಯಲ್ಲಿ ರಾಜ್ಯದ 25 ಸ್ಥಾನಗಳಲ್ಲಿ 20 ಸ್ಥಾನಗಳಿಗೆ ನಾವು ಸ್ಪರ್ಧಿಸಿದ್ದೇವೆ. ರಾಜ್ಯದೆಲ್ಲೆಡೆ ಒಳ್ಳೆಯ ವಾತಾವರಣವಿದ್ದು ಕನಿಷ್ಟ 14 ಸ್ಥಾನಗಳಲ್ಲಿ ಜಯಗಳಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಕೋರ್ ಕಮಿಟಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಪದಾಧಿಕಾರಿಗಳ ಸಭೆಯಲ್ಲಿ ಚುನಾವಣಾ ಪ್ರಚಾರ ಮತ್ತು ಜವಾಬ್ದಾರಿಗಳ ಹಂಚಿಕೆ ಬಗ್ಗೆ ಚರ್ಚೆ ನಡೆಸಲಾಗಿದೆ. ಪ್ರಸ್ತುತ ಕಂಡು ಬರುತ್ತಿರುವ ವಾತಾವರಣದಲ್ಲಿ ನಮ್ಮ ಅಭ್ಯರ್ಥಿ ಲೋಕೇಶ್ ಗೌಡ ಜಯಗಳಿಸಲಿದ್ದಾರೆ ಎಂದು ತಿಳಿಸಿದರು.


ಈಗಾಗಲೇ ಬಹುತೇಕ ಎಲ್ಲ ತಾಲೂಕುಗಳಲ್ಲಿ ಒಂದು ಸುತ್ತಿನ ಪ್ರಚಾರ ನಡೆದಿದ್ದು, ಇನ್ನು ಮೇಲೆ ಪ್ರಚಾರ ಬಿರುಸು ಪಡೆದುಕೊಳ್ಳಲಿದೆ. ನಮ್ಮ ಪಕ್ಷದ ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಕ್ರಿಯವಾಗಿ ಪ್ರಚಾರ ನಡೆಸಲಿದ್ದಾರೆ. ರಾಜ್ಯಮಟ್ಟದ ನಾಯಕರೂ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


ಪದಾಧಿಕಾರಿಗಳು ಹಾಗೂ ಕೋರ್ ಕಮಿಟಿ ಸಭೆ:


ಇದಕ್ಕೂ ಮುನ್ನ ದಾವಣಗೆರೆಯಲ್ಲಿ ಸಂವಿಧಾನ ದಿನ ಆಚರಣೆಯಲ್ಲಿ ಭಾಗವಹಿಸಿದ ನಂತರ ಚಿತ್ರದುರ್ಗದಲ್ಲಿ ಬಿಜೆಪಿ ನಾಯಕರ ಸಭೆ ನಡೆಸಿ ಶುಕ್ರವಾರ ರಾತ್ರಿ ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿರಾ ರಸ್ತೆಯಲ್ಲಿರುವ ಸ್ನೇಹ ಸಂಗಮ ಸೌಹಾರ್ದ ಸಭಾಂಗಣದಲ್ಲಿ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದರು.


ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಹಲವು ಕಾರ್ಯತಂತ್ರಗಳ ಬಗ್ಗೆ ಸಲಹೆ ನೀಡಿದರು.


ನಂತರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ನಾಯಕರೊಂದಿಗೆ ಕೋರ್ ಕಮಿಟಿ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಬಿ.ಸಿ. ನಾಗೇಶ್, ಬೈರತಿ ಬಸವರಾಜು, ಶಿವಯೋಗಿಸ್ವಾಮಿ, ಜಿಲ್ಲಾ ಬಿಜೆಪಿ ನಾಯಕರಾದ ನಾಗೇಶ್, ಸಂಸದ ಜಿ.ಎಸ್. ಬಸವರಾಜ್, ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ರಾಜೇಶ್‌ಗೌಡ, ವಿಧಾನಪರಿಷತ್ ಸದಸ್ಯ ಚಿದಾನಂದ್ ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುರೇಶ್‌ಗೌಡ, ಮುನಿರಾಜುಗೌಡ, ಎನ್. ರವಿಕುಮಾರ್, ನಾರಾಯಣಸ್ವಾಮಿ ಸೇರಿದಂತೆ ಹಲವರು  ಭಾಗವಹಿಸಿದ್ದರು.


ಸೊಗಡು ಶಿವಣ್ಣ ನಿವಾಸಕ್ಕೆ ಭೇಟಿ:


ಚಿತ್ರದುರ್ಗದಿಂದ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ, ಸಭೆಗೂ ಮುನ್ನ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಸೊಗಡು ಶಿವಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಸೌಹಾರ್ದಯುತವಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ. ನಾಗೇಶ್, ಬೈರತಿ ಬಸವರಾಜು ಮತ್ತು ಶಿವಯೋಗಿಸ್ವಾಮಿ ಮುಖ್ಯಮಂತ್ರಿಗಳೊAದಿಗಿದ್ದರು ಎಂದು ತಿಳಿದು ಬಂದಿದೆ.